

ವಿಜಯವಾಣಿ ಸುದ್ದಿಜಾಲ ಗದಗ
ಜಗದ್ಗುರು ಪಂಚಾಚಾರ್ಯ ಸೇವಾ ಸಂ, ಜಗದ್ಗುರು ಪಂಚಾಚಾರ್ಯ ವೇದ ಆಗಮನ ಸಂಸತ ಪಾಠಶಾಲೆ ಹಾಗೂ ಅಖಿಲ ಭಾರತ ವೀರಶೈವ ಮಹಾಸಭಾ ಸಹಯೋಗದಲ್ಲಿ ಕಾಶೀ ಜಗದ್ಗುರು ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಭಗವತ್ಪಾದಂಗಳವರ ಆಷಾಢ ಮಾಸದ ಇಷ್ಟಲಿಂಗ ಮಹಾಪೂಜೆ ಹಾಗೂ ಸಿದ್ಧಾಂತ ಶಿಖಾಮಣಿ ಆಧ್ಯಾತ್ಮಿಕ ಪ್ರವಚನ ವಿವೇಕಾನಂದ ನಗರದ ಗಾಣಿಗ ಭವನದಲ್ಲಿ ಜೂ. 28ರಿಂದ ಜು. 7ರ ವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಸಿದ್ಧಾಂತ ಶಿಖಾಮಣಿ ಆಧ್ಯಾತ್ಮಿಕ ಪ್ರವಚನ ಸಮಿತಿ ಕಾರ್ಯಾಧ್ಯ ವಿ.ಕೆ. ಗುರುಮಠ ಹೇಳಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೂ. 28ರಿಂದ ಜು. 7ರ ವರೆಗೆ ಪ್ರತಿನಿತ್ಯ ಬೆಳಿಗ್ಗೆ 7ರಿಂದ 11.30ರ ವರೆಗೆ ಕಾಶೀ ಜಗದ್ಗುರು ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಭಗವತ್ಪಾದಂಗಳವರ ಸಂಗೀತಯುಕ್ತ ಇಷ್ಟಲಿಂಗ ಪೂಜೆ ಹಾಗೂ ಸಂಜೆ 7ರಿಂದ 9ರ ವರೆಗೆ ಸಿದ್ಧಾಂತ ಶಿಖಾಮಣಿ ಆಧ್ಯಾತ್ಮಿಕ ಪ್ರವಚನ ನೆರವೇರಲಿದೆ ಎಂದು ಹೇಳಿದರು.
ಜೂ. 28ರಂದು ಸಂಜೆ 7ಕ್ಕೆ ಸಿದ್ಧಾಂತ ಶಿಖಾಮಣಿ ಆಧ್ಯಾತ್ಮಿಕ ಆಶೀರ್ವಚನ ಕಾರ್ಯಕ್ರಮಗಳ ಉದ್ಘಾಟನಾ ಸಮಾರಂಭ ನೆರವೇರಲಿದ್ದು, ಕಾಶೀ ಜಗದ್ಗುರು ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಭಗವತ್ಪಾದಂಗಳವರು ಸಾನ್ನಿಧ್ಯ ವಹಿಸುವರು. ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಉದ್ಘಾಟಿಸುವರು. ಜೂ. 29ರಂದು ಸಂಜೆ 7ಕ್ಕೆ ಸಿದ್ಧಾಂತ ಶಿಖಾಮಣಿ ಆಧ್ಯಾತ್ಮಿಕ ಆಶೀರ್ವಚನ ಕಾರ್ಯಕ್ರಮದ ಧರ್ಮಸಭೆ ಜರುಗಲಿದ್ದು, ಪಂಡರಪುರದ ಸುಭಾಸ ಸಿದ್ಧರಾಮ ಮಮಾನೆ ಅವರಿಗೆ ಜಗದ್ಗುರು ಪಂಚಾಚಾರ್ಯ ಕೃಪಾಪೋಷಿತ ಧರ್ಮಪ್ರಕಾಶ ಪ್ರಶಸ್ತಿ ಹಾಗೂ ಸರ್ಕಾರಿ ಪ್ರೌಢಶಾಲೆ ಸಂಗೀತ ಶಿಕ ವೀರಭದ್ರಪ್ಪ ಹಿರೆಬೆನಕಲ ಅವರಿಗೆ ದಿವ್ಯಾಂಗ ಪ್ರತಿಭಾ ಪುರಸ್ಕಾರ ಹಾಗೂ 11,000 ರೂ. ನಗದು ಸೇರಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಹೇಳಿದರು.
