

ಆದರ್ಶ ದಂಪತಿಗಳಾಗಿ ಮಕ್ಕಳಿಗೆ ಸಂಸ್ಕಾರ, ಸಂಸತಿ ನೀಡಿ
ವಿಜಯವಾಣಿ ಸುದ್ದಿಜಾಲ ಗದಗ
ನವವಿವಾಹಿತ ದಂಪತಿಗಳು ಆದರ್ಶ ಜೀವನ ಸಾಗಿಸಬೇಕು. ಮಕ್ಕಳಿಗೆ ಒಳ್ಳೆ ಸಂಸ್ಕಾರ ಸಂಸತಿಯನ್ನು ನೀಡಿ ಧರ್ಮದ ಹಾದಿಯಲ್ಲಿ ಮುನ್ನಡೆಸಿ ಎಂದು ವೀರೇಶ್ವರ ಪುಣ್ಯಾಶ್ರಮದ ಕಲ್ಲಯ್ಯಜ್ಜನವರು ಹೇಳಿದರು.
ನಗರದ ಕಾಶೀ ವಿಶ್ವನಾಥ ದೇವಸ್ಥಾನದಲ್ಲಿ ಶುಕ್ರವಾರ ಜರುಗಿದ ರಥೋತ್ಸವ, ಸಾಮೂಹಿಕ ವಿವಾಹ ಹಾಗೂ ದುರ್ಗಾದೇವಿಗೆ ಉಡಿ ತುಂಬುವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದ ಅವರು, ಜೀವನದಲ್ಲಿ ಸುಖ ದುಃಖ, ಏರು ಇಳಿತ ಬರುವದು ಸಹಜ. ಸಮಸ್ಯೆಗಳನ್ನು ಮೆಟ್ಟಿ ನಿಂತು ಛಲದಿಂದ ಬಾಳಿ ಸಾಧಿಸಿ ತೋರಿಸಬೇಕು. ಇದನ್ನು ನವವಿವಾಹಿತರು ಅರಿತುಕೊಳ್ಳಬೇಕು ಎಂದ ಅವರು, ಬಾಸಿಂಗ ಬಲ, ಕಷ್ಟ ಬಂದರೂ ತಾಳ್ಮೆ ಬೇಕು ಎಂದು ಸೂಚಿಸುವ ತಾಳಿ, ಕುಂಕುಮ, ಕಾಲುಂಗರದ ಔಚಿತ್ಯದ ಹಿನ್ನಲೆ ವಿಶ್ಲೇಷಿಸಿದರು.
ಕಾಶೀ ವಿಶ್ವನಾಥ ನಗರದಲ್ಲಿ ಸರ್ವ ಜನಾಂಗದವರಿದ್ದಾರೆ. ಒಗ್ಗಟ್ಟಿನೊಂದಿಗೆ ಸಮಾಜಮುಖಿಯಾಗಿ ಕಾರ್ಯ ಮಾಡುತ್ತಾರೆ. ಪ್ರತಿ ವರ್ಷ ಜಾತ್ರಾ ಮಹೋತ್ಸವದಲ್ಲಿ ಸಾಮೂಹಿಕ ವಿವಾಹ ಎರ್ಪಡಿಸಿ ಬಡವರಿಗೆ ಆಗುವ ಆಥಿರ್ಕ ಹೊರೆಯನ್ನು ನೀಗಿಸಿದ್ದಾರೆ. ಸಂಗೀತ, ಸಾಹಿತ್ಯ, ಸಾಂಸತಿಕ ಕಾರ್ಯ ಚಟುವಟಿಕೆಗಳಿಂದ ಯುವ ಜನಾಂಗವನ್ನು ಸನ್ಮಾರ್ಗದೆಡೆ ಮುನ್ನಡೆಸುತ್ತಿರುವ ಕಾಶೀ ವಿಶ್ವನಾಥ ನಗರದ ಹಿರಿಯರ ಮಾರ್ಗದರ್ಶನ ಸಾರ್ಥಕತೆ ಪಡೆದಿದೆ ಎಂದರು.
ಬಿಜೆಪಿ ನಾಯಕ ವಿಜಯಕುಮಾರ ಗಡ್ಡಿ ಮಾತನಾಡಿ, ಕಾಶೀ ವಿಶ್ವನಾಥ ನಗರದ ಆದರ್ಶತೆಗೆ ಹೆಸರಾಗಿದೆ. ಕಳೆದ 30 ವರ್ಷಗಳಿಂದ ಉಚಿತ ಸಾಮೂಹಿಕ ವಿವಾಹ, ಮಹಾ ಅನ್ನಸಂತರ್ಪಣೆ ಬಹಳಷ್ಟು ಅಚ್ಚುಕಟ್ಟಾಗಿ ಮಾಡಿಕೊಂಡು ಬಂದಿದ್ದಾರೆ ಎಂದರು.
ಕಾಶೀ ವಿಶ್ವನಾಥ ನಗರದ ಅಧ್ಯ ದುಂಡಪ್ಪ ಆಸಂಗಿ ಮಾತನಾಡಿ, ಹಿರಿಯರ ಮಾರ್ಗದರ್ಶನದಲ್ಲಿ ಉತ್ಸಾಹಿ ಯುವಕರು ಜಾತ್ರೆ, ಸಾಮೂಹಿಕ ವಿವಾಹ, ಇತರ ಅಭಿವೃದ್ಧಿ ಕಾರ್ಯಗಳನ್ನು ಚೆನ್ನಾಗಿ ಮಾಡಿಕೊಂಡು ಬಂದಿದ್ದಾರೆ. ಒಗ್ಗಟ್ಟು ಇದ್ದರೆ ಒಳ್ಳೆಯದನ್ನು ಮಾಡಲು ಸಾಧ್ಯ ಎಂದರು.
ಪರಪ್ಪ ಉಮಚಗಿ, ಬಿ.ಬಿ. ಅಸೂಡಿ, ದುಂಡಪ್ಪ ಆಸಂಗಿ, ಲಲಿತಾ ಅಸೂಟಿ, ಶಾಂತಪ್ಪ ಮುಳವಾಡ, ವಿರುಪಾಪ್ಪ ರಾಮಗಿರಿ, ಚನ್ನವಿರಪ್ಪ ಮಳಗಿ, ಕಳಕನಗೌಡ ಕಡಬಲಕಟ್ಟಿ, ಗಂಗಾಧರ ಬಳಿಗೇರ, ದೇವಪ್ಪ ಮಳಗಿ, ಶೇಖಣ್ಣ ಮುಳವಾಡ, ರಮೇಶ ಅಣ್ಣಿಗೇರಿ, ಮಹಾಲಿಂಗಪ್ಪ ಬರಬರಿ, ಅಶೋಕ ಗಡಾದ ಇತರರು ಇದ್ದರು.