ಪ್ರಾಚ್ಯಾವಶೇಷಗಳ ಅನ್ವೇಷಣಾ ಕಾರ್ಯಕ್ರಮ ಯಶಸ್ವಿಗೆ ಶ್ರಮಿಸಿ : ಸಚಿವ ಎಚ್.ಕೆ. ಪಾಟೀಲ

83845faf-a3e7-4aa4-acc6-e8f16594b386
Published on

ಗದಗ : ರಾಜ್ಯದ ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಇಲಾಖೆ ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ. ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಗದಗ ನಗರದ ತೆರಂಗಾ ಪಾರ್ಕ್ ನಲ್ಲಿ ಸಭೆ ನಡೆಸಿದರು. ಲಕ್ಕುಂಡಿ ಗ್ರಾಮದಲ್ಲಿನ ಶಾಸನಗಳು ಪ್ರಾಚ್ಯಾವಶೇಷಗಳ ಅನ್ವೇಷಣಾ ಕಾರ್ಯಕ್ರಮದ ಪೂರ್ವ ಸಿದ್ಧತೆ ಕುರಿತು ಚರ್ಚಿಸಲಾಯಿತು. ಕಾರ್ಯಕ್ರಮ ಯಶಸ್ವಿಗೆ ಕೈಗೊಂಡಿರುವ ಯೋಜನೆಗಳು ಕುರಿತು ಮಾಹಿತಿ ಪಡೆದ ಸಚಿವರು ಕಾರ್ಯಕ್ರಮ ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸೂಚಿಸಿದರು. ಅನ್ವೇಷಣೆ ಕಾರ್ಯದಲ್ಲಿ ದೊರೆತ ಶಾಸನ ಮೂರ್ತಿಗಳು ಯಾವುದೇ ತರಹದ ಹಾನಿಯಾಗದಂತೆ ಸುರಕ್ಷಿತವಾಗಿ ಒಂದೆಡೆ ಸಂಗ್ರಹಿಸಬೇಕು ಇದಕ್ಕೆ ಅಗತ್ಯವಿರುವ ಎಲ್ಲ ಸಾಮಗ್ರಿ ಸಲಕರಣೆಗಳನ್ನು ಸಿದ್ಧಪಡಿಸಿಕೊಂಡು ಕಾರ್ಯಾಚರಣೆ ಯಶಸ್ವಿಯಾಗಬೇಕು ಎಂದು ಸೂಚಿಸಿದರು. ಸಭೆಯಲ್ಲಿ ಲಕ್ಕುಂಡಿ ಪಾರಂಪರಿಕ ಅಭಿವೃದ್ಧಿ ಪ್ರಾಧಿಕಾರದ ರಾಜ್ಯ ಸಲಹಾ ಸಮೀತಿ ಸದಸ್ಯ ಸಿದ್ದು ಪಾಟೀಲ, ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಸುರೇಶ ವಿ ನಾಡಗೌಡರ, ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ ಎಸ್ ನೇಮಗೌಡ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಸಿಆರ್ ಮುಂಡರಗಿ, ಉಪವಿಭಾಗಾಧಿಕಾರಿ ಗಂಗಪ್ಪ, ಲಕ್ಕುಂಡಿ ಪಾರಂಪರಿಕ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಶರಣು ಗೋಗೇರಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಹಾಜರಿದ್ದರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net