ನುಲಿಯ ಚಂದಯ್ಯ ಜಯಂತಿ : ಪೂರ್ವಭಾವಿ ಸಭೆ

04GDG09
Published on

ಅರ್ಥಪೂರ್ಣ ಆಚರಣೆಗೆ ಅಪರ ಜಿಲ್ಲಾಧಿಕಾರಿ ಡಾ.ದುರುಗೇಶ ಕೆ.ಆರ್. ಕರೆ

ಗದಗ: ನುಲಿಯ ಚಂದಯ್ಯ ಜಯಂತಿಯನ್ನು ಅಗಸ್ಟ 9 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಹಾಲ್ ದಲ್ಲಿ ಆಚರಿಸಲಾಗುತ್ತಿದೆ,  ಜಯಂತಿಯನ್ನು ಅಚ್ಚುಕಟ್ಟಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ಕ್ರಮ ವಹಿಸಬೇಕೆಂದು ಅಪರ ಜಿಲ್ಲಾಧಿಕಾರಿ ಡಾ. ದುರುಗೇಶ ಕೆ.ಆರ್. ತಿಳಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನುಲಿಯ ಚಂದಯ್ಯ ಜಯಂತಿ ಕುರಿತು ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲೆಯ ತಾಲೂಕು, ಗ್ರಾಮ ಪಂಚಾಯತಿ ಹಾಗೂ ಶಾಲೆಗಳಲ್ಲಿಯೂ ಸಹ ಜಯಂತಿ ಆಚರಣೆಗೆ ಕ್ರಮ ವಹಿಸಬೇಕು ಎಂದರು.

ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಶಿಷ್ಟಾಚಾರದನ್ವಯ ಆಮಂತ್ರಣ ಪತ್ರಿಕೆ ಮುದ್ರಣಕ್ಕೆ ಕ್ರಮ ವಹಿಸಬೇಕು. ಕಾರ್ಯಕ್ರಮದಲ್ಲಿ ಸಮಾಜದ ವಿವಿಧ ಸಾಧನೆಗೈದ 5 ಜನರಿಗೆ ಹಾಗೂ ಎಸ್.ಎಸ್ ಎಲ್ ಸಿ ಯಲ್ಲಿ ಹೆಚ್ಚು ಅಂಕ ಗಳಿಸಿದ ಸಮಾಜದ ವಿದ್ಯಾರ್ಥಿಗಳಿಗೆ ಸನ್ಮಾನಿಸಲು ಕ್ರಮ ವಹಿಸುವಂತೆ ಅಪರ ಜಿಲ್ಲಾಧಿಕಾರಿ ಡಾ.ದುರುಗೇಶ ಕೆ.ಆರ್. ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಬಸವರಾಜ ಬಳ್ಳಾರಿ ಅವರು ಮಾತನಾಡಿ ಜಯಂತಿಯ ವೇದಿಕೆಯ ಕಾರ್ಯಕ್ರಮದ ಮುಂಚಿತವಾಗಿ ಮೆರವಣಿಗೆಯು ನಗರದ ಕಿತ್ತೂರು ಚೆನ್ನಮ್ಮ ಸರ್ಕಲ್ ದಿಂದ ಕಾರ್ಯಕ್ರಮದ ಸ್ಥಳಕ್ಕೆ ತಲುಪಲಿದೆ. ನುಲಿಯ ಚಂದಯ್ಯ ಅವರ ಜೀವನ ಸಾಧನೆಗಳ ಕುರಿತು ಪ್ರೊ. ಎಂ.ಸಿ. ಕಟ್ಟಿಮನಿ ಅವರು ಉಪನ್ಯಾಸ ನೀಡಲಿದ್ದಾರೆ. ಮೆರವಣಿಗೆಯಲ್ಲಿ ಶಹನಾಯಿ ಕಲಾ ತಂಡ ಸೇರಿದಂತೆ ಎರಡು ಕಲಾ ಪ್ರಕಾರಗಳು ಪಾಲ್ಗೊಳ್ಳಲಿವೆ. ಕಾರ್ಯಕ್ರಮಕ್ಕೆ ಆಗಮಿಸುವ ಗಣ್ಯರಿಗೆ, ಸಮಾಜದ ಸಾರ್ವಜನಿಕರಿಗೆ ಉಪಹಾರ ವ್ಯವಸ್ಥೆ ಮಾಡಲಾಗುವುದು ಜೊತೆಗೆ ಪ್ರಚಾರಕ್ಕಾಗಿ ನಗರದ ವಿವಿಧೆಡೆ ಬ್ಯಾನರ್ ಅಳವಡಿಸಲಾಗುವುದು ಎಂದು ಸಭೆಗೆ ವಿವರಿಸಿದರು.

ಈ ಸಂದರ್ಭದಲ್ಲಿ ನುಲಿಯ ಚಂದಯ್ಯ ಸಮಾಜದ ಪ್ರಮುಖರಾದ ಮೋಹನ ಭಜಂತ್ರಿ, ಸುರೇಶ ಕಟ್ಟಿಮನಿ, ಮಾಂತೇಶ, ಭೀಮಸೇನ, ಪರಶುರಾಮ ಕಟ್ಟಿಮನಿ, ಅಶೋಕ ಕಟ್ಟಿಮನಿ, ಎಸ್.ಡಿ.ಭಜಂತ್ರಿ ಸೇರಿದಂತೆ ಸಮುದಾಯದ ಮುಖಂಡರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net