ಗದಗ: ಕಾನೂನು ಸೇವೆಗಳ ಪ್ರಾಧಿಕಾರ ಕಾರ್ಯನಿರ್ವಹಿಸುತ್ತಿದ್ದು,ಈ ಮೂಲಕ ಜನರಲ್ಲಿ ಕಾನೂನು ಅರಿವು ಮೂಡಿಸುವುದರ ಜೊತೆಗೆ, ಬಡವರಿಗೆ,ನಿರ್ಗತಿಕರಿಗೆ ಉಚಿತವಾಗಿ ಕಾನೂನು ನೆರವನ್ನು ನೀಡುತ್ತಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರನ್ಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಬಸವರಾಜ ಅವರು ನುಡಿದರು.
ನಗರದ ಎಸ್.ಎ. ಮಾನ್ವಿ ಕಾನೂನು ಮಹಾವಿದ್ಯಾಲಯದಲ್ಲಿ ರಾಷ್ಟಿçÃಯ ಕಾನೂನು ಸೇವೆಗಳ ಪ್ರಾಧಿಕಾರ, ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ನ್ಯಾಯವಾದಿಗಳ ಸಂಘ ಹಾಗೂ ಕೆ.ಎಲ್.ಇ ಸಂಸ್ಥೆಯ ಎಸ್.ಎ. ಮಾನ್ವಿ ಕಾನೂನು ಮಹಾವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ಜರುಗಿದ ರಾಷ್ಟಿçÃಯ ಕಾನೂನು ಸೇವೆಗಳ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನಮ್ಮ ಸಂವಿಧಾನದಲ್ಲಿ ಅಶಕ್ತರು, ದುರ್ಬಲರು ಸೇರಿದಂತೆ ಎಲ್ಲರಿಗೂ ಕಾನೂನು ದೊರೆಯಬೇಕು ಎಂಬ ಆಶಯವನ್ನು ರಾಷ್ಟಿçÃಯ ಕಾನೂನು ಸೇವೆಗಳ ಪ್ರಾಧಿಕಾರ ನೆರವೇರಿಸುತ್ತಿದೆ ಎಂದು ತಿಳಿಸಿದರು.
ಜಿಲ್ಲಾಕಾನೂನುಸೇವೆಗಳಪ್ರಾಧಿಕಾರದಸದಸ್ಯಕಾರ್ಯದರ್ಶಿಸಿ.ಎಸ್.ಶಿವನಗೌಡ್ರ ಅವರು ಮಾತನಾಡಿ, 1995 ನೇನ. 9 ರಂದು ದೇಶದಲ್ಲಿ ಲೀಗಲ್ಸರ್ವೀಸ್ ಆ್ಯಕ್ಟಾ÷್ಜ ಜಾರಿಗೆ ಬಂದಿದ್ದು, ಈ ಹಿನ್ನೆಲೆಯಲ್ಲಿ ಪ್ರತಿ ವರ್ಷ. ನವೆಂಬರ್ 9 ರಂದು ದೇಶಾದ್ಯಂತ ಕಾನೂನು ಸೇವೆಗಳ ದಿನಾಚರಣೆ ಆಚರಿಸಲಾಗುತ್ತದೆ. ಕಾನೂನು ಸೇವೆಗಳ ಪ್ರಾಧಿಕಾರದ ವ್ಯಾಪ್ತಿ ಬಹಳ ವಿಶಾಲವಾಗಿದ್ದು, ಜನರಲ್ಲಿ ನಿರಂತರವಾಗಿ ಲೀಗಲ್ ಏಡ್ಕಿ÷್ಲನಿಕ್ಗಳ ಮೂಲಕ ಉಚಿತವಾಗಿ ಕಾನುನು ಸಲಹೆಗಳನ್ನು ನೀಡುತ್ತಾ ಬಂದಿದೆ. ಪ್ರಾಧಿಕಾರದಲ್ಲಿ ಪ್ಯಾನಲ್ವಕೀಲರು, ಹಾಗೂ ಕಾನೂನು ನೆರವು ಅಭಿರಕ್ಷಕರನ್ನು ನೇಮಿಸಿ ಕೊಂಡು ಬಡವರಿಗೆ, ಮಹಿಳೆಯರಿಗೆ ಉಚಿತವಾಗಿ ಕಾನೂನು ನೇರವುನೀಡುತ್ತಿದೆ ಎಂದು ಪ್ರಾಧಿಕಾರದ ಬಗ್ಗೆ ತಿಳಿಸಿದರು.
