ಗದಗ: ಕುಡಿಯುವ ನೀರಿನ ಅವ್ಯವಸ್ಥೆ ಗಂಭೀರವಾಗಿ ಪರಿಗಣಿಸಲಾಗಿದೆ. ಈ ಹಿನ್ನೆಲೆಯಲ್ಲಿ ನೀರಿನ ಪೂರೈಕೆಗೆ ಸಂಬAಧಿಸಿದAತೆ ಕಾರ್ಯಗಳ ಪಟ್ಟಿ ತಯಾರು ಮಾಡಲಾಗಿದೆ. ಶೀಘ್ರವೇ ನಿಯಮಿತ ನೀರು ಪೂರೈಕೆಗೆ ಸೂಚಿಸಲಾಗಿದೆ ಎಂದು ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಚ್.ಕೆ.ಪಾಟೀಲ ಅವರು ತಿಳಿಸಿದರು