ಮಾ. 16ರಂದು ಕೆ.ಎಚ್. ಪಾಟೀಲ ಜನ್ಮಶತಮಾನೋತ್ಸವ ಕಾರ್ಯಕ್ರಮ

14GDG04
Published on
Gadag: ಕೆ.ಎಚ್. ಪಾಟೀಲ ಜನ್ಮಶತಮಾನೋತ್ಸವ ಕಾರ್ಯಕ್ರಮವನ್ನು ಮಾ. 16ರಂದು ನಗರದ ಕಾಟನ್ ಸೇಲ್ ಸೊಸೈಟಿ ಆವರಣದಲ್ಲಿ ಬೆಳಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಗಮಿಸಲಿದ್ದಾರೆ ಎಂದು ಮಾಜಿ ಶಾಸಕ ಡಿ.ಆರ್. ಪಾಟೀಲ ಹೇಳಿದರು.
ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಎಪಿಎಂ ಯಲ್ಲಿ ಮೊದಲು ಕೃಷಿ ಉತ್ಪನ್ನಗಳ ಖರೀದಿಗೆ ಟೆಂಡರ್ ಪ್ರಕ್ರಿಯೆ ಇರಲಿಲ್ಲ. ರೈತರ ಉತ್ಪನ್ನಗಳಿಗೆ ಸೂಕ್ತ ಬೆಲೆ ಸಿಗಲು ಟೆಂಡರ್ ಪ್ರಕ್ರಿಯೆಯನ್ನು ಮೊದಲು ಕೆ.ಎಚ್. ಪಾಟೀಲ ಆರಂಭಿಸಿದರು. ಗ್ರಾಮೀಣ ಭಾಗದ ರೈತರ ಆರ್ಥಿಕ ಅಭಿವೃದ್ಧಿಗೆ ಕೆ.ಎಚ್. ಪಾಟೀಲ ಅವರ ಕೊಡುಗೆ ಅಪಾರವಾಗಿದೆ. ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಸರ್ಕಾರದ ಹಲವು ಶಾಸಕರು, ಸಚಿವರು ಭಾಗವಹಿಸಲಿದ್ದಾರೆ. ಎಚ್.ಕೆ. ಪಾಟೀಲ ಅದ್ಯಕ್ಷತೆ ವಹಿಸಲಿದ್ದಾರೆ ಎಂದು ತಿಳಿಸಿದರು.
ಕೆ.ಎಚ್. ಪಾಟೀಲರು ಗದಗ ಜಿಲ್ಲೆಗೆ ಮೂರು ವಿಷಯಗಳನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡಿದ್ದಾರೆ. ಗದಗ ನಗರಕ್ಕೆ ತುಂಗಭದ್ರಾ ನೀರು ಪೂರೈಕೆ, ಗದಗ ಪ್ರತ್ಯೇಕ ಜಿಲ್ಲೆ ಹಾಗೂ ನಗರದ ಮಾನ್ವಿ ಎಲೆಕ್ಟ್ರಿಕ್ ಕಂಪನಿ ರಾಷ್ಟ್ರೀಕೃತ ಆಗಬೇಕು ಎಂಬುದು ಅವರ ಆಶಯ ಆಗಿತ್ತು. ಅವರ ಅಪೇಕ್ಷೆಯಂತೆ ಎಲ್ಲ ಕಾರ್ಯಗಳು ನಡೆದವು ಎಂದರು.
ಕಾರ್ಯಕ್ರಮದಲ್ಲಿ ಜೆ.ಟಿ. ದೇವೇಗೌಡ, ಜಿ.ಎಸ್. ಪಾಟೀಲ, ಈಶ್ವರ ಖಂಡ್ರೆ, ಶರಣಪ್ರಕಾಶ ಪಾಟೀಲ, ಬಿ.ಎಲ್. ಶಂಕರ್, ಸಂತೋಷ ಲಾಡ್, ಶಿವಾನಂದ ಪಾಟೀಲ, ರುದ್ರಪ್ಪ ಲಮಾಣಿ ಸೇರಿದಂತೆ ಹಲವು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಎಲ್.ಡಿ. ಚಂದಾವರಿ, ವಾಸಣ್ಣ ಕುರಡಗಿ, ಬಿ. ಬಿ. ಅಸೂಟಿ, ಗುರುಣ್ಣ ಬಳಗಾನೂರ, ಅಶೋಕ ಮಂದಾಲಿ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net