ಬೆಳ್ಳಟ್ಟಿಯಲ್ಲಿ ಪೋಷಣ ಅಭಿಯಾನ, ಸ್ವಚ್ಛತೆಯೇ ಸೇವೆ ಮತ್ತು ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಕುರಿತು ವಿಶೇಷ ಜಾಗೃತಿ ಕಾರ್ಯಕ್ರಮ

01GDG04
Published on

ಗದಗ: ಅಪೌಷ್ಟಿಕತೆ ನಿವಾರಿಸುವಲ್ಲಿ ಕೇಂದ್ರ ಸರ್ಕಾರ ಆಯೋಜಿಸಿರುವ ರಾಷ್ಟ್ರೀಯ ಪೋಷಣ್‌ ಅಭಿಯಾನ ಒಂದು ಮಹತ್ತರ ಕಾರ್ಯಕ್ರಮವಾಗಿದ್ದು ಕಿಶೋರಿ, ಬಾಲಕಿಯರಿಂದ ಹಿಡಿದು ಗರ್ಭಿಣಿಯರು ಸೇರಿದಂತೆ ಮಹಿಳೆಯರು ಮತ್ತು ಮಕ್ಕಳನ್ನು ಅಪೌಷ್ಟಿಕತೆಯಿಂದ ಮುಕ್ತಗೊಳಿಸುವ ಕಾರ್ಯಕ್ರಮ ಇದಾಗಿದೆ ಎಂದು ಸಂಸದರು ಮತ್ತು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಭಾರತ ಸರ್ಕಾರದ ಕೇಂದ್ರ ಸಂವಹನ ಇಲಾಖೆ, ಧಾರವಾಡ ವಾರ್ತಾ ಮತ್ತು ಪ್ರಸಾರ ಸಚಿವಾಲಯ ಹಾಗೂ ತಾಲೂಕು ಆಡಳಿತ, ತಾಲೂಕು ಪಂಚಾಯತ್, ಶಿಶು ಅಭಿವೃದ್ಧಿ ಯೋಜನೆ, ಆರೋಗ್ಯ ಇಲಾಖೆ, ಪೊಲೀಸ ಇಲಾಖೆ ಹಾಗೂ ಶಿಕ್ಷಣ ಇಲಾಖೆ, ಶಿರಹಟ್ಟಿ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರ, ವಿವಿಧ ಶಾಲೆಗಳು ಹಾಗೂ ಗ್ರಾಮ ಪಂಚಾಯತ, ಬೆಳ್ಳಟ್ಟಿ ಇವರ ಸಂಯುಕ್ತಾಶ್ರಯದಲ್ಲಿ ಗ್ರಾಮದ ಎ. ಪಿ. ಎಂ. ಸಿ. ಸಮುದಾಯ ಭವನದಲ್ಲಿ ಪೋಷಣ ಅಭಿಯಾನ, ಸ್ವಚ್ಛತೆಯೇ ಸೇವೆ, ಹೊಸ ಕ್ರಿಮಿನಲ್ ಕಾನೂನುಗಳು, ಪ್ರಧಾನ ಮಂತ್ರಿ ಸೂರ್ಯ ಘರ್ ಯೋಜನೆ, ಪ್ರಧಾನ ಮಂತ್ರಿಯವರ ದೂರದೃಷ್ಟಿ-2047, ಏಕ್ ಭಾರತ- ಶ್ರೇಷ್ಠ ಭಾರತ ಹಾಗೂ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ* ಕುರಿತು ವಿಶೇಷ ಜಾಗೃತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಈ ಯೋಜನೆಗೆ ಕೇಂದ್ರ ಸರ್ಕಾರ ಸಂಪೂರ್ಣ ಆರ್ಥಿಕ ಸಹಾಯ ನೀಡುತ್ತಿದ್ದು, ರಾಜ್ಯ ಸರ್ಕಾರಗಳ ಮಹಿಳಾ ಮತ್ತು ಮಕ್ಕಳ ಅಭಿರುದ್ದಿ ಇಲಾಖೆ ಮೂಲಕ, ದೇಶದ ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಆರೋಗ್ಯ ಬಗ್ಗೆ ಗಮನ ನೀಡಲಾಗುತ್ತಿದೆ ಎಂದ ಅವರು, ಕೇಂದ್ರ ಸರ್ಕಾರ ದೇಶದ ಪ್ರತಿಯೊಬ್ಬ ನಾಗರಿಕರ ಜೀವನ ಮಟ್ಟದ ಜೊತೆಗೆ ಆರೋಗ್ಯ, ಶಿಕ್ಷಣ, ನೈಮಲ್ಯ, ಸ್ವಚ್ಛತೆಗೆ ಹೆಚ್ಚು ಗಮನ ಹರಿಸಿ ದೇಶದ ಪ್ರತಿಯೊಬ್ಬರು ಅಭಿವೃಧ್ದಿ ಹೊಂದುವ ಉದ್ದೇಶದಿಂದ ಕೇಂದ್ರ ಸರ್ಕಾರ ರಚನಾತ್ಮಕ ಯೋಜನೆಗಳನ್ನು ಜಾರಿಗೆ ತಂದು ಅವುಗಳಿಗೆ ಆರ್ಥಿಕ ನೆರವು ನೀಡಿ ಸದೃಢ ಭಾರತ ನಿರ್ಮಿಸುವಲ್ಲಿ ದೇಶದ ಪ್ರಧಾನ ಮಂತ್ರಿಗಳು ವಿಕಸಿಕ ಭಾರತ ಕಲ್ಪನೆಗಾಗಿ ಅನೇಕ ಯೋಜನೆಗಳನ್ನು ಪ್ರತಿ ಗ್ರಾಮಗಳಿಗೆ ತಲುಪಿಸು ಉದ್ದೇಶ ಹೊಂದಿದ್ದು, 2047 ಒಳಗಾಗಿ ಭಾರತ ದೇಶ ಜಗತ್ತಿನಲ್ಲಿಯೇ ಅತ್ಯಂತ ಅಭಿವೃದ್ಧಿ ಶೀಲ ರಾಷ್ಟ ವಾಗಲಿದೆ, ಹಲವಾರು ಯೋಜನೆಗಳನ್ನು ರೂಪಿಸಿ ಕಡುಬಡವರ ಮನೆ ಮನೆಗೆ ತಲುಪಿಸುತ್ತಿದೆ, ಈ ನಿಟ್ಟಿನಲ್ಲಿ ಕೇಂದ್ರ ಸಂವಹನ ಇಲಾಖೆ, ಧಾರವಾಡ ಎಲ್ಲೆಡೆ ಉತ್ತಮ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದೆ ಎಂದು ಹೇಳಿದರು.

