ಜಿಲ್ಲಾ ಸಮೀಕ್ಷಣಾಧಿಕಾರಿ ಡಾ. ವೆಂಕಟೇಶ ರಾಠೋಡ ಮಾತನಾಡಿ, ಪ್ರಸ್ತುತ ದಿನಮಾನದಲ್ಲಿ ಆಧುನಿಕ ಜೀವನ ಶೈಲಿ ಪದ್ಧತಿಯಿಂದಾಗಿ ಜನಸಾಮಾನ್ಯರಲ್ಲಿ ಸಕ್ಕರೆ ಕಾಯಿಲೆ, ರಕ್ತದೊತ್ತಡ, ಕ್ಯಾನ್ಸರ್, ಹೃದಯಾಘಾತದಂತಹ ಕಾಯಿಲೆಗಳು ಹೆಚ್ಚಾಗಿ ಕಂಡು ಬರುತ್ತಿದ್ದು, ಪ್ರತಿಯೊಬ್ಬರೂ ಎಚ್ಚರಿಕೆಯಿಂದ ಇರಬೇಕಾಗಿದೆ. ಸಕ್ಕರೆ ಕಾಯಿಲೆ, ರಕ್ತದೊತ್ತಡ, ಕ್ಯಾನ್ಸರ್, ಹೃದಯಾಘಾತದಂತಹ ಸಮಸ್ಯೆಗಳು ಎದುರಾಗುವ ಮುನ್ನ ಕೆಲ ಮುನ್ಸೂಚನೆಗಳನ್ನು ನೀಡುತ್ತವೆ. ಆ ಮುನ್ಸೂಚನೆಗಳನ್ನು ಎಚ್ಚರಿಕೆ ವಹಿಸಿಕೊಂಡು ತಪಾಸಣೆಗೊಳಗಾಗುವ ಮೂಲಕ ಮುಂಜಾಗೃತವಾಗಿ ಚಿಕಿತ್ಸೆ ಪಡೆದುಕೊಂಡು ಮುಂದೆ ಎದುರಾಗುವ ಕಷ್ಟದಿಂದ ಪಾರಾಗಬೇಕು. ಇಲ್ಲವಾದಲ್ಲಿ ಪ್ರಾಣಾಪಾಯ ಸಂಭವಿಸುವ ಸಂಕಷ್ಟಗಳು ಎದುರಾಗುತ್ತದೆ ಎಂದು ಎಚ್ಚರಿಸಿದರು.