ಸಚಿವ ಎಚ್.ಕೆ.ಪಾಟೀಲ ಅವರಿಂದ ಕಾಮಗಾರಿಗೆ ಭೂಮಿಪೂಜೆ

WhatsApp Image 2024-07-07 at 6.46.49 PM
Published on

ಗದಗ: ಕೃಷಿ ಉತ್ಪನ್ನ ಸಮಿತಿಯ ಮುಖ್ಯರಸ್ತೆ ,ಚರಂಡಿ,ವಿದ್ಯುತಿಕರಣ ಸೌಕರ್ಯ ಗಳನ್ನು  ಆರ್ ಐ ಡಿ ಎಫ -29 ಯೋಜನೆಯಡಿ ಅಭಿವೃದ್ಧಿಪಡಿಸುವ ಅಂದಾಜು 3ಕೋಟಿ  ಲಕ್ಷ ಮೊತ್ತದ ಕಾಮಗಾರಿಗೆ ರಾಜ್ಯದ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರ, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರು ಭೂಮಿಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ   ಮಾಜಿ ಮುಖ್ಯಮಂತ್ರಿ ಮತ್ತು ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ, ವಿಧಾನ ಪರಿಷತ್ ಶಾಸಕ ಎಸ್ ವಿ ಸಂಕನೂರ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕಬರಸಾಬ ಬಬರ್ಜಿ, ಜಿಲ್ಲಾ ಗ್ಯಾರಂಟಿ ಯೊಜನೆಗಳ ಸಮಿತಿ ಅಧ್ಯಕ್ಷ ಬಿಬಿ ಅಸೂಟಿ,  ತಾಲೂಕು ಅಧ್ಯಕ್ಷ ಅಶೋಕ ಮಂದಾಲಿ  ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net