

ವಿಜಯವಾಣಿ ಸುದ್ದಿಜಾಲ ಗದಗ
ಸತತ 19 ದಿನಗಳಿಂದ ಬಗರಹುಕುಂ ಸಾಗುವಳಿದಾರರು ಹಾಗೂ ಅರಣ್ಯ ಅವಲಂಬಿತ ರೈತರಿಗೆ ಹಕ್ಕುಪತ್ರ ನೀಡುವುದು, ನಾಗಾವಿ ಆರ್ಡಿಪಿಆರ್ ವಿಶ್ವವಿದ್ಯಾಲಯಕ್ಕೆ ಜಮೀನು ಕಳೆದುಕೊಂಡ ರೈತರಿಗೆ ಪರಿಹಾರ ಅಥವಾ ಪರ್ಯಾಯ ಜಮೀನು ನೀಡುವಂತೆ ಆಗ್ರಹಿಸಿ ರೈತರು ಜಿಲ್ಲಾಡಳಿತ ಭವನದ ಎದುರು ನಿರಂತರ ಧರಣಿ ನಡೆಸುತ್ತಿದ್ದಾರೆ. ಶುಕ್ರವಾರ ಸರ್ಕಾರದ ವಿರುದ್ಧ ಪೊರಕೆ ಪ್ರದಶಿರ್ಸುವ ಮೂಲಕ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಉತ್ತರ ಕರ್ನಾಟಕ ಮಹಾಸಭಾ ಅಧ್ಯಕ್ಷ ರವಿಕಾಂತ ಅಂಗಡಿ ಮಾತನಾಡಿ, ಹೋರಾಟ ಆರಂಭಿಸಿ 18 ದಿನಗಳು ಕಳೆದರೂ ಜಿಲ್ಲಾ ಉಸ್ತುವಾರಿ ಸಚಿವರು ಇನ್ನೂ ನಮ್ಮ ಬೇಡಿಕೆ ಆಲಿಸಿಲ್ಲ. ಇದನ್ನು ನಾವು ಖಂಡಿಸುತ್ತೇವೆ. ಇಂದಿನವರೆಗೂ ಪೊಲಿಸ್ ಇಲಾಖೆ ಬಿಗಿ ಭದ್ರತೆಯೊಂದಿಗೆ ನಮ್ಮ ಹೋರಾಟಕ್ಕೆ ಸಹಕಾರ ನೀಡಿದೆ. ಆದರೆ ಇನ್ನೂ ಎರಡು ದಿನಗಳಲ್ಲಿ ಜಿಲ್ಲಾಡಳಿತ ಮತ್ತು ಉಸ್ತುವಾರಿ ಸಚಿವರು ಬಂದು ಸಮಸ್ಯೆ ಪರಿಹಾರಕ್ಕೆ ಮುಂದಾಗದಿದ್ದರೆ ಹೋರಾಟ ಉಗ್ರ ರೂಪ ತಾಳುವುದು ಖಚಿತ. ಮುಂದೆ ಯಾವುದೇ ಅಹಿತಕರ ಟನೆ ನಡೆದರೆ ಅದಕ್ಕೆ ಸರ್ಕಾರವೇ ಸಂರ್ಪೂಣ ಜವಾಬ್ದಾರಿ ಆಗುತ್ತದೆ ಎಂದರು
ಪ್ರತಿಭಟನೆಯಲ್ಲಿ ಮಹಿಳೆಯರು ಹಾಗೂ ವಿವಿಧ ಸಂಟನೆಯ ಮುಖಂಡರು ಭಾಗವಹಿಸಿ ರೈತರಿಗೆ ಬೆಂಬಲ ಸೂಚಿಸಿದರು. ಧನ್ನುರಾಮ ತಂಬೂರಿ, ರಮೇಶ ಮಜ್ಜೂರ, ಚಂಬಣ್ಣ ಪರಸಾಪೂರ, ಶಾಂತವ್ವ ನಾಗಾವಿ, ಶಶಿಕಲಾ ಆಮಟೆ, ಸೋಮನಾಥ ಪೂಜಾರ, ನಬಿಸಾಬ ನದಾಫ, ಈಶಪ್ಪ ಕಡಕೋಳ, ದ್ಯಾಮಣ್ಣ ಲಮಾಣಿ, ಪರಶುರಾಮ ಜಲ್ಲಿಗೇರಿ ಹಲವರು ಇದ್ದರು.