ಅಬ್ಬಿಗೇರಿ ಗ್ರಾಮದಲ್ಲಿ ಬಾಳೆಹೊನ್ನೂರು ರಂಭಾಪುರಿ ಜಗದ್ಗುರುಗಳ ಶರನ್ನವರಾತ್ರಿ, ದಸರಾ ಧರ್ಮ ಸಮ್ಮೇಳನ ಆಯೋಜನೆ.

30GDG03
ದಸರಾ ಮಹೋತ್ವಸ ಕುರಿತು ಸುದ್ದಿಗೋಷ್ಟಿಯಲ್ಲಿ ಸಿದ್ದರಬೆಟ್ಟ ಕ್ಷೇತ್ರದ ವೀರಭದ್ರ ಶಿವಾಚಾರ್ಯರು ಮಾತನಾಡಿದರು. ಜಿ.ಎಸ್​. ಪಾಟೀಲ, ಮಲ್ಲಿಕಾರ್ಜುನ ಶಿವಾಚಾರ್ಯರು. ಚಂದ್ರು ಬಾಳಿಹಳ್ಳಿಮಠ, ವಿರೇಶ ಕೂಗು, ವೀರಯ್ಯ ಸೋಮನಕಟ್ಟಿಮಠ ಹಲವರು ಇದ್ದರು.
Published on

ವಿಜಯವಾಣಿ ಸುದ್ದಿಜಾಲ ಗದಗ
ಜಿಲ್ಲೆಯ ರೋಣ ತಾಲೂಕಿನ ಅಬ್ಬಿಗೇರಿ ಗ್ರಾಮದಲ್ಲಿ ಅ. 3 ರಿಂದ 12 ರವರೆಗೆ ಬಾಳೆಹೊನ್ನೂರು ವೀರಸಿಂಹಾಸನಾಧಿಶ್ವರ ಶ್ರೀ ಶ್ರೀ ಶ್ರೀ 1008 ಜಗದ್ಗುರು ಪ್ರಸ್ನನ ರೇಣುಕ ಡಾ. ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರ ಶರನ್ನವರಾತ್ರಿ, ದಸರಾ ಧರ್ಮ ಸಮ್ಮೇಳನ ಜರುಗಲಿದೆ ಎಂದು ಸ್ವಾಗತ ಸಮಿತಿ ಗೌರವ ಅಧ್ಯಕ್ಷ, ಖನಿಜ ನಿಗಮದ ಅಧ್ಯಕ್ಷ, ರೋಣ ಶಾಸಕ ಜಿ. ಎಸ್​. ಪಾಟೀಲ ಹೇಳಿದರು.
ಸೋಮವಾರ ನಗರದ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಅ 3 ರಂದು ಸಂಜೆ 7 ಕ್ಕೆ ಶರನ್ನವರಾತ್ರಿ ದಸರಾ ಧರ್ಮ ಸಮ್ಮೇಳನ ಉದ್ಘಾಟನೆ ಜರುಗಲಿದೆ. ದಿವ್ಯ ಸಾನ್ನಿಧ್ಯವನ್ನು ರಂಭಾಪೂರಿ ಶ್ರೀಗಳು ವಹಿಸವರು. ಕಾರ್ಯಕ್ರಮವನ್ನು ಕೇಂದ್ರ ಸಚಿವ ವಿ. ಸೋಮಣ್ಣ ಉದ್ಘಾಟಿಸುವರು. ಅತಿಥಿಗಳಾಗಿ ಹಲವು ಹಿರಿಯ ಮುಖಂಡರು ಭಾಗವಹಿಸುವರು. ವಿಶೇಷ ಉಪನ್ಯಾಸ, ಗೌರವ ರಕ್ಷೆ, ಗುರು ರಕ್ಷೆ ಕಾರ್ಯಕ್ರಮಗಳು ಜರುಗಲಿವೆ.