ಈ ವೇಳೆ ಶಾಸಕ ಡಾ. ಚಂದ್ರು ಲಮಾಣಿ ಮಾತನಾಡಿ, ಸದೃಢವಾದ ಮತ್ತು ಆರೋಗ್ಯವಂತ ಸಮಾಜ ಕಟ್ಟಬೇಕಾದರೆ ಗರ್ಭಿಣಿಯರು, ಬಾಣಂತಿಯರು ಪೌಷ್ಟಿಕ ಆಹಾರ ಬಳಸುವ ಮೂಲಕ ತಮ್ಮ ಮತ್ತು ಮಕ್ಕಳ ಆರೋಗ್ಯ ಕಾಪಾಡಿಕೊಳ್ಳಬೇಕು. ಮಹಿಳೆಯರು ಪೋಷಣ್ ಅಭಿಯಾನದಡಿ ದೊರೆಯುವ ಸವಲತ್ತುಗಳನ್ನು ಮತ್ತು ಆಯುಷ್ಮಾನ್ ಕಾರ್ಡ್ ಮಾಡಿಸಿಕೊಳ್ಳುವ ಮೂಲಕ ಉತ್ತಮ ಆರೋಗ್ಯ ಹೊಂದಬೇಕು ಹಾಗೂ ಜನರು ಯೋಜನೆಗಳನ್ನು ಸಮರ್ಪಕವಾಗಿ ಬಳಸಿಕೊಂಡು ಅವುಗಳ ಸದುಪಯೋಗ ಮಾಡಿಕೊಳ್ಳಬೇಕು ಆ ಮೂಲಕ ತಮ್ಮ ಮತ್ತು ಕುಟುಂಬದ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು ಎಂದರು.

ಪ್ರಾಸ್ಥಾವಿಕವಾಗಿ ಮಾಡನಾಡಿದ ಕೇಂದ್ರ ಸಂವಹನ ಇಲಾಖೆ, ಧಾರವಾಡದ ಕಾರ್ಯಕ್ರಮ ಸಂಯೋಜಕರಾದ ಮುರಳೀದರ ತುಕ್ಕಪ್ಪ ಕಾರಭಾರಿ, ಕೇಂದ್ರ ಸರ್ಕಾರ ಆರೋಗ್ಯ, ಶಿಕ್ಷಣ, ಸ್ವಚ್ಛತೆ ಜೊತೆಗೆ ಮಕ್ಕಳ ಮಹಿಳೆಯಲ್ಲಿರುವ ಅಪೌಷ್ಟಿಕತೆ ನಿವಾರಣೆ ದೃಷ್ಟಿಯಿಂದ ಪೋಷಣ ಅಭಿಯಾನ ಮೂಲಕ ಸದೃತ ಭಾರತ ನಿರ್ಮಿಸುವಲ್ಲಿ ಮುಂದಾಗಿದೆ. ಸಾರ್ವಜನಿಕರು ಎಲ್ಲಾ ಯೋಜನೆಗಳ ಸಮರ್ಪಕ ಮಾಹಿತಿ ಪಡೆದು ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

ಸಂಪನ್ಮೂಲ ವ್ಯಕ್ತಿಯಾಗಿ ಶಿರಹಟ್ಟಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಮೃತ್ಯುಂಜಯ ಗುಡ್ಡದಾನ್ವೆರಿ ಪೋಷಣ ಮಾಸಾಚರಣೆ ಮತ್ತು ಇಲಾಖೆಯ ಇತರ ಯೋಜನೆಗಳ ಕುರಿತು ಮಾಹಿತಿ ನೀಡಿದರು.

