ವಾ.ಕ.ರ.ಸಾ.ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಪ್ರಿಯಾಂಗಾ ಅವರಿoದ ಹಾವೇರಿ ವಿಭಾಗದ ಪರಿಶೀಲನೆ

WhatsApp Image 2024-10-19 at 15.29.03
Published on

ಗದಗ: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ಪ್ರಿಯಾಂಗಾ ಎಂ. ಅವರು ಹಾವೇರಿ ಘಟಕ, ವಿಭಾಗೀಯ ಕಾರ್ಯಾಗಾರ ಮತ್ತು ವಿಭಾಗೀಯ ಕಛೇರಿಗೆ ಬೇಟಿ ನೀಡಿ ಪರಿಶೀಲಿಸಿದರು.

ಬಸ್ಸುಗಳನ್ನು ಸುಸ್ಥಿತಿಯಲ್ಲಿಟ್ಟುಕೊಂಡು ಸಾರ್ವಜನಿಕ ಪ್ರಯಾಣಿಕರಿಗೆ ವಿಶೇಷವಾಗಿ ವಿದ್ಯಾರ್ಥಿಗಳಿಗೆ ಉತ್ತಮ ಸಾರಿಗೆ ಸೇವೆಯನ್ನು ಒದಗಿಸಲು ಕಾರ್ಯ ಯೋಜನೆಗಳನ್ನು ಹಮ್ಮಿಕೊಂಡು ಬಸ್ಸುಗಳನ್ನು ನಿಗದಿತ ಸಮಯಕ್ಕೆ ಸರಿಯಾಗಿ ಕಾರ್ಯಾಚರಣೆ ಮಾಡುವಂತೆ ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಮುಂಬರುವ ದಿನಗಳಲ್ಲಿ ದೀಪಾವಳಿ ಹಬ್ಬ ಇರುವ ಕಾರಣ ಪ್ರಯಾಣಿಕರ ದಟ್ಟಣೆಗನುಗುಣವಾಗಿ ಬಸ್ಸುಗಳನ್ನು ಕಾರ್ಯಾಚರಣೆ ಮಾಡಿ ಸಾರ್ವಜನಿಕ ಪ್ರಯಾಣಿಕರಿಗೆ ಉತ್ತಮ ಸೇವೆ ಕಲ್ಪಿಸಲು ತಿಳಿಸಿದರು. ಹಾಗೂ ಸಿಬ್ಬಂದಿಗಳ ಸಮಸ್ಯೆಗಳನ್ನು ಆಲಿಸಿ ಪರಿಹಾರಕ್ಕೆ ಸೂಚನೆಗಳನ್ನು ನೀಡಿದರು.

ಇದೇ ಸಂದರ್ಭದಲ್ಲಿ ವಿಭಾಗೀಯ ನಿಯಂತ್ರಣಾಧಿಕಾರಿ ಶಶಿಧರ ಕುಂಬಾರ, ವಿಭಾಗೀಯ ಸಾರಿಗೆ ಅಧಿಕಾರಿಗಳಾದ ಅಶೋಕ ಪಾಟೀಲ, ವಿಭಾಗೀಯ ತಾಂತ್ರಿಕ ಶಿಲ್ಪಿಗಳಾದ ಕೆ ಆರ್ ನಾಯಕ್ ರವರು ಹಾಗೂ ಹಾವೇರಿ ವಿಭಾಗದ ಮತ್ತು ಘಟಕದ ಅಧಿಕಾರಿ/ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net