ಅಬ್ಬಿಗೇರಿಯಲ್ಲಿ ಅ. 3 ರಿಂದ 12ರವರೆಗೆ ಬಾಳೆಹೊನ್ನೂರು ರಂಭಾಪುರಿ ಜಗದ್ಗುರುಗಳ ದಸರಾ ಧರ್ಮ ಸಮ್ಮೇಳನ

30GDG06
ಗದಗ ನಗರದ ಪಂಚಾಚಾರ್ಯ ಮಾಂಗಲ್ಯ ಮಂದಿರದಲ್ಲಿ ಶುಕ್ರವಾರ ಏರ್ಪಡಿಸಿದ್ದ ರಂಭಾಪುರಿ ಜಗದ್ಗುರುಗಳವರ ದಸರಾ ಧರ್ಮ ಸಮ್ಮೇಳನದ ಪೌರ್ವಭಾವಿ ಸಭೆಯಲ್ಲಿ ದಸರಾ ಮಹೋತ್ಸವ ಕುರಿತು ಮಾಹಿತಿ ಇರುವ ಕರಪತ್ರವನ್ನು ಬಿಡುಗಡೆ ಮಾಡಲಾಯಿತು. ಮಲ್ಲಿಕಾರ್ಜುನ ಶಿವಾಚಾರ್ಯ ಶ್ರೀಗಳು, ವೀರಭದ್ರ ಶಿವಾಚಾರ್ಯ ಶ್ರೀಗಳು, ಅಭಿನವ ಪಂಚಾರ ಶಿವಾಚಾರ್ಯ ಶ್ರೀಗಳು, ಮುಮ್ಮಡಿ ಚಂದ್ರಶೇಖರ ಶಿವಾಚಾರ್ಯ ಶ್ರೀಗಳು, ವಾಗೀಶ ಪಂಡಿತಾರಾಧ್ಯ ಶಿವಾಚಾರ್ಯ ಶ್ರೀಗಳು ಸೇರಿದಂತೆ ವಿವಿಧ ಮಠಾಧೀಶರು ಇದ್ದರು.
Published on

ವಿಜಯವಾಣಿ ಸುದ್ದಿಜಾಲ ಗದಗ
ಜಿಲ್ಲೆಯ ರೋಣ ತಾಲೂಕಿನ ಅಬ್ಬಿಗೇರಿ ಗ್ರಾಮದ ಅನ್ನದಾನೇಶ್ವರ ಪ್ರೌಢಶಾಲೆಯ ಆವರಣದಲ್ಲಿ ಅ. 3 ರಿಂದ 12ರವರೆಗೆ ಬಾಳೆಹೊನ್ನೂರು ಶ್ರೀಮದ್​ ರಂಭಾಪುರಿ ಜಗದ್ಗುರುಗಳವರ ಶರನ್ನವರಾತ್ರಿ, ದಸರಾ ಧರ್ಮ ಸಮ್ಮೇಳನವನ್ನು ಶ್ರದ್ಧಾಭಕ್ತಿಯೊಂದಿಗೆ ವಿಜೃಂಭಣೆಯಿಂದ ಜರುಗಿಸಲು ಭಕ್ತರು ಮುಂದಾಗಬೇಕು ಎಂದು ಸಿದ್ಧರಬೆಟ್ಟ ಅಬ್ಬಿಗೇರಿಯ ವೀರಭದ್ರ ಶಿವಾಚಾರ್ಯ ಶ್ರೀಗಳು ಹೇಳಿದರು.