ಕಾರ್ಯಕ್ರಮಕ್ಕೂ ಮುನ್ನ ಗಣ್ಯರು ತಾಯಿ ಹೆಸರಲ್ಲಿ ಒಂದು ಸಸಿ ಅಭಿಯಾನದ ಅಂಗವಾಗಿ ಸಸಿ ನೆಟ್ಟರು. ಬೆಳ್ಳಟ್ಟಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಕೇಂದ್ರ ಸರ್ಕಾರದ ಯೋಜನೆಗಳ ಕುರಿತು  ಶಾಲೆಯ ವಿದ್ಯಾರ್ಥಿಗಳು,  ಸಾರ್ವಜನಿಕರು ಬ್ಯಾನರಗಳ ಮೂಲಕ ಘೋಷಣೆ ಕೂಗುತ್ತಾ ಜನರಲ್ಲಿ ಜಾಗೃತಿ ಮಾಡಿಸಿದರು.

ಕಾರ್ಯಕ್ರಮದ ಅಂಗವಾಗಿ ಆರೋಗ್ಯ ತಪಾಸಣಾ ಶಿಬಿರ, ಪೌಷ್ಠಿಕ ಆಹಾರ ಪ್ರಾತ್ಯೇಕ್ಷಿತೆ, ಅನ್ನಪ್ರಾಸನ, ಉತ್ತಮ ಅಂಗನವಾಡಿ ಕಾರ್ಯಕರ್ತೆಯರಿಗೆ ಸನ್ಮಾನ, ವಿವಿಧ ಸ್ಪರ್ಧೆಗಲ್ಲಿ ವಿಜೇತರಿಗೆ ಬಹುಮಾನ ವಿತರಣೆ ಮತ್ತು ಗ್ರಾಮ ಪಂಚಾಯಿತಿ ಸದಸ್ಯರು, ಸಿಬ್ಬಂದಿ ಹಾಗೂ ಅಧಿಕಾರಿಗಳು ಸ್ವಚ್ಛತೆಯೇ ಸೇವೆ ಅಂಗವಾಗಿ ಸ್ವತಃಹ ಕಸ ತೆಗೆದು ಜಾಗೃತಿ  ಮೂಡಿಸಿದರೂ.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ ಅಧ್ಯೆಕ್ಷ ರಮೇಶ ನಿರ್ವಾಣಶೆಟ್ಟರ ವಹಿಸಿದ್ದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಗಂಗವ್ವ ತಳವಾರ ಸದಸ್ಯರಾದ ಶಿವನಗೌಡ ಪಾಟೀಲ, ತಿಮ್ಮರಡ್ಡಿ ಮರಡ್ಡಿ, ನೇತ್ರಾ ಸಜ್ಜನ, ಮೋಹನಚಂದ ಜಿ, ಪರಶುರಾಮ ಮಲ್ಲಾಡದ ಹಾಗೂ ಸರ್ವ ಸದಸ್ಯರು, ಸ್ಥಳೀಯ ಮುಖಂಡರು, ಶಿರಹಟ್ಟಿ ತಹಶೀಲ್ದಾರ ಅನಿಲ ಬಡಿಗೇರ, ತಾಲೂಕ ಪಂಚಾಯತ ಇಒ ಎಸ್. ಎಸ್. ಕಲ್ಮನಿ, ರಾಧಾ ಜಿ, ಪಿಡಿಒ ಎಚ್. ಟಿ. ತಳವಾರ ಹಾಗೂ ಸಿಬ್ಬಂದಿ, ಅಂಗನವಾಡಿ ಮೇಲ್ವಿಚಾರಕೀಯರಾದ ಪಾರ್ವತಿ, ಅನ್ನಪೂರ್ಣ ಹಾಗೂ ಅಂಗನವಾಡಿ, ಆಶಾ ಕಾರ್ಯಕರ್ತೆಯರು, ಸ್ವ ಸಹಾಯ ಸಂಘದ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿ, ಸಿಬ್ಬಂದಿ, ಮಹಿಳೆಯರು ಸಾರ್ವಜನಿಕರು ಮುಂತಾದವರು ಭಾಗವಹಿಸಿದ್ದರು. ಶಿಕ್ಷಕ ಗಿರೀಶ ಕೊಡಬಾಳ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net