ಸೂರ್ಯಕಾಂತಿ ಹುಟ್ಟುವಳಿ ಖರೀದಿಗೆ ಬೆಂಬಲ ಬೆಲೆ ನಿಗದಿ

dc
Published on
ಗದಗ: 2025-26 ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಎಫ್.ಎ.ಕ್ಯೂ ಗುಣಮಟ್ಟದ   ಸೂರ‍್ಯಕಾಂತಿ ಹುಟ್ಟುವಳಿಯನ್ನು ಖರೀದಿಸಲು ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕ್ರಮ ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.

ಜಿಲ್ಲಾಧಿಕಾರಿಗಳ ಸಭಾಭವನದಲ್ಲಿ ಶುಕ್ರವಾರ 2025-26 ನೇ ಸಾಲಿನ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿಯಲ್ಲಿ  ಸೂ ರ‍್ಯಕಾಂತಿ ಹುಟ್ಟುವಳಿ ಖರೀದಿಸುವ ಕುರಿತು ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಪ್ರತಿ ರೈತರಿಂದ ಪ್ರತಿ ಎಕರೆಗೆ 04 ಕ್ವಿಂಟಲ್‌ನAತೆ ಗರಿಷ್ಟ 20 ಕ್ವಿಂಟಲ್ ಎಫ್.ಎ.ಕ್ಯೂ ಗುಣಮಟ್ಟದ    ಸೂರ‍್ಯಕಾಂತಿ  ಖರೀದಿಸಲು ಹಾಗೂ  ಸೂ ರ‍್ಯಕಾಂತಿ ಖರೀದಿ ಕೇಂದ್ರಗಳಲ್ಲಿ ರೈತರ ಹೆಸರಿನಲ್ಲಿ ವರ್ತಕರು ತರುವ  ಸೂರ‍್ಯಕಾಂತಿ ಉತ್ಪನ್ನವನ್ನು ಖರೀದಿಸಿದಂತೆ ಹಾಗೂ ಖರೀದಿ ಸಂಸ್ಥೆಗಳು ಯಾವುದೇ ರೀತಿಯ ದುರುಪಯೋಗವಾಗದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಿದರು.
ಸರ್ಕಾರದ ಮಾನದಂಡಗಳನ್ವಯ ಎಫ್.ಎ.ಕ್ಯೂ ಗುಣಮಟ್ಟವನ್ನು ದೃಢೀಕರಿಸಲು ಕ್ರಮ ವಹಿಸಬೇಕು.  ಸೂ ರ‍್ಯಕಾಂತಿ ಎಫ್.ಎ.ಕ್ಯೂ ಪ್ರಕ್ರಿಯೆಯಲ್ಲಿ ಎಫ್.ಎ.ಕ್ಯೂ ಗುಣಮಟ್ಟ ಪರಿಶೀಲನೆಗಾಗಿ ಲಭ್ಯವಿರುವ ಅಧಿಕಾರಿ / ಸಿಬ್ಬಂದಿಗಳನ್ನು ಬಳಸಿಕೊಳ್ಳುವುದು. ತರಬೇತಿ ಅವಶ್ಯವಿದ್ದಲ್ಲಿ ಅಂತಹ ಸಿಬ್ಬಂದಿಗಳಿಗೆ ಎಫ್.ಎ.ಕ್ಯೂ ಗ್ರೇಡಿಂಗ್ ತರಬೇತಿ ನೀಡಲು ಖರೀದಿ ಸಂಸ್ಥೆಗಳು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.