ಯಾವುದೇ ವ್ಯಾಜ್ಯ ನ್ಯಾಯಾಲಯದ ಎದುರು ಬಂದಾಗ ವಾದವಿವಾದಗಳನ್ನು ಆಲಿಸಿ ತೀರ್ಪು ನೀಡಲಾಗುತ್ತದೆ.ತೀರ್ಪು ಬರಲು ಹೆಚ್ಚಿನ ಸಮಯ ಬೇಕಾಗುತ್ತದೆ ಪ್ರಕರಣದಲ್ಲಿ ಕೊನೆಗೆ ಒಬ್ಬರ ಗೆಲುವು, ಇನ್ನೊಬ್ಬರ ಸೋಲಾಗುತ್ತದೆ.ಎರಡೂ ಕಕ್ಷಿದಾರರ ಒಪ್ಪಿಗೆಯಿಂದ ಲೋಕದಾಲತ್ ನಲ್ಲಿ ರಾಜೀಸಂಧಾನಕ್ಕೆ ಮುಂದಾಗಿ ಪ್ರಕರಣ ಬಗೆಹರಿಸಿಕೊಂಡರೆ ಇಬ್ಬರೂ ಗೆಲ್ಲುತ್ತಾರೆ.ಜತೆಗೆ ವ್ಯಾಜ್ಯಗಳ ಸಂಖ್ಯೆ ಕಡಿಮೆಯಾಗುತ್ತದೆ, ಸಾಕಷ್ಟು ಸಮಯ ಉಳಿಯುತ್ತದೆ ಎಂದರು.
ಜಿಲಾ ್ಲನ್ಯಾಯವಾದಿಗಳ ಸಂಘದ ಅಧ್ಯಕ್ಷ ಎಂ.ಐ. ಹಿರೇಮನಿಪಾಟೀಲ ಮಾತನಾಡಿ, ಬಡವರು, ನಿರ್ಗತಿಕರು, ಮಹಿಳೆಯರು ನ್ಯಾಯದಿಂದ ವಂಚಿತರಾಗಬಾರದು ಎಂಬ ಉದ್ದೇಶದಿಂದ ಕಾನೂನು ಸೇವೆಗಳ ಪ್ರಾಧಿಕಾರವನ್ನು ರಚಿಸಿದ್ದು, ಈ ಮೂಲಕ ಕಾನೂನು ಅರಿವು ಹಾಗೂ ನೆರವನ್ನು ನೀಡುತ್ತಿದ್ದು, ಇದರ ಸದುಪಯೋಗ ಪಡೆಯಬೇಕು ಎಂದರು.
ಮುಖ್ಯ ಕಾನೂನು ನೆರವು ಅಭಿರಕ್ಷಕ ಎಸ್.ವಿ .ಗ್ರಾಮಪುರೋಹಿತ ಅವರು ಮಾತನಾಡಿ, ನಮ್ಮ ಸಂವಿಧಾನದಲ್ಲಿ ಸರ್ವರಿಗೂ ನ್ಯಾಯ ದೊರಕಬೇಕು ಎಂಬ ಆಶಯ ಇದೆ.ಅದು ನಮ್ಮ ಮೂಲ ಭೂತ ಹಕ್ಕು ಹೌದು. ಈ ಹಿನ್ನೆಲೆಯಲ್ಲಿ ಕಾನೂನು ಸೇವೆಗಳ ಕಾಯ್ದೆ ಜಾರಿಗೆ ಬಂದಿದೆ.ಪ್ರಾಧಿಕಾರದಿAದ ಸಿವಿಲ್ಹಾಗೂ ಕ್ರಿಮಿನಲ್ಪçಕರಣಗಳಲ್ಲಿ ಬಡವರಿಗೆ ನೆರವನ್ನು ನೀಡುತ್ತಿದೆ.2022 ರಲ್ಲಿಎಲ್.ಎ.ಡಿ.ಸಿಪ್ರಾರಂಭಿಸಿ, ಅದರಮೂಲಕಸೇವೆನೀಡುತ್ತಿದೆಎಂದರು.
ಪ್ರಾಚಾರ್ಯ ಜೈಹನುಮಾನ ಎಚ್.ಕೆ. ಅವರು ಮಾತನಾಡಿ, ಸಮಾಜದ ದುರ್ಬಲರು ನ್ಯಾಯದಿಂದ ವಂಚಿತರಾಗವಾರದು, ಇದರಲ್ಲಿ ಕಾನೂನು ವಿದ್ಯಾರ್ಥಿಗಳ ಪಾತ್ರಪ್ರಮುಖವಾಗಿದೆ, ವಿದ್ಯಾರ್ಥಿಹಂತದಿAದಲೇ ದುರ್ಬಲರಿಗಾಗಿ ಸಹಾನುಭೂತಿ ಹೊಂದುವ ಮೂಲಕ ಅವರಿಗೆ ನ್ಯಾಯದೊರಕಿಸಲು ಮುಂದಾಗುವ ಮೂಲಕ ತಮ್ಮ ವ್ಯಕ್ತಿತ್ವವಿಕಸನಗೊಳಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಶರತಕುಮಾರ ಪ್ರಾರ್ಥಿಸಿದರು, ಜ್ಯೋತಿಸಿ.ವಿ.ಅವರುಸ್ವಾಗತಿಸಿದರು.ಪ್ರೊ.ವಿ.ವಿ.ಮುರದಂಡೆವAದಿಸಿದರು.ಕಾರ್ಯಕ್ರಮದಲ್ಲಿ
ಮಹಾವಿದ್ಯಾಲಯದಪ್ರಾಧ್ಯಾಪಕರುಹಾಗೂಕಾನೂನುವಿದ್ಯಾರ್ಥಿಗಳು ಹಾಜರಿದ್ದರು.