

ವಿಜಯವಾಣಿ ಸುದ್ದಿಜಾಲ ಗದಗ
ಹಳೇ ಪಿಂಚಣಿ ಯೋಜನೆ ಜಾರಿ ಮತ್ತು 7ನೇ ವೇತನ ಆಯೋಗ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಸರ್ಕಾರಿ ನೌಕರ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ಮನವಿ ಸಲ್ಲಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ರವಿ ಗುಂಜೀಕರ ಮಾತನಾಡಿ, ರಾಜ್ಯದಲ್ಲಿ 2.60 ಲ ಹುದ್ದೆಗಳು ಖಾಲಿಯಿದ್ದರೂ ಸಹ ಸರ್ಕಾರವು ಜನ ಸಾಮಾನ್ಯರ ಕಲ್ಯಾಣ ಹಾಗೂ ರಾಜ್ಯದ ಅಭಿವೃದ್ಧಿಗಾಗಿ ನೇಮಕಾತಿ ಮಾಡಿಕೊಳ್ಳುತ್ತಿಲ್ಲ ಎಂದು ಆರೋಪಿಸಿದರು. 7ನೇ ವೇತನ ಆಯೋಗವು ರಾಜ್ಯ ಸರ್ಕಾರಕ್ಕೆ ಸಲ್ಲಿಸಿರುವ ಶಿಾರಸ್ಸು ವರದಿಯಲ್ಲಿನ ಫಿಟ್ಮೆಂಟ್ ಸೌಲಭ್ಯವನ್ನು ಕನಿಷ್ಠ ಶೇ. 27.50ಕ್ಕೆ ಹೆಚ್ಚಿಸಿ ಜು. 1 ರಿಂದ ಪೂರ್ವಾನ್ವಯ ಆಗುವಂತೆ ವೇತನ ನಿಗದಿಪಡಿಸಿದೆ. ಆದರೂ 7ನೇ ವೇತನ ಆಯೋಗ ಜಾರಿ ಮಾಡಲು ಸರ್ಕಾರ ಹಿಂದೇಟು ಹಾಕುತ್ತಿದೆ ಎಂದರು.
ರಾಜ್ಯದ ಎನ್ಪಿಎಸ್ ನೌಕರರ ಜೀವನ ನಿರ್ವಹಣೆ ಹಾಗೂ ಸಂಧ್ಯಾಕಾಲದ ಬದುಕು ಅತ್ಯಂತ ಕಷ್ಟವಾಗಿದೆ. ಹಾಗಾಗಿ ಎನ್ಪಿಎಸ್ ನೌಕರರನ್ನು ಓಪಿಎಸ್ ವ್ಯಾಪ್ತಿಗೆ ತರುವುದು ಸರ್ಕಾರದ ಜವಾಬ್ದಾರಿ ಆಗಿರುತ್ತದೆ. ಈಗಾಗಲೇ ಪಂಜಾಬ, ರಾಜಸ್ಥಾನ, ಛತ್ತಿಸ್ಡ, ಜಾರ್ಖಂಡ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ ಹಳೆ ಪಿಂಚಣಿ ಯೋಜನೆಯನ್ನು ಜಾರಿಗೆ ತಂದಿರುವಂತೆ ಹಾಗೂ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ಕರ್ನಾಟಕದಲ್ಲೂ ಸಹ ಎನ್.ಪಿ.ಎಸ್. ಯೋಜನೆಯನ್ನು ರದ್ದುಪಡಿಸಿ ಹಳೇ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.
ಆರೋಗ್ಯ ಸಂಜೀವಿನಿ:
ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಕುಟುಂಬ ಸದಸ್ಯರಿಗೆ ನಗದುರಹಿತ ಚಿಕಿತ್ಸೆ ನೀಡುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು ಸಚಿವ ಸಂಪುಟದ ಅನುಮೋದನೆಯೊಂದಿಗೆ ಸೆ,8, 2022 ರಂದು ಸರ್ಕಾರ ಆದೇಶ ಹೊರಡಿಸಿತ್ತು. ಈ ಯೋಜನೆಗೆ ರಾಜ್ಯ ಸರ್ಕಾರಿ ನೌಕರರ ವೇತನದಿಂದ ವಂತಿಗೆ ಕಟಾಗು ಆಗುವುದರಿಂದ ಸರ್ಕಾರದ ಮೇಲೆ ಹೆಚ್ಚಿನ ಆಥಿರ್ಕ ಹೊರೆ ಆಗುವುದಿಲ್ಲ. ಹಾಗಾಗಿ ಸರ್ಕಾರ ಈ ಯೋಜನೆಯನ್ನು ಪರಿಗಣಿಸಬೇಕು ಎಂದು ರವಿ ಗುಂಜೀಕರ್ ಆಗ್ರಹಿಸಿದರು.
ಗೌರವಾಧ್ಯಕ್ಷ ಬಸವರಾಜ ಬಳ್ಳಾರಿ, ಕೆ. ಬಿ. ಕೊಣ್ಣೂರ, ಸತೀಶ ಕಟ್ಟಿಮನಿ, ಸಿದ್ದಪ್ಪ ಲಿಂಗದಾಳ, ಶರಣಪ್ಪ ನಾಗರಹಳ್ಳಿ, ಎಸ್. ಆರ್. ಬಂಡಿ, ಡಿ. ಎಸ್. ದುಗರಣ್ಣವರ, ಡಿ. ಎಸ್. ತಳವಾರ ಹಲವರು ಇದ್ದರು.