ಕೃಷಿ ಮಾರಾಟ ಇಲಾಖೆಯ ಸಹಾಯಕ ನಿರ್ದೇಶಕರಾದ ಸುಧಾ ಬಂಡಿ ಅವರು ಮಾತನಾಡಿ ಎಫ್.ಎ.ಕ್ಯೂ ಗುಣಮಟ್ಟದ  ಸೂ ರ‍್ಯಕಾಂತಿ ಉತ್ಪನ್ನವನ್ನು ಪ್ರತಿ ಕ್ವಿಂಟಾಲ್‌ಗೆ ರೂ. 7721 ರಂತೆ ನಿಗದಿಪಡಿಸಲಾಗಿದೆ. ಕೇಂದ್ರ ಸರ್ಕಾರದ ಬೆಂಬಲ ಬೆಲೆ ಮಾರ್ಗಸೂಚಿಗಳನ್ವಯ ಸರ್ಕಾರ ಆದೇಶ ಹೊರಡಿಸಿದ ದಿನಾಂಕದಿAದ ರೈತರ ನೋಂದಣಿ ಕಾಲಾವಧಿಯನ್ನು 80 ದಿನಗಳವರೆಗೆ ಹಾಗೂ ಖರೀದಿ ಅವಧಿಯನ್ನು 90 ದಿನಗಳವರಗೆ ನಿಗದಿಪಡಿಸಲಾಗಿದೆ. ನೋಂದಣಿ ಕಾರ್ಯದ ಜೊತೆಗೆ ಖರೀದಿ ಪ್ರಕ್ರಿಯೆಯನ್ನು ಸಹ ಪ್ರಾರಂಭಿಸಲು ಆದೇಶಿಸಲಾಗಿದೆ. ಸರ್ಕಾರದ ಆದೇಶದನುಸಾರ ನ್ಯಾಫೆಡ್ ಸಂಸ್ಥೆ ಮತ್ತು ಎನ್.ಸಿ.ಸಿ.ಎಫ್. ಸಂಸ್ಥೆಯನ್ನು ಕೇಂದ್ರದ ಖರೀದಿ ಏಜೆನ್ಸಿಯಾಗಿ ಹಾಗೂ ಕರ್ನಾಟಕ ಸಹಕಾರ ಎಣ್ಣೆ ಬೀಜ ಬೆಳೆಗಾರರ ಮಹಾ ಮಂಡಳಿ ನಿಯಮಿತ ( ಕೆಓಎಫ್ ) ಬೆಂಗಳೂರು ಇವರನ್ನು ರಾಜ್ಯ ಮಟ್ಟದ ಖರೀದಿ ಏಜೆನ್ಸಿಯನ್ನಾಗಿ ಗುರುತಿಸಲಾಗಿದೆ.  ಸೂರ‍್ಯಕಾಂತಿ ಹುಟ್ಟುವಳಿಯನ್ನು ಖರೀದಿಸಲು ಖರೀದಿ ಕೇಂದ್ರಗಳನ್ನು ತೆರೆಯಲು ಸೂರ್ಯಕಾಂತಿ ಹುಟ್ಟುವಳಿ ಉತ್ಪಾದನಾ ಆಧಾರದ ಮೇಲೆ ಮತ್ತು ರೈತರ ನೋಂದಣಿ ಆಧಾರದ ಮೇಲೆ ಗ್ರಾಮೀಣ ಭಾಗದ ರೈತರಿಗೆ ಅನುಕೂಲವಾಗುವಂತೆ ಎನ್.ಸಿ.ಸಿ.ಎಫ್. ಮಾರ್ಗಸೂಚಿಗಳನ್ವಯ ಹಾಗೂ ತಾಂತ್ರಿಕ ಮತ್ತು ವೈಜ್ಞಾನಿಕ ಸೌಲಭ್ಯದಿಂದ ಕೂಡಿರುವ ಸದೃಡ  PACS/OGCS/TAPCMS/FPO/Agricultural Prodece Co operative Marketing Processing Societies   ಸಂಸ್ಥೆಗಳ ಮುಖಾಂತರ ಒಡಂಬಡಿಕೆ ಮಾಡಿಕೊಂಡು 9 ಸ್ಥಳಗಳಲ್ಲಿ ಖರೀದಿ ಕೇಂದ್ರ ತೆರೆಯಲು ತೀರ್ಮಾನಿಸಲಾಯಿತು.

ಸಭೆಯಲ್ಲಿ ಕೃಷಿ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ಕಾನೂನು ಮಾಪನ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಸೂ ರ‍್ಯಕಾಂತಿ ಹುಟ್ಟುವಳಿ ಖರೀದಿ ಕೇಂದ್ರಗಳು ( 9) : ಎಣ್ಣೆ ಬೀಜ ಬೆಳಗಾರರ ಸಹಕಾರ ಸಂಘಗಳು:

ಗದಗ – ಬಳಗಾನೂರ, ಹೊಂಬಳ: ಶಿರಹಟ್ಟಿ- ರಣತೂರ, ಶಿಗ್ಲಿ : ರೋಣ- ಅಬ್ಬಿಗೇರಿ, ನರಗುಂದ- ನರಗುಂದ, ಕಣಕಿಕೊಪ್ಪ, ಮುಂಡರಗಿ- ಬರದೂರ, ಕಲಕೇರಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net