

ವಿಜಯವಾಣಿ ಸುದ್ದಿಜಾಲ ಗದಗ
ವೀರೇಶ್ವರ ಪುಣ್ಯಾಶ್ರಮದ ಆವರಣದಲ್ಲಿರುವ ಪಂ. ಪುಟ್ಟರಾಜ ಗವಾಯಿಗಳ ಸ್ಮಾರಕ ಭವನ ನಿರ್ಮಾಣ ಕಾಮಗಾರಿ ವಿಳಂಬಕ್ಕೆ ಕಾರಣವಾದ ಸರ್ಕಾರ ನಡೆ ಖಂಡಿಸಿ, ಭವನ ನಿರ್ಮಾಣಕ್ಕೆ ಅಗತ್ಯ ಅನುದಾನ ಸಂಗ್ರಹಿಸಲು ಜೆಡಿಎಸ್ ಕಾರ್ಯಕರ್ತರು ಮಠದ ಆವರಣದಲ್ಲಿ ಶುಕ್ರವಾರ ಸಾಂಕೇತಿಕ ಭಿಕ್ಷಾಟನೆ ನಡೆಸಿದರು.
ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಗೋವಿಂದಗೌಡ್ರ ನೇತೃತ್ವದಲ್ಲಿ ಶುಕ್ರವಾರ ಜೆಡಿಎಸ್ ಕಾರ್ಯಕರ್ತರು ವೀರೇಶ್ವರ ಪುಣ್ಯಾಶ್ರಮದಿಂದ ಎಪಿಎಂಸಿ ಹಾಗೂ ಮುಖ್ಯ ರಸ್ತೆಯಲ್ಲಿ ವ್ಯಾಪಾರಸ್ಥರು ಹಾಗೂ ಸಾರ್ವಜನಿಕರಿಂದ ಭಿಕ್ಷೆ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ವೆಂಕನಗೌಡ ಗೋವಿಂದಗೌಡ್ರ, ನಗರದ ಹೃದಯ ಭಾಗದಲ್ಲಿರುವ ಪುಟ್ಟರಾಜ ಸ್ಮಾರಕ ಭವನ ಅರ್ಧಕ್ಕೆ ನಿಂತಿದೆ. ಯಡಿಯೂರಪ್ಪ ಸರ್ಕಾರ ಅಧಿಕಾರದಲ್ಲಿ ಇದ್ದಾಗ 5 ಕೋಟಿ ರೂ. ಬಿಡುಗಡೆ ಆಗಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಕಳೆದರೂ ಭವನ ನಿರ್ಮಾಣದ ಬಾಕಿ ಕಾಮಗಾರಿಗೆ ಹಣ ಬಿಡುಗಡೆ ಮಾಡಿಲ್ಲ. ಸ್ಮಾರಕ ಭವನ ನಿರ್ಮಾಣಕ್ಕೆ ಅನುದಾನ ನೀಡಿದ್ದ ಸಚಿವ ಎಚ್.ಕೆ. ಪಾಟೀಲ ಭರವಸೆ ಮರೆತಿದ್ದಾರೆ ಎಂದು ಆರೋಪಿಸಿದರು.
ಮುಂಬರುವ ಬಜೆಟ್ ನಲ್ಲಿ ರಾಜ್ಯ ಸರ್ಕಾರ ಸ್ಮಾರಕ ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡದಿದ್ದರೆ, ಅವಳಿ ನಗರದ ಮನೆ ಮನೆಗೆ ಹೋಗಿ ಭಿಕ್ಷಾಟನೆ ಮಾಡಿ ಸರ್ಕಾರ ಮಾನ ಹರಾಜು ಹಾಕುವ ಜೊತೆಗೆ ಭವನ ರ್ಪೂಣಗೊಳಿಸಲು ಬೇಕಾದ ಹಣವನ್ನು ಭಿಕ್ಷಾಟನೆ ಮೂಲಕ ಸಂಗ್ರಹಿಸಿ ಅದನ್ನು ಸರ್ಕಾರಕ್ಕೆ ಕೊಟ್ಟು, ಕಾಮಗಾರಿ ರ್ಪೂಣಗೊಳಿಸಲು ಒತ್ತಾಯಿಸಲಾಗುವುದು ಎಂದರು. ಶುಕ್ರವಾರ ಸಾಂಕೇತಿಕವಾಗಿ ನಡೆದ ಭಿಕ್ಷಾಟನೆಯಲ್ಲಿ ಸ್ವೀಕರಿಸಿದ 2350 ರೂ.ಗಳನ್ನು ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ತಲುಪಿಸಲಾಗುವುದು ಎಂದರು.
ಜೋಸೆ್ ಉದೋಜಿ, ಗಿರೀಶ ಸಂಶಿ, ಎಂ. ಎಸ್. ಪರ್ತವಗೌಡ್ರ, ಪ್ರುಲ್ ಪುಣೇಕರ, ಸಂತೋಷ ಪಾಟೀಲ, ರಮೇಶ ಹುಣಸಿಮರದ, ಕುಮಾರ ಜಿಗಳೂರ, ಮುತ್ತು ದರೋಜಿ, ಮಂಜುನಾಥ ಹುಲ್ಲೂರ, ಬೀರಪ್ಪ ಪುರದ, ನಿಂಗಪ್ಪ ಸೋಮನಕಟ್ಟಿ ಹಲವರು ಇದ್ದರು.