ಗದಗ: ರಾಜ್ಯ ಸರ್ಕಾರ ರೈತರನ್ನು ಕಡೆಗಣಿಸಿದೆ. ರೈತರ ಯಾವುದೇ ಸಮಸ್ಯೆಗಳಿಗೆ ಕಿವಿಗೊಡದ ಈ ಸರ್ಕಾರ ರೈತರ ಪಾಲಿಗೆ ಕಿವುಡ ಕುರುಡ ಹಾಗೂ ಮೂಖ ಸರಕಾರವಾಗಿದೆ ಎಂದು ಜೆಡಿಎಸ್ ಪಕ್ಷದ ರಾಜ್ಯ ವಕ್ತರ ವೆಂಕನಗೌಡ ಗೋವಿಂದಗೌಡ್ರ ಹೇಳಿದರು. ಅವರು ಗದಗ ಜಿಲ್ಲಾಧಿಕಾರಿಗಳ ಕಾರ್ಯಾಲಯದ ಎದುರಿಗೆ ಬಗರ ಹುಕುಂ ಜಮೀನ ಹಕ್ಕು ಪತ್ರ ನೀಡಬೇಕೆಂದು ಒತ್ತಾಯಿಸಿ ರೈತರು ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ಮಾತನಾಡುತ್ತಿದ್ದರು. ಜೆಡಿಎಸ್ ಪಕ್ಷ ಮಾತ್ರ ರೈತರ ಹಿತ ಕಾಯುತ್ತಾ ಬಂದಿದೆ ಮುಂದೆಯೂ ಕಾಯುತ್ತದೆ. ಜೆಡಿಎಸ್ ಎಂದರೆ ರೈತರು, ರೈತರು ಎಂದರೆ ಜೆಡಿಎಸ್ ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು. ರೈತರ ಹೋರಾಟಕ್ಕೆ ಜೆಡಿಎಸ್ ಪಕ್ಷ ಹೆಗಲುಕೊಟ್ಟು ನಿಲ್ಲುತ್ತದೆ, ಈ ಹೋರಾಟ ಕೊನೆಗೊಳ್ಳುವವರೆಗೂ ರೈತರು ಯಾವುದೇ ಆಶ್ವಾಸನೆಗಳಿಗೆ ಮರಳಾಗಬಾರದೆಂದು ಅವರು ಕರೆ ನೀಡಿದರು. ಚುನಾವಣೆಗೆ ಮುಂಚೆ ಜಿಲ್ಲಾ ಉಸ್ತುವಾರಿ ಸಚಿವರು ನೀಡಿದ ಭರವಸೆಯನ್ನು ಈಡೇರಿಸಬೇಕೆಂದು ವೆಂಕನಗೌಡ ಆರ್ ಗೋವಿಂದಗೌಡ್ರ ಈ ಸಂದರ್ಭದಲ್ಲಿ ಒತ್ತಾಯಿಸಿದರು. ರೈತರನ್ನು ಸಂತೈಸಲು ಕೇವಲ ಭಾಷಣ ಮಾಡಿ ಹೋದರೆ ಆಗುವುದಿಲ್ಲ ರೈತರ ಕಾಳಜಿ ಇದ್ದರೆ ಅವರ ಸಮಸ್ಯೆಗಳಿಗೆ ಸ್ಪಂದಿಸಿ ಅದಕ್ಕೆ ಪರಿಹಾರ ನೀಡಬೇಕೆಂದು ಅವರು ಒತ್ತಾಯಿಸಿದರು. ರೈತ ನೀಲಕಂಠನಿದ್ದ ಹಾಗೆ ಜಗತ್ತಿನಲ್ಲಿ ಯಾವುದೇ ಸಮಸ್ಯೆ ಎದುರಾದರು ಅದು ಮೊದಲು