

ಗದಗ: ಪ್ರಜಾಪ್ರಭುತ್ವದಲ್ಲಿ ಮತದಾನ ಹಾಗೂ ಚುನಾವಣೆ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ತಾವೆಲ್ಲರೂ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಿಸಿ ಎಂದು ಕಾರ್ಯ ನಿರ್ವಾಹಕ ಅಧಿಕಾರಿ ಎಸ್ ಕೆ ಇನಾಮದಾರ ಹೇಳಿದರು..
ಮಲ್ಲಾಪೂರ ಗ್ರಾಮದಲ್ಲಿ ನರೇಗಾ ಯೋಜನೆಯಡಿ ನಡೆದ ಸಾಮೂಹಿಕ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಕಾಮಗಾರಿ ವೀಕ್ಷಣೆ ಮಾಡಿದ ಬಳಿಕ ಮಾತನಾಡಿದ ಅವರು ಮೇ 7 ರಂದು ದೇಶದ ಸಾರ್ವತ್ರಿಕ ಚುನಾವಣೆ ನಡೆಯುತ್ತಿದೆ. ತಪ್ಪದೇ ಎಲ್ಲರೂ ಮತದಾನ ಮಾಡುವ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಗಟ್ಟಿಗೊಳಸಬೇಕು ಎಂದರು.
ಈ ಸಂದರ್ಭದಲ್ಲಿ ನರೇಗಾ ಯೋಜನೆ ಕುರಿತು ಮಾತನಾಡಿದ ಅವರು ದುಡಿಯಲು ಬೇರೆ ಊರುಗಳಿಗೆ ಗುಳೆ ಹೋಗುವುದನ್ನು ತಪ್ಪಿಸಲು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಸ್ವ ಗ್ರಾಮದಲ್ಲಿ0iÉು ದುಡಿಯುವ ಕೈಗಳಿಗೆ ಕೆಲಸ ನೀಡಲಾಗುತ್ತಿದೆ. ಕೂಲಿಕಾರರಿಗೆ 349 ರೂ. ಗಳಿಗೆ ಕೂಲಿ ದರವನ್ನು ಹೆಚ್ಚಿಸಲಾಗಿದೆ. ಪ್ರತಿಯೊಂದು ಕುಟುಂಬಕ್ಕೆ ಒಂದು ಆರ್ಥಿಕ ವರ್ಷಕ್ಕೆ 100 ದಿನಗಳ ಕೆಲಸವನ್ನು ನೀಡಲಾಗುತ್ತಿದೆ. ಪ್ರತಿಯೊಂದು ಕುಟುಂಬವು ಕೂಡಾ 100 ದಿನಗಳ ಕೆಲಸವನ್ನು ಪೂರೈಸಿ ತಮ್ಮ ಆರ್ಥಿಕ ಮಟ್ಟವನ್ನು ಹೆಚ್ಚಿಸಿಕೊಳ್ಳಿ ಎಂದು ತಿಳಿಸಿದರು.
ಕೂಲಿ ಕೆಲಸದ ಜೊತೆಗೆ ಕೃಷಿಹೊಂಡ, ದನದ ಶೆಡ್, ಕುರಿ, ಮೇಕೆ ಸಾಕಾಣಿಕೆಗಾಗಿ ಶೆಡ್ ಗಳ ನಿರ್ಮಾಣ ಸೇರಿದಂತೆ ಹಲವು ವೈಯಕ್ತಿಕ ಕಾಮಗಾರಿಗಳನ್ನು ನರೇಗಾ ಯೋಜನೆಯಡಿ ಕೈಗೊಳ್ಳಲು ಅವಕಾಶವಿದೆ. ಹಾಗಾಗಿ ಎಲ್ಲಾ ಕೂಲಿಕಾರರು ಈ ಯೋಜನೆಯನ್ನು ಸದುಪಯೋಗ ಪಡೆದುಕೊಳ್ಳಿ ಎಂದು ಮನರೇಗಾ ಕೂಲಿಕಾರರಿಗೆ ಮಾಹಿತಿಯನ್ನು ನೀಡಿದರು. ಮತ್ತು ಎನ್ ಎಂ ಎಂ ಎಸ್ ನಲ್ಲಿ ಕಡ್ಡಾಯವಾಗಿ ಹಾಜರಾತಿಯ ಕುರಿತು ಸೂಚನೆಯನ್ನು ನೀಡಿದರು.
ಲೋಕಸಭಾ ಚುನಾವಣೆ-2024ರ ಅಂಗವಾಗಿ ಮತದಾರರಿಗೆ ಮತದಾನದ ಮಹತ್ವದ ಕುರಿತು ಮಾಹಿತಿಯನ್ನು ನೀಡಿ, ಪ್ರತಿಜ್ಞಾ ವಿಧಿಯನ್ನು ಭೋದಿಸಲಾಯಿತು. ಈ ಸಂದರ್ಭದಲ್ಲಿ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ತಾಂತ್ರಿಕ ಸಹಾಯಕರು, ಬಿಎಫ್ ಟಿ, ಗ್ರಾಮ ಪಂಚಾಯತಿ ಸಿಬ್ಬಂದಿಗಳು ಸೇರಿದಂತೆ ನರೇಗಾ ಕೂಲಿಕಾರರರು ಉಪಸ್ಥಿತರಿದ್ದರು.