

ಗದಗ: ಅತಿವೃಷ್ಠಿಯಿಂದ ಹಾಳಾದ ಸೇತುವೆಗೆ ಬದಲಾಗಿ ಕೂಡಲೇ ಜನಸಂರ್ಪಕಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ್ ಅವರು ಸೂಚಿಸಿದರು.
ಗದಗ ತಾಲೂಕಿನ ಕುರ್ತಕೋಟಿ ಗ್ರಾಮದಲ್ಲಿ ಸತತವಾಗಿ ಸುರಿದ ಮಳೆಯಿಂದ ರಭಸವಾಗಿ ಹರಿದ ಮಳೆನೀರಿಗೆ ಸೇತುವೆ ಕೊಚ್ಚಿ ಹೋಗಿದ್ದನ್ನು ಅವರು ಶುಕ್ರವಾರ ಭೇಟಿ ನೀಡಿ ವಿಕ್ಷಿಸಿದರು.
ಸ್ಥಳದಲ್ಲಿ ಹಾಜರಿದ್ದ ಹೆಚ್ಚುವರಿ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ ಅವರಿಗೆ, ಮಳೆಯಿಂದ ಹಾನಿಗೊಳಗಾದ ಸಂಪೂರ್ಣ ವರದಿ ನೀಡಲು ತಿಳಿಸಿದರು. ಅಲ್ಲದೇ ಸಣ್ಣ ಪುಟ್ಟ ರಸ್ತೆಗಳು ಹಾಳಾಗಿದ್ದಲ್ಲಿ ಅದನ್ನು ಶೀಘ್ರವಾಗಿ ಸರಿಪಡಿಸಲು ಜಿಲ್ಲಾ ಪಂಚಾಯತ ಹಾಗೂ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜನರಿಗೆ ಸಂಪರ್ಕ ಕಲ್ಪಿಸಲು ತಾತ್ಕಾಲಿಕವಾಗಿ ಪರ್ಯಾಯ ವ್ಯವಸ್ಥೆ ಮಾಡಿ, ನಂತರ ದಿನಗಳಲ್ಲಿ ಶಾಶ್ವತ ಪರಿಹಾರ ಕಲ್ಪಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದರು.
ಮಳೆಯಿಂದ ಹಾನಿಗೊಳಗಾದ ಮನೆಗಳನ್ನು ವಿಕ್ಷಿಸಿ ಅಧಿಕಾರಿಗಳಿಂದ ವರದಿ ಪಡೆದು ಕೊಂಡರು.
ಈ ಸಂದರ್ಭದಲ್ಲಿ ಜಿ.ಪಂ ಮಾಜಿ ಅಧ್ಯಕ್ಷರಾದ ವಾಸಣ್ಣ ಕುರಡಗಿ,ಅಶೋಕ ಮಂದಾಲಿ,ವಿವಿಧ ಇಲಾಖೆಗಳ ಅಧಿಕಾರಿಗಳು, ಸಾರ್ವಜನಿಕರು ಹಾಜರಿದ್ದರು