ಗದಗ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಬೆಂಗಳೂರು, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಪೊಲೀಸ್ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಆರೋಗ್ಯ ಮತ್ತುಕುಟುಂಬ ಕಲ್ಯಾಣ ಇಲಾಖೆ, ತೋಂಟದಾರ್ಯ ತಾಂತ್ರಿಕ ಮಹಾವಿದ್ಯಾಲಯ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾಘಟಕ, ಗದಗಇವರ ಸಹಯೋಗದಲ್ಲಿ ಮಕ್ಕಳ ರಕ್ಷಣೆ ವಿಪತ್ತು ನಿರ್ವಹಣೆಯಲ್ಲಿ ಭಾಗಿದಾರ ಇಲಾಖೆಗಳ ಪಾತ್ರ ಕುರಿತು 02 ದಿನಗಳ ತರಬೇತಿದಾರರ ತರಬೇತಿ ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿಗಳಾದ ಸಿ.ಎಸ್ ಶಿವನಗೌಡ್ರ ಉದ್ಘಾಟಿಸಿದರು.
ನಂತರ ಅವರು ಮಾತನಾಡಿ ಬಾಲ ಹಾಗೂ ಕಿಶೋರ ಕಾರ್ಮಿಕರ, ಭಿಕ್ಷಾಟಣೆಯಲ್ಲಿ ತೊಡಗಿದ ಮಕ್ಕಳ, ಬೀದಿಬದಿ ಮಕ್ಕಳು, ಅನಾಥ, ನಿರ್ಗತಿ ಮಕ್ಕಳ ವಿಪತ್ತಿಗೆ ಬಲಿಯಾದ ಮಕ್ಕಳ ರಕ್ಷಣೆ ಮಾಡುವಂತೆ ಹಾಗೂ ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವಂತೆ ಕರೆ ನೀಡಿದರು.
ಕಾರ್ಯಕ್ರಮದಲ್ಲಿ ಉಪ ಅಧೀಕ್ಷಕರು, ಮಾತನಾಡಿ ಪೊಲೀಸ್ ಇಲಾಖೆ 24/7 ವಿಪತ್ತು ಸಂದರ್ಭದಲ್ಲಿ ಹಾಗೂ ಮಕ್ಕಳ ರಕ್ಷಣಾ ಕಾರ್ಯಾಚರಣೆಯಲ್ಲಿ ಸದಾ ಸನ್ನದ್ದವಾಗಿದ್ದು, ಎಂತಹುದೇ ತುರ್ತು ಪರಿಸ್ಥಿತಿಯಲ್ಲಿ ರಕ್ಷಣೆಗೆ 112ಗೆ ಕರೆ ಮಾಡಬುದಾಗಿದೆ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಆರ್.ಎಸ್ ಬುರಡಿ, ಉಪ ನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ ರವರು ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ ಶೌಚಾಲಯ ನಿರ್ವಹಣೆ ಮತ್ತು ದುರಸ್ತಿ ಕಾಮಗಾರಿಯನ್ನು ಹಂತ ಹಂತವಾಗಿ ಮಾಡಲಾಗುತ್ತಿದೆ.
ಬಾಲ್ಯವಿವಾಹ, ಬಾಲಕಾರ್ಮಿಕತೆ, ಪೊಕ್ಸೋದಂತಹ ಪ್ರಕರಣಗಳಿಗೆ ಬಲಿಯಾಗುವವರ ಬಹುಸಂಖ್ಯಾತ ಮಕ್ಕಳು ಶಾಲೆಯಿಂದ ಹೊರಗುಳಿದ ಮಕ್ಕಳೇ ಆಗಿರುತ್ತಾರೆ. ಆದ್ದರಿಂದ ಅಂತಹ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಮರಳಿ ಬಾ ಶಾಲೆಗೆ ಎಂಬ ಕಾರ್ಯಕ್ರಮದ ಮೂಲಕ ಎಲ್ಲ ಮಕ್ಕಳನ್ನು ಶಾಲೆಗೆ ಸೇರಿಸಿಕೊಳ್ಳುವ ಕಾರ್ಯಕ್ರಮ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಮೋದಲನೇ ದಿನ ಹರೀಶ ಜೋಗಿ, ಸಂಯೋಜಕರು, ಯುನಿಸೆಫ್, ಕೊಪ್ಪಳ ರವರು ಮಕ್ಕಳ ಹಕ್ಕುಗಳು, ಬಾಲನ್ಯಾಯ (ಮಕ್ಕಳ ಪೋಷಣೆ ಮತ್ತು ರಕ್ಷಣೆ) ಕಾಯ್ದೆ, ಬಾಲ ಕಾರ್ಮಿಕತೆ ಮತ್ತು ಕಿಶೋರ ಕಾರ್ಮಿಕ ನಿಷೇಧ ಹಾಗೂ ನಿಯಂತ್ರಣ ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ ಹಾಗೂ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಗಳ ಕುರಿತು ಉಪನ್ಯಾಸ ನೀಡಿದರು.