ತೊಟ್ಟುವುದೇ ರೈತರಿಗೆ. ರೈತ ಎಲ್ಲವನ್ನು ನುಂಗಿಕೊಂಡು ಯಾವುದೇ ಜಾತಿ,ಮತ, ಭೇದವಿಲ್ಲದೆ ಜನರ ಹೊಟ್ಟೆಯನ್ನು ತುಂಬುತ್ತಿದ್ದಾನೆ ಇಂತಹ ತ್ಯಾಗ ಜೀವಿಗಳಿಗೆ ಎಲ್ಲ ರೀತಿಯ ಸಂಕಟ ಬರುವುದು ವಿಷಾದನೀಯ ಎಂದು ಹೇಳಿದರು. ನಮ್ಮ ರೈತರ ಸಮಸ್ಯೆಯ ಬಗ್ಗೆ ಪಕ್ಷದ ವರಿಷ್ಠರೊಂದಿಗೆ, ನಾಯಕರೊಂದಿಗೆ ಚರ್ಚಿಸಿ ಈ ಹೋರಾಟಕ್ಕೆ ಜಯ ಸಿಗುವಂತಾಗಲು ಪ್ರಯತ್ನಿಸುವುದಾಗಿ ಜೆಡಿಎಸ್ ಪಕ್ಷದ ರಾಜ್ಯ ವಕ್ತಾರ ವೆಂಕನಗೌಡ ಆರ್ ಗೋವಿಂದಗೌಡ್ರು ಹೇಳಿದರು.ಈ ಸಂದರ್ಭದಲ್ಲಿ ಮಾತನಾಡಿದ ಜೆಡಿಎಸ್ ಪಕ್ಷದ ಕಾನೂನು ಘಟಕದ ಜಿಲ್ಲಾಧ್ಯಕ್ಷರಾದ ಜೋಸೆಫ್ ಉದುಜಿ ರೈತರು ಯಾವುದೇ ಕಾರಣಕ್ಕೂ ಎದೆಗುಂದದೆ ಮುನ್ನುಗ್ಗಬೇಕು ರೈತರ ಬೇಡಿಕೆಗಳು ನ್ಯಾಯ ಸಮ್ಮತವಾಗಿದ್ದು ಸರಕಾರ ಈ ಕೂಡಲೇ ಇದಕ್ಕೆ ಸ್ಪಂದಿಸಬೇಕೆಂದು ಅವರು ಒತ್ತಾಯಿಸಿದರು. ಯಾವುದೇ ರೀತಿ ಕಾನೂನಿನ ಹೋರಾಟಕ್ಕೆ ಕಾನೂನಿನ ನೆರವಿಗೆ ಜೆಡಿಎಸ್ ಪಕ್ಷ ಸದಾ ರೈತರೊಂದಿಗೆ ಇರುತ್ತದೆ ಎಂದು ಅವರು ಹೋರಾಟಗಾರರಿಗೆ ಭರವಸೆ ನೀಡಿದರು ಈ ಸಂದರ್ಭದಲ್ಲಿ ಬಸವರಾಜ ಅಪ್ಪಣ್ಣವರ, ರಮೇಶ್ ಹುಣಸಿಮರದ, ಸಂತೋಷ್ ಪಾಟೀಲ, ಪ್ರಫುಲ್ ಪುಣೆಕರ, ಜಿ. ಕೆ ಕೊಳ್ಳಿಮಠ, ಶರಣಪ್ಪ ಹೂಗಾರ, ಸಿದ್ದಯ್ಯ ಹೊಂಬಾಳಿ ಮಠ ಶ್ರೀಮತಿ ಮಂಜುಳಾ ಮೇಟಿ,ಶ್ರೀಮತಿ ರಾಜೇಶ್ವರಿ ಹೂಗಾರ, ಶರಣಪ್ಪ ತೂಲಿ, ಅಭಿಷೇಕ್ ದೇಸಾಯಿ, ಶ್ರೀಮತಿ ಲಲಿತಾ ಕಲ್ಲಪ್ಪನವರ, ಅಭಿಷೇಕ್ ಕಂಬಳಿ, ಜಯರಾಜ ವಾಲಿ ಹಾಗೂ ಪಕ್ಷದ ಮುಖಂಡರು ರೈತರ ಹೋರಾಟಕ್ಕೆ ಬೆಂಬಲ ನೀಡಿದರು