ಜಿಲ್ಲೆಯಲ್ಲಿನ ನಗರದ ಹಾಗೂ ಗ್ರಾಮೀಣ ಪ್ರದೇಶಗಳ ಶಾಲಾ ಮೂತ್ರಾಲಯ ಹಾಗೂ ಶೌಚಾಲಯಗಳ ಸ್ಥಿತಿಗತಿಗಳನ್ನು ಪಿಪಿಟಿ ಮೂಲಕ ವೀಕ್ಷಣೆ ಮಾಡಿ ನಂತರ ಸಚಿವರು ಮಾತನಾಡಿ ತಮ್ಮ ತಮ್ಮ ವ್ಯಾಪ್ತಿಯಲ್ಲಿ ಬರುವ ಶಾಲಾ ಶೌಚಾಲಯಗಳ ದುರಸ್ತಿ ಬಗೆಗಿನ ಪಟ್ಟಿಯನ್ನು ಮಾಡಬೇಕು. ಶಾಲಾ ಶೌಚಾಲಯ ಹಾಗೂ ಮೂತ್ರಾಲಯಗಳಿಗೆ ನೀರಿನ ಪೂರೈಕೆ ಸಮಸ್ಯೆ ಇರುವ ಕುರಿತು ಪಟ್ಟಿ ಮಾಡಿ ಒದಗಿಸಬೇಕೆಂದರು. ಶಾಲೆಗಳಲ್ಲಿನ ಹಾಗೂ ಶೌಚಾಲಯ ಗಳಲ್ಲಿ ಸ್ವಚ್ಛತೆಗೆ ಆದ್ಯತೆ ನೀಡಬೇಕು. ಶೌಚಾಲಯದ ದುರಸ್ತಿಗೆ 10,000 ರೂ. ಒಳಗೆ, 10,000 ರೂ. ದಿಂದ 50,000 ಒಳಗಡೆ, 50,000 ರಿಂದ 70,000 ಒಳಗಡೆ ಹಾಗೂ 70,000 ದಿಂದ 1,00,000 ಒಳಗೆ ದುರಸ್ತಿ ವೆಚ್ಚ ಇರುವ ಶಾಲಾ ಶೌಚಾಲಯಗಳ ಪಟ್ಟಿಯನ್ನು ತಯಾರಿಸಿ ಏಪ್ರಿಲ್ 18 ರಂದು ಜರುಗುವ ಸಭೆಗೆ ಹಾಜರಾಗುವಂತೆ ನಿರ್ದೇಶಿಸಿದರು.