ಅ. 4 ರಂದು ಸಂಜೆ 7ಕ್ಕೆ "ರಂಭಾಪುರಿ ಬೆಳಗು' ಪುಸ್ತಕ ಬಿಡುಗಡೆ ಜರುಗಲಿದ್ದು ಸಹಕಾರ ಸಚಿವ ಕೆ.ಎನ್​.ರಾಜಣ್ಣ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಎಸ್​. ಎಸ್​. ಮಲ್ಲಿಕಾರ್ಜುನ, ಚಿತ್ರನಟ ದೊಡ್ಡಣ್ಣ ಆಗಮಿಸುವರು. ಉಪನ್ಯಾಸ, ಗೌರವ ಶ್ರೀರಕ್ಷೆ, ಗುರು ರಕ್ಷೆಗಳು ಜರುಗಲಿವೆ.
ಅ 5 ರಂದು ಸಾಹಿತ್ಯ ಸಿರಿ ಪ್ರಶಸ್ತಿ ಪ್ರದಾನ, ಗುರು ಇಂಗ್ಲೀಷ್​ ಕೃತಿ ಬಿಡುಗಡೆ ಜರುಗಲಿದ್ದು, ಗೃಹ ಸಚಿವ ಡಾ.ಜಿ.ಪರಮೇಶ್ವರ, ಮಹಿಳಾ ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷಿ$್ಮ ಹೆಬ್ಬಾಳಕರ, ಶಿವಮೊಗ್ಗ ಸಂಸದ ಬಿ. ವೈ. ರಾವೇಂದ್ರ ಆಗಮಿಸುವರು.
ಅ. 6 ರಂದು ಭಾನುವಾರ ಸಂಜೆ 7 ಕ್ಕೆ ಜರುಗುವ ಕಾರ್ಯಕ್ರಮದಲ್ಲಿ ರಂಭಾಪುರಿ ಯುವಸಿರಿ ಪ್ರದಾನ ಜರುಗಲಿದ್ದು, ಮಾಜಿ ಸಿಎಂ, ಬೆಳಗಾವಿ ಸಂಸದ ಜಗದೀಶ ಶೆಟ್ಟರ, ಮಾಜಿ ಕೇಂದ್ರ ಸಚಿವ ಬಸವರಾಜ ಪಾಟೀಲ ಅನ್ವರಿ, ಮಾಜಿ ಸಚಿವ, ನರಗುಂದ ಶಾಸಕ ಸಿ.ಸಿ.ಪಾಟೀಲ, ಪದ್ಮಶ್ರೀ ವಿಜಯ ಸಂಕೇಶ್ವರ ಮುಂತಾದವರು ಆಗಮಿಸುವರು. ಉಪನ್ಯಾಸ, ಗುರು, ಗೌರವ ಶ್ರೀರಕ್ಷೆ ಕಾರ್ಯಕ್ರಮಗಳು ಜರುಗಲಿವೆ.
ಅ . 7 ರ ಸೋಮವಾರ ಜರುಗುವ ಕಾರ್ಯಕ್ರಮದಲ್ಲಿ ಬಾಲಕ- ಪಾಲಕ- ಶಿಕ್ಷಕ ನೀತಿ ಸಂಹಿತೆ ಕೃತಿ ಬಿಡುಗಡೆ ಜರುಗಲಿದ್ದು, ಸಚಿವ ಎಚ್​.ಕೆ.ಪಾಟೀಲ, ಅರಣ್ಯ ಸಚಿವ ಈಶ್ವರ ಖಂಡ್ರೆ ಮುಂತಾದವರು ಆಗಮಿಸುವರು. ಸಾವಯವ ಕೃಷಿ ಮಹತ್ವ ಕುರಿತು ಉಪನ್ಯಾಸ, ಗೌರವ ಶ್ರೀರಕ್ಷೆ, ಗುರು ರಕ್ಷೆ ಜರುಗಲಿವೆ.
ಅ. 8 ರ ಮಂಗಳವಾರ ಸಂಜೆ 7 ಕ್ಕೆ ವೀರಶೈವ ಸಿರಿ, ಕಾವ್ಯ ಕುಸುಮ ಕೃತಿಗಳು ಬಿಡುಗಡೆಯಾಗಲಿದ್ದು, ಡಿಸಿಎಂ ಡಿ. ಕೆ. ಶಿವಕುಮಾರ, ಜಿ. ಎಸ್​. ಪಾಟೀಲ, ನೇಮಿ ನಾಯಕ, ಸಂಗಣ್ಣ ಕರಡಿ, ಡಿ. ಆರ್​. ಪಾಟೀಲ, ಆನಂದಸ್ವಾಮಿ ಗಡ್ಡದೇವರಮಠ ಆಗಮಿಸುವರು. ಧಾಮಿರ್ಕತೆಯಲ್ಲಿ ಮಹಿಳೆಯ ಪಾತ್ರ ಕುರಿತು ಉಪನ್ಯಾಸ ಜರುಗಲಿದೆ.