ಜು. 7ರಂದು ಸಂಜೆ 7ಕ್ಕೆ ಸಿದ್ಧಾಂತ ಶಿಖಾಮಣಿ ಆಧ್ಯಾತ್ಮಿಕ ಆಶೀರ್ವಚನ ಕಾರ್ಯಕ್ರಮಗಳ ಮಹಾಮಂಗಲೋತ್ಸವ ಸಮಾರಂಭ ನೆರವೇರಲಿದೆ. ಕಾಶೀ ಜಗದ್ಗುರು ಡಾ. ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಭಗವತ್ಪಾದಂಗಳವರು ಸಾನ್ನಿಧ್ಯ ವಹಿಸುವರು. ಮುಕ್ತಿಮಂದಿರದ ವಿಮಲ ರೇಣುಕ ವೀರಮುಕ್ತಿಮುನಿ ಶಿವಾಚಾರ್ಯ ಸ್ವಾಮೀಜಿ ನೇತೃತ್ವ ವಹಿಸುವರು ಎಂದು ಹೇಳಿದರು. ಜೂ. 28ರಿಂದ ಜು. 7ರ ವರೆಗೆ ಎಂದಿನಂತೆ ಪ್ರತಿನಿತ್ಯ ಸಂಜೆ 7ಕ್ಕೆ ನರೇಗಲ್ ಹಿರೇಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ಅವರು ಸಿದ್ಧಾಂತ ಶಿಖಾಮಣಿ ಪ್ರಾಸ್ತಾವಿಕವಾಗಿ ಮಾತನಾಡುವರು. ಜಗದ್ಗುರು ಪಂಚಾಚಾರ್ಯ ವೇದ ಆಗಮ ಸಂಸತ ಪಾಠಶಾಲಾ ವಟುಗಳಿಂದ ವೇದೂಷ ಜರುಗಲಿದೆ. ಮಹಾಪೂಜೆಯಲ್ಲಿ ಪಾಲ್ಗೊಂಡ ದಂಪತಿಗಳಿಗೆ ಹಾಗೂ ಪ್ರಸಾದ ಸೇವೆಗೈದ ಭಕ್ತರಿಗೆ ಗುರುರೆ ಹಾಗೂ ಮಹಾಪ್ರಸಾದ ನೆರವೇರಲಿದೆ ಎಂದು ವಿವರಿಸಿದರು.
ಸುದ್ದಿಗೋಷ್ಠಿಯಲ್ಲಿ ಸಮಿತಿ ಗೌರವಾಧ್ಯ ಮಂಜುನಾಥ ಬೇಳೇರಿ, ಪ್ರಧಾನ ಕಾರ್ಯದಶಿರ್ ಸುರೇಶ ಅಬ್ಬಿಗೇರಿ, ಸಿದ್ದಲಿಂಗಪ್ಪ ಚಳಗೇರಿ, ವೀರಭದ್ರಯ್ಯ ಧನ್ನೂರಹಿರೇಮಠ, ಸಂತೋಷ ಅಬ್ಬಿಗೇರಿ, ಉಮಾಪತಿ ಭೂಸನೂರಮಠ, ಮಹೇಶ ಬೆಲೇರಿ, ಎಂ.ಎಂ. ಹಿರೇಮಠ ಹಾಗೂ ಸಿ.ಜಿ. ಹಿರೇಗೌಡ್ರ ಇದ್ದರು.