ವಿಪತ್ತು ನಿರ್ವಹಣಾ ತಜ್ಞರು ಶಿವಾನಂದ ರಾಜನಾಳ ಮಾತನಾಡಿ ಕಂದಾಯ ಇಲಾಖೆ, ಗದಗ ರವರು ವಿಪತ್ತು ಪೂರ್ವ, ವಿಪತ್ತು ಸಂದರ್ಭದಲ್ಲಿ ಹಾಗೂ ವಿಪತ್ತು ಘಟಿಸಿದ ನಂತರ ಕೈಗೊಳ್ಳಬೇಕಾದ ಕ್ರಮಗಳು, ಮಕ್ಕಳ, ಮಹಿಳೆಯರ ಮತ್ತು ವಿಕಲಚೇತನರ ರಕ್ಷಣೆ ಕಾರ್ಯಾಚರಣೆ ಕುರಿತು ಸಮಗ್ರವಾಗಿ ಉಪನ್ಯಾಸ ನೀಡಿದರು.
ಎರಡನೇ ದಿನ ಅಪರಾಹ್ನ ವ್ಹಿ ಎಸ್‌ಟೆಕ್ಕೇಕರ್, ಅಗ್ನಿಶಾಮಕ ಅಧಿಕಾರಿಗಳು, ಅಗ್ನಿಶಾಮಕ ದಳ, ಗದಗ ರವರು ಅಗ್ನಿ ದುರಂತ ಪೂರ್ವವಹಿಸಬೇಕಾದ ಮುಂಜಾಗೃತೆ ದುರಂತ ಸಂಭವಿಸಿದ ಸಂದರ್ಭದಲ್ಲಿ ರಕ್ಷಣಾ ಕಾರ್ಯಾಚರಣೆ ಪ್ರಾತ್ಯಕ್ಷಿಕೆ ಮೂಲಕ ತಿಳಿಸಿದರು ಹಾಗೂ ಉಪನ್ಯಾಸ ನೀಡಿದರು.
ಡಾಎಮ್.ಎಮ್.ಅವಟೆ, ಪ್ರಾಚಾರ್ಯರರು, ತೋಂಟದಾರ್ಯ ತಾಂತ್ರಿಕ ಮಹಾವಿದ್ಯಾಲಯ ರವರು ತರಬೇತಿಯಲ್ಲಿ ಭಾಗವಹಿಸಿದ ಅಧಿಕಾರಿ/ಸಿಬ್ಬಂದಿಗಳಿಗೆ ಪ್ರಶಸ್ತಿ ಪತ್ರ ವಿತರಣೆ ಮಾಡಿ 02 ದಿನಗಳ ತರಬೇತಿಯಲ್ಲಿ ಪಡೆದ ಜ್ಞಾನವನ್ನು ತಳಮಟ್ಟದವರೆಗೆ ಎಲ್ಲಾ ಸಿಬ್ಬಂದಿಗಳಿಗೆ ಹಾಗೂ ಸಾರ್ವಜನಿಕರಿಗೆ ತಲುಪಿಸಿ ಮಕ್ಕಳ ರಕ್ಷಣೆ ಹಾಗೂ ವಿಪತ್ತು ನಿರ್ವಹಣೆ ಕುರಿತು ಜಾಗೃತಿ ಮೂಡಿಸುವಂತೆ ಕರೆ ನೀಡಿದರು.
ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳು ರಫೀಕಾ ಹಳ್ಳೂರು, ಗಣ್ಯರನ್ನು ಸ್ವಾಗತಿಸಿ ಪ್ರಾಸ್ತಾವಿಕ ನುಡಿ ಹಂಚಿಕೊAಡರು. ಮಲ್ಲಪ್ಪ ಹೊಸಳ್ಳಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ನಿರೂಪಿಸಿ ಗಣ್ಯರೆಲ್ಲರಿಗೂ ವಂದಿಸಿದರು.