

ಗದಗ: ಸಹಕಾರಿ ರಂಗದ ಭೀಷ್ಮ ದಿವಂಗತ ಶ್ರೀ ಕೆ.ಎಚ್. ಪಾಟೀಲರ ಜನ್ಮಶತಮಾನೋತ್ಸವ ಹಿನ್ನೆಲೆಯಲ್ಲಿ ರವಿವಾರ ಗದಗ ಜಿಲ್ಲೆಯ ಹುಲಕೋಟಿ ಗ್ರಾಮದಲ್ಲಿರುವ ಗ್ರಾಮ ಪಂಚಾಯಿತಿಯ ನೂತನ ಕಟ್ಟಡದ ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎಚ್. ಕೆ. ಪಾಟೀಲ ಅವರು ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾಜಿ ಶಾಸಕ ಡಿ.ಆರ್ ಪಾಟೀಲ, ಜಿಲ್ಲಾ ಪಂಚಾಯತ್ ಸಿಇಓ ಭರತ್ ಅವರು ಸೇರಿದಂತೆ ಸ್ಥಳೀಯ ಮುಖಂಡರು, ಗ್ರಾಮ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು.