ಅಂಧರ ಬೆಳಕಿನ ಆಶಾಕಿರಣ, ಅನಾಥರಿಗೆ ದಾರಿ ದೀಪ ಗಾನಗಂಧರ್ವ ಲಿಂ.ಪಂ.ಪುಟ್ಟರಾಜ ಕವಿ ಗವಾಯಿಗಳ ೧೧೧ನೇ ಜಯಂತೋತ್ಸವ ಅಂಗವಾಗಿ ೧೧೧ಪೂರ್ಣ ಕುಂಭದೊAದಿಗೆ ಪಂ.ಪುಟ್ಟರಾಜಕವಿ ಗವಾಯಿಗಳ ಭಾವಚಿತ್ರದ ಭವ್ಯ ಮೆರವಣಿಗೆ ನಡೆಯಿತು. ವೀರೇಶ್ವರ ಪುಣ್ಯಾಶ್ರಮದಿಂದ ಆರಂಭಗೊಂಡ ಬೃಹತ್ ಕುಂಭ ಮೇಳ ಮೆರವಣಿಗೆ ಭೂಮರೆಡ್ಡಿ ಸರ್ಕಲ್, ಕೆ.ಎಚ್.ಪಾಟೀಲ್ ಸರ್ಕಲ್, ಹತ್ತಿಕಾಳ ಕೂಟ, ಟಾಂಗಾಕೂಟ್, ಗಾಂಧಿ ಸರ್ಕಲ್, ಕೆ.ಸಿ.ರಾಣಿ ರಸ್ತೆ ಮಾರ್ಗವಾಗಿ ಪುನಃ ಪುಣ್ಯಾಶ್ರಮ ತಲುಪಿತು. ಸಾವಿರಾರು ಮಹಿಳೆಯರು ಹಾಗೂ ವಿದ್ಯಾರ್ಥಿಗಳು ನಗರದ ಪ್ರಮುಖ ಮಾರ್ಗಗಳಲ್ಲಿ ವಾದ್ಯಮೇಳ, ಪೂರ್ಣಕುಂಭದೊAದಿಗೆ ಗವಾಯಿಗಳ ಭಾವಚಿತ್ರ ಮೆರವಣಿಗೆ ನಡೆಯಿತು. ಪ್ರಮುಖ ಮಾರ್ಗಗಳಲ್ಲಿ ಸಂಚರಿಸಿದ ಮೆರವಣಿಗೆಯಲ್ಲಿ ಸಾವಿರಾರು ಸುಮಂಗಲೆಯರು ಪೂರ್ಣಕುಂಭ ಕಳಶ ಹೊತ್ತು ಪಾಲ್ಗೊಂಡು, ಮೆರುಗು ನೀಡಿದರು.