ಗಂಭೀರ ಪ್ರಕರಣಗಳಲ್ಲಿ ಮಾತ್ರ ಅಪರಾಧಿಗಳಿಗೆ ಮರಣ ದಂಡನೆ ಹಾಗೂ ಜೀವಾವಧಿ ಶಿಕ್ಷೆ ಆಗುತ್ತದೆ. ಸರ್ಕಾರಿ ಅಭಿಯೋಜಕರಾದ ಸವಿತಾ ಎಂ.ಶಿಗ್ಲಿ, ಮಲ್ಲಿಕಾರ್ಜುನಗೌಡ ಎಂ.ದೊಡ್ಡಗೌಡರ, ಅಂಬರೀಷ್ ಹಿರೇಮಠ ಅವರ ಪ್ರಾಮಾಣಿಕ ಸೇವೆಯಿಂದಾಗಿ ಅನೇಕ ಪ್ರಕರಣಗಳಲ್ಲಿ ಅಪರಾಧಿಗಳಿಗೆ ಇಂತಹ ಶಿಕ್ಷೆಗಳು ಪ್ರಕಟವಾಗಿದೆ. ಅದಕ್ಕಾಗಿ ಗದಗ ಜಿಲ್ಲಾ ಪೊಲೀಸ್ ಇಲಾಖೆಯಿಂದ ಈ ಮೂವರು ಸರ್ಕಾರಿ ಅಭಿಯೋಜಕರನ್ನು ಗೌರವಿಸಲಾಗುತ್ತಿದೆ ಎಂದರು.