

ಗದಗ: ಸರ್ಕಾರದಿಂದ ಜಾರಿಗೊಂಡಿರುವ ವಿವಿಧ ಜನಪರ ಯೋಜನೆಗಳ ಆರ್ಥಿಕ ಸೌಲಭ್ಯವನ್ನು ಅರ್ಹ ಫಲಾನುಭವಿಗಳಿಗೆ ಒದಗಿಸುವಲ್ಲಿ ಬ್ಯಾಂಕ್ ನೌಕರರ ಪಾತ್ರ ಮಹತ್ವದ್ದಾಗಿದೆ. ಈ ನಿಟ್ಟಿನಲ್ಲಿ ಬ್ಯಾಂಕನವರು ಸಾರ್ವಜನಿಕರೊಂದಿಗೆ ಸಹಕರಿಸಿ ಸೌಲಭ್ಯ ಒದಗಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದರಾದ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಸಭೆಯಲ್ಲಿ ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ನಬಾರ್ಡದ ಎಜಿಎಂ ಮಹಾದೇವ ಕೀರ್ತಿ, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ ಜಿ ಎಚ್, ಕೌಶಲ್ಯಾಭಿವೃದ್ಧಿ ಇಲಾಖೆ ಅಧಿಕಾರಿ ಮಲ್ಲೂರ ಬಸವರಾಜ, ವಿವಿಧ ಬ್ಯಾಂಕ್ ನ ಅಧಿಕಾರಿಗಳು, ಇತರರು ಇದ್ದರು.