ನಂಜನಗೂಡು ಶ್ರೀ ಶ್ರೀಕಂಠೇಶ್ವರ ಸ್ವಾಮಿ ಉತ್ಸವ ಮೂರ್ತಿಯ ಅಪಮಾನ! ಕಠಿಣ ಕಾನೂನು ಕ್ರಮ! ಜಿಲ್ಲಾಧಿಕಾರಿಗೆ ಮನವಿ

03GDG05
Published on

ಗದಗ: ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ ರೂಢಿ ಸಂಪ್ರದಾಯದಂತೆ `ಅಂಧಕಾಸುರನ ಸಂಹಾರ' ಧಾರ್ಮಿಕ ಕಾರ್ಯಕ್ರಮ ನಡೆಯುವಾಗ ಕೆಲವು ದುಷ್ಕರ್ಮಿಗಳು ಉತ್ಸವ ಮೂರ್ತಿಯ ಮೇಲೆ ಎಂಜಲು ನೀರನ್ನು ಎರಚಿ, ಭಕ್ತರ ಧಾರ್ಮಿಕ ಭಾವನೆಗೆ ನೋವುಂಟು ಮಾಡಿದ್ದಾರೆ. ಈ ಉತ್ಸವವು ಪ್ರತೀವರ್ಷ ಅನಾದಿಕಾಲದಿಂದ ನಡೆದುಕೊಂಡು ಬಂದಿದೆ. ಆದರೆ ಈ ವರ್ಷ ಕೆಲವು ದುಷ್ಕರ್ಮಿಗಳು ಪೂರ್ವನಿಯೋಜಿತ ಷಡ್ಯಂತ್ರ‍್ಯವನ್ನು ಮಾಡಿ, ಸದರಿ ಉತ್ಸವದಲ್ಲಿ ಗಲಾಟೆ ಮಾಡಿ, ಶ್ರೀ ನಂಜುಡೇಶ್ವರ ದೇವರಿಗೆ ಧಿಕ್ಕಾರ ಕೂಗಿ, ಉತ್ಸವ ಆಚರಣೆಗೆ ಭಂಗ ತರುವ ಮೂಲಕ ಭಕ್ತರ ಧಾರ್ಮಿಕ ಭಾವನೆಗೆ ನೋವುಂಟು ಮಾಡಿದ್ದಾರೆ. ಉತ್ಸವ ಮೂರ್ತಿಯನ್ನು ಅಪವಿತ್ರ ಮಾಡಿ ರಾಜ್ಯದ ಲಕ್ಷಾಂತರ ಭಕ್ತರ ಧಾರ್ಮಿಕ ಭಾವನೆಗೆ ನೋವುಂಟು ಮಾಡಿದ್ದಾರೆ ಎಂದು ಬಸವರಾಜ ಆಚಾರ್ಯ  ಇವರು ಆಗ್ರಹಿಸಿದರು. ಅವರು ಈ ಘಟನೆಯ ವಿರುದ್ಧ ತಹಶೀಲ್ದಾರ ಇವರಿಗೆ ಮನವಿ ನೀಡುವ ಸಂದರ್ಭದಲ್ಲಿ ಮಾತನಾಡುತ್ತಿದ್ದರು.

ಈ ಘಟನೆಯನ್ನು ಖಂಡಿಸಿ, ಭಕ್ತರು ಮತ್ತು ಸಳೀಯರು ಶಾಂತಿಯುತ ಪ್ರತಿಭಟನೆಯನ್ನು ಮಾಡಿದ್ದಾರೆ. ಆದರೆ ಪೋಲೀಸರು ಅಪರಾಧಿಗಳನ್ನು ಬಂಧನ ಮಾಡುವ ಬದಲು ಶಾಂತಿಯುತ ಪ್ರತಿಭಟನೆ ಮಾಡಿದ ಭಕ್ತರ ಮೇಲೆ ದೂರು ದಾಖಲು ಮಾಡಿರುವುದು ಖಂಡನೀಯವಾಗಿದೆ. ಕೂಡಲೇ ಸರಕಾರವು ಎಚ್ಚೆತ್ತು ಈ ಉತ್ಸವಕ್ಕೆ ಅಡ್ಡಿಪಡಿಸಿದ ಅಪರಾಧಿಗಳನ್ನು ಕೂಡಲೇ ಬಂಧನ ಮಾಡಿ ಅವರಿಗೆ ತಕ್ಕ ಶಾಸ್ತಿಯನ್ನು ನೀಡಬೇಕು ಮತ್ತು ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ಸೂಕ್ತ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಲಾಯಿತು. ಈ ಘಟನೆಯ ನಂತರ ಅನೇಕ ಹಿಂದೂ ವಿರೋಧಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ಶ್ರೀ ಶ್ರೀಕಂಠೇಶ್ವರ ದೇವರ ಬಗ್ಗೆ ಅತ್ಯಂತ ಕೆಟ್ಟದಾಗಿ ಬರೆದು ಅಪಮಾನ ಮಾಡಿದ್ದಾರೆ. ನಾಗೇಶ್ ಬಿಎಮ್ ಎನ್ನುವವರು ತಮ್ಮ ಪೇಸ್ ಬುಕ್ ಖಾತೆಯಲ್ಲಿ “ಕಬಿನಿ ನದಿಯಲ್ಲಿ ಜಳಕವಾಡುವ ೯೦% ಹೆಚ್ಚು ಜನ ಉಚ್ಚೆ ಉಯ್ಯುತ್ತಾರೆ. ನದಿಯುದ್ದಕ್ಕೂ ವಾಸವಿರುವ ಜನ ತಿಕ ತೊಯ್ಯುತ್ತಾರೆ. ಧನ ಮತ್ತು ಬಟ್ಟೆ ತೊಳೆಯುತ್ತಾರೆ. ಅದೇ ನೀರನ್ನು ದಿನನಿತ್ಯ ಅರ್ಚಕರು ತಂದು ನಂಜುಂಡನಿಗೆ ಅಭಿಷೇಕ ಮಾಡುತ್ತಾರೆ. ಎಂಜಲು ನೀರನ್ನು ಎರಚಿದರು ಸಹ ನಂಜುಂಡನಿಗೇಕೆ ಮೈಲಿಗೆಯಾಗುತ್ತದೆ ?” ಎಂದು ಕೆಟ್ಟದಾಗಿ ಭಕ್ತರ ಭಾವನೆಗೆ ನೋವುಂಟು ಮಾಡುವಂತೆ ಶ್ರೀ ನಂಜುಂಡೇಶ್ವರ ದೇವರಿಗೆ ಅಪಮಾನವಾಗುವ ರೀತಿಯಲ್ಲಿ ಬರೆದಿದ್ದಾರೆ. ಇವರ ಮೇಲೆ ಸಹ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಲಾಯಿತು.

ಈ ಸಂದರ್ಭದಲ್ಲಿ ವಿವಿಧ ದೇವಸ್ಥಾನಗಳ ಪ್ರತಿನಿಧಿಗಳಾದ ಎಂ ಎಸ್ ಪಾಟೀಲ್, ಎಸ್ ಎಸ್ ಚವಾಣ್, ಆರ್ ಎಂ ಹಿರೇಮಠ ಅಂಗಡಿ, ವಿಭೂತಿಮಠ ಮತ್ತು ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net