

ವಿಜಯವಾಣಿ ಸುದ್ದಿಜಾಲ ಗದಗ
ತಾಲೂಕಿನ ಲಕ್ಕುಂಡಿ ಗ್ರಾಮದ ಕೃಷ್ಣ ದೇವಸ್ಥಾನದಲ್ಲಿ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಶನಿವಾರ ವಿಶ್ವ ತಂಬಾಕು ವಿರೋಧಿ ದಿನವನ್ನು ಆಚರಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಬಸಲಿಂಗಪ್ಪ ಹಡಗಲಿ, ತಂಬಾಕು ಸೇವೆನೆ ಮಾಡುವುದರಿಂದ ಆಗುವ ದುಷ್ಟಪರಿಣಾಮಗಳ ಬಗ್ಗೆ ವಿವರಿಸಿದರು.
ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವ ವಿದ್ಯಾಲಯದ ಸಂಚಾಲಕಿ ಬಿ. ಕೆ. ಸರೋಜಾ ಮಾತನಾಡಿ, ತಂಬಾಕು ಸೇವೆನೆಯಿಂದ ಮನುಷ್ಯನ ದೇಹದ ಆರೋಗ್ಯ ಹದಗೆಡುತ್ತದೆ. ಆದ್ದರಿಂದ ಆಧ್ಯಾತ್ಮಿಕ ವಿಚಾರಗಳತ್ತ ತಮ್ಮ ಮನಸ್ಸನ್ನು ಕೇಂದ್ರಿಕರಿಸಬೇಕು ಎಂದರು.
ಗವೀಸಿದ್ದಯ್ಯ ಹಿರೇಮಠ, ರಜೀಯಾ ತಹಶೀಲ್ದಾರ ಹಲವರು ಇದ್ದರು.