ಏಪ್ರಿಲ್ ನಲ್ಲಿ ಉದ್ಯೋಗ ಖಾತ್ರಿ ಕೆಲಸ ಎಲ್ಲೆಡೆ ಆರಂಭ...

WhatsApp Image 2025-04-02 at 5.10.23 PM (1)
Published on

ರೋಣ : ಬೇಸಿಗೆ ಕಾಲದಲ್ಲಿ ಬರಗಾಲವಿದೆಯೆಂದು ಗ್ರಾಮೀಣ ಪ್ರದೇಶದ ಕೂಲಿಕಾರು ವಲಸೆ ಹೋಗುವ ಅವಶ್ಯಕತೆ ಇಲ್ಲಾ, ತಾಲೂಕಿನಲ್ಲಿ ಏಪ್ರಿಲ್ ಮೊದಲ ವಾರರಿಂದ ಉದ್ಯೋಗ ಖಾತ್ರಿ ಕೆಲಸ ಆರಂಭವಾಗುತ್ತಿದ್ದು, ನರೇಗಾ ಯೋಜನೆಯಡಿ ಅನೇಕ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವ ಅವಕಾಶವಿದೆ. ಗ್ರಾಮೀಣ ಪ್ರದೇಶಗಳ ಜನರಿಗೆ ಯೋಜನೆಯ ಸದುಪಯೋಗ ಮಾಡಿ ಕೊಡುವ ಕೆಲಸ ನಿಮ್ಮಿಂದ ಆಗಬೇಕು ಎಂದು ಕಾಯಕ ಬಂಧುಗಳ ಸಭೆಯಲ್ಲಿ ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳಾದ ಚಂದ್ರಶೇಖರ ಬಿ ಕಂದಕೂರ ಹೇಳಿದರು.

