ಜು. 12 ರಂದು ರಾಷ್ಟ್ರೀಯ ಲೋಕ ಅದಾಲತ

18GDG03
Published on

ವಿಜಯವಾಣಿ ಸುದ್ದಿಜಾಲ ಗದಗ

ಜಿಲ್ಲೆಯಲ್ಲಿ ಜು. 12 ರಂದು ರಾಷ್ಟ್ರೀಯ ಲೋಕ ಅದಾಲತ್​ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜೀ ಸಂಧಾನ ಮಾಡಿಕೊಳ್ಳುವ ಮೂಲಕ ತಮ್ಮ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಇದೊಂದು ಅವಕಾಶವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ನಾಗವೇಣಿ ಹೇಳಿದರು.

ನಗರದ ಜಿಲ್ಲಾ ನ್ಯಾಯಾಲಯ ಸಂಕೀರ್ಣದಲ್ಲಿ ಬುಧವಾರ ರಾಷ್ಟ್ರೀಯ ಲೋಕ ಅದಾಲತ್​ ಕುರಿತು ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ರಾಜೀ ಸಂಧಾನದಲ್ಲಿ ಪಾಲ್ಗೊಂಡು ತಮಗಾಗುವ ಆಥಿರ್ಕ ಹೊರೆ ಹಾಗೂ ಸಮಯ ಪೋಲಾಗುವುದನ್ನು ತಪ್ಪಿಸಲು ಮತ್ತು ರಾಜಿ ಸಂಧಾನದಲ್ಲಿ ಪ್ರಕರಣ ಇತ್ಯರ್ಥವಾದರೆ ನ್ಯಾಯಾಲಯಕ್ಕೆ ತುಂಬಿದ ಶುಲ್ಕವನ್ನು ಸಂರ್ಪೂಣ ಮರುಪಾವತಿ ಮಾಡಲಾಗುವುದು ಹಾಗೂ ಪ್ರಕರಣ ರಾಜೀ ಆದಲ್ಲಿ ಉಭಯ ಪಕ್ಷಗಾರರಿಗೆ ಮೇಲ್ಮನವಿ ಸಲ್ಲಿಸಲು ಅವಕಾಶವಿ ಇರುವುದಿಲ್ಲ ಎಂದರು.

ಗದಗ ಜಿಲ್ಲೆಯಲ್ಲಿ ರಾಜೀ ಸಂಧಾನಕ್ಕಾಗಿ ಒಟ್ಟು 20411 ವಿವಿಧ ಚಾಲ್ತಿ ಪ್ರಕರಣಗಳಿವೆ. ಅದರಲ್ಲಿ ಈಗಾಗಲೇ ರಾಜೀ ಆಗಬಹುದಾದ 2280 ಪ್ರಕರಣಗಳನ್ನು ಗುರುತಿಸಲಾಗಿದೆ. ಇದರಲ್ಲಿ ಜಮೀನುಗಳಿಗೆ ಸಂಬಂಧಪಟ್ಟ ವ್ಯಾಜ್ಯಗಳು ಮನೆ ಹಾಗೂ ನಿವೇಶನಗಳಿಗೆ ಸಂಬಂಧಪಟ್ಟ ವ್ಯಾಜ್ಯಗಳು, ಭೂಸ್ವಾಧಿನ ಪ್ರಕರಣಗಳು, ಬ್ಯಾಂಕ ವಸೂಲಾತಿ ಪ್ರಕರಣಗಳು, ದರಖಾಸ್ತು ಅಜಿರ್ಗಳು, ಕಾಮಿರ್ಕ ಪ್ರಕರಣಗಳು, ಮರಳು ಕಳ್ಳ ಸಾಗಾಣಿಕೆೆ ಪ್ರಕರಣಗಳು, ಚೆಕ್​ ಬೌನ್ಸ್​ ಪ್ರಕರಣಗಳು, ಮೋಟರ್​ ವಾಹನ ಅಪಘಾತ ಪ್ರಕರಣಗಳು, ವೈವಾಹಿಕ ಪ್ರಕರಣಗಳನ್ನು ಗುರುತಿಸಲಾಗಿದೆ.

ಪಕ್ಷಗಾರರು ನ್ಯಾಯಾಲಯಗಳಲ್ಲಿರುವ ತಮ್ಮ ವ್ಯಾಜ್ಯಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದಾಗಿದೆ. ಕಳೆದ ಮಾ. -2025 ರಂದು ಜರುಗಿದ ಲೋಕ ಅದಾಲತ್​ನಲ್ಲಿ 3749 ಚಾಲ್ತಿ ಪ್ರಕರಣಗಳನ್ನು ಹಾಗೂ 29199 ವ್ಯಾಜ್ಯಪೂರ್ವ ಪ್ರಕರಣಗಳನ್ನು ಸೇರಿ ಒಟ್ಟು 32948 ಪ್ರಕರಣಗಳ್ನು ರಾಜೀ ಮೂಲಕ ಇತ್ಯರ್ಥಪಡಿಸಿದೆ. ಇದರಲ್ಲಿ ವಿಶೇಷವಾಗಿ 09 ಕೌಟುಂಬಿಕ ಪ್ರಕರಣಗಳನ್ನು ಪುನಃ ಒಂದು ಗೂಡಿಸಿ ಕಳುಹಿಸಲಾಗಿದೆ ಎಂದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದಶಿರ್ ಸಿ. ಎಸ್​. ಶಿವನಗೌಡ್ರ ಮಾತನಾಡಿ ನ್ಯಾಯಾಲಯಗಳಲ್ಲಿ ಉಭಯ ಪಕ್ಷಕಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನ ಆಗುವುದರಿಂದ ಬಾಂಧವ್ಯವು ಉಳಿದು ವಿವಾದವು ತೀರ್ಮಾನವಾಗುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯದ ಶುಲ್ಕವನ್ನು ರ್ಪೂಣವಾಗಿ ಮರುಪಾವತಿಸಲಾಗುವುದು ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net