ನಗರದ ಪಂಚಾಚಾರ್ಯ ಮಾಂಗಲ್ಯ ಮಂದಿರದಲ್ಲಿ ಶುಕ್ರವಾರ ಏರ್ಪಡಿಸಿದ್ದ ರಂಭಾಪುರಿ ಜಗದ್ಗುರುಗಳವರ ದಸರಾ ಧರ್ಮ ಸಮ್ಮೇಳನದ ಪೌರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ರೋಣ ತಾಲೂಕಿನ ಅಬ್ಬಿಗೇರಿ ಗ್ರಾಮವು ಕೇವಲ ಗ್ರಾಮವಲ್ಲದೇ ಧಾಮಿರ್ಕವಾಗಿ, ಶೈಣಿಕವಾಗಿ ಭಕ್ತಿಯನ್ನು ಹೊಂದಿರುವ ಜಾಗೃತ ತಾಣ. ಅಬ್ಬಿಗೇರಿ ಹಿರೇಮಠದ ಸಂಸತ ಪಾಠ ಶಾಲೆಯು ನೂರು ವರ್ಷವನ್ನು ಪೂರೈಸಿ ಶತಮಾನೋತ್ಸವ ಕಂಡ ಶಾಲೆ. ಈ ಹಿಂದೆ ರಂಭಾಪುರಿ ಜಗದ್ಗುರುಗಳು ಇದೇ ಸಂಸತ ಪಾಠ ಶಾಲೆಯಲ್ಲಿ ಅಧ್ಯಯನ ಮಾಡಿರುವದು ಇತಿಹಾಸ. ಹೀಗಾಗಿ ರಂಭಾಪುರಿ ಪೀಠಕ್ಕೂ ಅಬ್ಬಿಗೇರಿಗೂ ಅವಿನಾಭಾವ ಸಂಬಂಧವಿದೆ ಎಂದರು.
ದಸರಾ ಮಹೋತ್ಸವ ಕುರಿತು ಮಾಹಿತಿ ಇರುವ ಕರಪತ್ರವನ್ನು ಬಿಡುಗಡೆ ಮಾಡಲಾಯಿತು. ಇದೇ ಸಂದರ್ಭದಲ್ಲಿ ಅಖಿಲ ಭಾರತ ವೀರಶೈವ ಮಹಾಸಭಾದ ಗದಗ ಜಿಲ್ಲಾಧ್ಯ ಶರಣಬಸಪ್ಪ ಗುಡಿಮನಿ ಅವರನ್ನು ಮಠಾ-ಶರು ಸನ್ಮಾನಿಸಿ ಗೌರವಿಸಿದರು.
ನರೇಗಲ್ಲ ಸವದತ್ತಿ ಹಿರೇಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಶ್ರೀಗಳು, ಅಡ್ನೂರಿನ ಅಭಿನವ ಪಂಚಾರ ಶಿವಾಚಾರ್ಯ ಶ್ರೀಗಳು, ಬನ್ನಿಕೊಪ್ಪ ಜಪದಕಟ್ಟಿಮಠದ ಮುಮ್ಮಡಿ ಚಂದ್ರಶೇಖರ ಶಿವಾಚಾರ್ಯ ಶ್ರೀಗಳು, ತುಪ್ಪದ ಕುರಹಟ್ಟಿಯ ಭೂಸನೂರ ಸಂಸ್ಥಾನಮಠದ ವಾಗೀಶ ಪಂಡಿತಾರಾಧ್ಯ ಶಿವಾಚಾರ್ಯ ಶ್ರೀಗಳು, ನರಗುಂದ ಪಂಚಗ್ರಹ ಗುಡ್ಡದ ಹಿರೇಮಠದ ಅಭಿನವ ಸಿದ್ಧಲಿಂಗ ಶಿವಾಚಾರ್ಯ ಶ್ರೀಗಳು, ಹಿರೇವಡ್ಡಟ್ಟಿಯ ಹಿರೇಮಠದ ವೀರೇಶ್ವರ ಶಿವಾಚಾರ್ಯ ಶ್ರೀಗಳು, ಸೊರಟೂರಿನ ಕ್ಕೀರೇಶ್ವರ ಶ್ರೀಗಳು ಸೇರಿದಂತೆ ವಿವಿಧ ಮಠಾಧೀಶರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net