ಪಟ್ಟಣದ ಕನ್ನಡ ಸಾಹಿತ್ಯ ಸಭಾ ಭವನದಲ್ಲಿ ಮಂಗಳವಾರ ನಡೆದ ಪಿಡಿಓ, ಕಾಯಕಬಂಧುಗಳ ಹಾಗೂ ನರೇಗಾ ಸಿಬ್ಬಂದಿಗೆ ಆಯೋಜಿಸಿದ ಒಂದು ದಿನದ ತರಬೇತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಬರಗಾಲದಲ್ಲಿ ಕೆಲಸ ಸಿಗುವುದಿಲ್ಲಾ ಎಂದು ಆತಂಕದಲ್ಲಿರುವ ಗ್ರಾಮೀಣ ಪ್ರದೇಶದ ಕೂಲಿಕಾರರಿಗೆ ನೆರವಾಗಲು ಏಪ್ರಿಲ್ ಮೊದಲ ವಾರದಲ್ಲೇ ನರೇಗಾ ಯೋಜನೆಯಡಿಯಲ್ಲಿ ಸಮುದಾಯ ಕಾಮಗಾರಿ ಗಳನ್ನು ಆರಂಭಿಸಲಾಗುತ್ತಿದೆ. ಈ ಹಿನ್ನಲೆ ವಲಸೆ ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲಾ, ತಾಲೂಕು ಪಂಚಾಯತ ಮಹತ್ವದ ಹೆಜ್ಜೆ ಇಟ್ಟಿದೆ. ಅದಕ್ಕೆ ಪೂರಕವಾಗಿ ನೀವು ಶ್ರಮವಹಿಸಿ ಕೆಲಸ ಮಾಡುವುದು ಅವಶ್ಯವಾಗಿ ಇರುತ್ತದೆ. ಆ ನಿಟ್ಟಿನಲ್ಲಿ ನಾವು ಶ್ರಮ ವಹಿಸೋಣ ಎಂದರು. ವಾರ್ಷಿಕವಾಗಿ 100 ದಿನಗಳವರೆಗೆ ಗ್ರಾಮೀಣ ಪ್ರದೇಶದ ಕೂಲಿಕಾರರಿಗೆ ಕೆಲಸ ಸಿಗುವಂತಾಗಬೇಕು. ಈ ಮೂಲಕ ಗ್ರಾಮೀಣ ಪ್ರದೇಶದ ಮೂಲಭೂತ ಸಮಸ್ಯೆಗಳನ್ನು ನಿವಾರಿಸಲು ನರೇಗಾ ವರದಾನವಾಗಲಿದೆ. ತಾಲೂಕಿನ ಎಲ್ಲಾ ಗ್ರಾಪಂ ಗಳ ಕಾಯಕ ಬಂಧುಗಳು ನರೇಗಾ ಕೆಲಸಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೂಲಿಕಾರರನ್ನು ಸೇರಿಸುವ ಕೆಲಸ ಮಾಡಬೇಕು ಎಂದು ತರಬೇತಿಯಲ್ಲಿ ಭಾಗವಹಿಸಿದ್ದ ಕಾಯಕ ಬಂಧುಗಳಿಗೆ ಕಿವಿಮಾತು ಹೇಳಿದರು. ಬೇಸಿಗೆ ಅವಧಿಯ 60 ದಿನಗಳ ಕಾಲ ನರೇಗಾ ಯೋಜನೆಯಡಿ ಕೆಲಸ ಮಾಡಿದ್ರೆ ಕೂಲಿಕಾರರಿಗೆ 22,200 ರೂಪಾಯಿ ಸಿಗುತ್ತದೆ. ಕೂಲಿಕಾರರು ನರೇಗಾ ಯೋಜನೆಯಿಂದಾಗಿ ಬರುವ ಈ ಹಣವನ್ನು ಮುಂಗಾರಿನ ಕೃಷಿ ಭಿತ್ತನೆಯ ಕಾರ್ಯಕ್ಕೆ ಸದುಪಯೋಗಪಡಿಸಿಕೊಳ್ಳಲು ನೆರವಾಗಲಿದೆ ಎಂದು ಅಭಿಪ್ರಾಯಪಟ್ಟರು.NMMS ಹಾಜರಾತಿಯನ್ನು  ಸರಿಯಾಗಿ ನಿರ್ವಹಿಸಬೇಕು ಯಾವುದೇ ತಪ್ಪುಗಳಾಗದಂತೆ ಎಚ್ಚರವಹಿಸಬೇಕು ಮತ್ತು ಎನ್ ಎಮ್ ಆರ್ ನಲ್ಲಿರುವವರು ಮಾತ್ರ ಕೆಲಸಕ್ಕೆ ಹಾಜರಾಗಬೇಕೆಂದು ಕಾಯಕ ಬಂಧುಗಳಿಗೆ ತಿಳಿಸಿದರು. ಬೇಸಿಗೆ ಅವಧಿಯಲ್ಲಿ ರೈತರ ಹೊಲದಲ್ಲಿ ನೆರೇಗಾ ಯೋಜನೆಯಡಿ ನಿರ್ಮಿಸುವ ಕಂದಕ ಬದುಗಳ ನಿರ್ಮಾಣ ಮತ್ತು ಅನುಷ್ಠಾನ ಕುರಿತು ತಾಂತ್ರಿಕ ಸಂಯೋಜಕ ಪ್ರವೀಣ ಸೂಡಿ ವಿಷಯ ಮಂಡಿಸಿದರು. ಕೂಲಿಕಾರರ ಹಾಜರಾತಿ ನಿರ್ವಹಣೆ ಕುರಿತು ಹೇಳಿದರು ತರಬೇತಿ ಕಾರ್ಯಾಗಾರವನ್ನು ಸಸಿಗೆ ನೀರುಣಿಸುವ ಮೂಲಕ ತಾಲೂಕ ಪಂಚಾಯತ ಕಾರ್ಯ ನಿರ್ವಾಹಕ ಅಧಿಕಾರಿಗಳಾದ ಚಂದ್ರಶೇಖರ ಬಿ ಕಂದಕೂರ ಚಾಲನೆ ನೀಡಿದರು. ಕಾರ್ಯಾಗಾರದಲ್ಲಿ ರೋಣ ತಾಲೂಕಿನ 22 ಗ್ರಾಮ ಪಂಚಾಯತಿಗಳ ಪಂಚಾಯತ ಅಭಿವೃದ್ಧಿ ಅಧಿಕಾರಿಗಳು, ಇಂಜಿನಿಯರ್ ಗಳು, ಬಿಎಫ್‌ಟಿ, ಜಿಕೆಎಂ, ಡಿಇಓ, ಸೇರಿದಂತೆ ನರೇಗಾ ಸಿಬ್ಬಂದಿ ವರ್ಗದವರು ಹಾಜರಿದ್ದರು.

ಬೇಸಿಗೆ ದಿನದಲ್ಲಿ ಕೆಲಸದ ಸಂದರ್ಭದಲ್ಲಿ ನರೇಗಾ ಕೂಲಿಕಾರರಿಗೆ ಕೆಲಸದ ಸ್ಥಳದಲ್ಲಿ ನೀರು ಮತ್ತು ನೆರಳಿನ ವ್ಯವಸ್ಥೆ ಬಗ್ಗೆ ಕಾಳಜಿ ವಹಿಸಬೇಕು. ಆಯುಕ್ತಾಲಯದ ಆದೇಶದಂತೆ ಎನ್ಎಂಎಂಎಸ್ ಆ್ಯಪ್‌ನಲ್ಲಿ ಎರಡು ಸಾರಿ ಹಾಜರಾತಿ ಹಾಕುವುದನ್ನು ತಪ್ಪಿಸಬಾರದು.

-ಚಂದ್ರಶೇಖರ ಬಿ ಕಂದಕೂರ

ತಾಪಂ ಇಒ ರೋಣ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net