ಸುರೇಖಾ ಪಿಳ್ಳಿ ಮಾತನಾಡಿ, ಅರಿವು ಫೌಂಡೇಶನ್ ನಿಂದ ಅನೇಕ ಸಾಮಾಜಿಕ ಕಾರ್ಯಕ್ರಮಗಳನ್ನು ಮಾಡಿಕೊಂಡು ಬರಲಾಗಿದೆ. ಉಚಿತ ಆರೋಗ್ಯ ಶಿಬಿರ, ಗ್ರಾಮೀಣ ಕ್ರೀಡಾಕೂಟ, ಕುಟುಂಬ ಸಲಹಾ ಕೇಂದ್ರಗಳನ್ನು ಸ್ಥಾಪಿಸುವುದು, ಉಚಿತ ಕಾನೂನು ಶಿಬಿರ, ಪ್ರತಿಭಾ ಪುರಸ್ಕಾರ, ಸಸಿ ನೆಡುವ ಕಾರ್ಯಕ್ರಮ ಸೇರಿದಂತೆ ಹಲವಾರು ಕಾರ್ಯಕ್ರಮಗಳನ್ನು ಮಾಡಿಕೊಂಡು ಬರಲಾಗಿದೆ. ಕಾರ್ಯಕ್ರಮ ಯಶಸ್ವಿ ಆಗಲು ಪದಾಧಿಕಾರಿಗಳ ಶ್ರಮ ಇದೆ. ಸದಾನಂದ ಪಿಳ್ಳಿಯವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ನಾವು ಈ ಎಲ್ಲ ಕಾರ್ಯಕ್ರಮಗಳನ್ನು ಮಾಡಿಕೊಂಡು ಬರುತ್ತಿದ್ದೇವೆ ಎಂದರು.