ಅ.9 ರ ಬುಧವಾರ ಸಂಜೆ ಶಿವಾಚಾರ್ಯ ರತ್ನ ಪ್ರಶಸ್ತಿ ಪ್ರದಾನ ನಡೆಯಲಿದ್ದು, ಮಾಜಿ ಸಿಎಂ, ಹಾವೇರಿ ಸಂಸದ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ, ಸಂಸದ ಪಿ. ಸಿ. ಗದ್ದಿಗೌಡ್ರ, ಶಾಸಕ ಜಗದೀಶ ಗುಡಗುಂಟಿಮಠ, ಶರಣು ಸಲಗರ ಆಗಮಿಸಲಿದ್ದಾರೆ. ಅ 10 ರಂದು ಗುರುವಾರ ಸಾಧನ ಸಿರಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಜರುಗಲಿದೆ. ಬಳ್ಳಾರಿ ಶಾಸಕ ಭರತರೆಡ್ಡಿ ಸೇರಿದಂತೆ ಅನೇಕರು ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ. ಹಾಸ್ಯದಲ್ಲಿ ನೈತಿಕ ಮೌಲ್ಯಗಳು ಕುರಿತು ಗಂಗಾವತಿ ಪ್ರಾಣೇಶ್​ ಉಪನ್ಯಾಸ ನೀಡುವರ. ಅ. 11 ರಂದು ಸಂಜೆ 7 ಕ್ಕೆ ರುದ್ರಗಣಾಧಿಪ ವೀರಭದ್ರ ಹಾಗೂ ಶ್ರೀಪಿಠದ ವಾರ್ತಾ ಸಂಕಲನ ಬಿಡುಗಡೆ ಜರುಗಲಿದೆ. ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ವಿಪ ಸದಸ್ಯ ಸಿ. ಟಿ. ರವಿ ಸೇರಿದಂತೆ ಅನೇಕ ಗಣ್ಯರು ಪಾಲ್ಗೊಳ್ಳುವರು. ಅ. 12 ರಂದು ಸಂಜೆ 4.30 ಕ್ಕೆ ವಿಜಯ ದಶಮಿಯ ಶಮೀಸೀಮೋಲಂನ, ಸಿಂಹಾಲನಾರೋಹಣ, ಶಾಂತಿ ಸಂದೇಶ ಕಾರ್ಯಕ್ರಮ ಜರುಗಲಿದೆ ಜಿ.ಎಸ್​. ಪಾಟೀಲ ಹೇಳಿದರು.
ಸ್ವಾಗತ ಸಮಿತಿಯ ಗೌರವಾಧ್ಯಕ್ಷ ಅಬ್ಬಿಗೇರಿ ಹಿರೇಮಠ ಮತ್ತು ಸಿದ್ದರಬೆಟ್ಟ ಕ್ಷೇತ್ರದ ವೀರಭದ್ರ ಶಿವಾಚಾರ್ಯರು ಮಾತನಾಡಿ, ಈ ಕಾರ್ಯಕ್ರಮವನ್ನು ಮತ್ತುಷ್ಟು ಮೆರಗುಗೊಳಿಸುವ ನಿಟ್ಟಿನಲ್ಲಿ ಸಮಾಜದಲ್ಲಿ ಸಾಧನೆ ಮಾಡಿದ ಸಾಧಕರಿಗೆ ಸನ್ಮಾನ ಹಾಗೂ ದಸರಾ ಮಹೋತ್ಸವದ ಅಂಗವಾಗಿ ಸಾಮಾಜಿಕ, ಶೈಕ್ಷಣಿಕ ಬೆಳವಣಿಗೆ ಪೂರಕವಾಗುವ ಯೋಜನೆಗಳನ್ನು ರೂಪಿಸಲಾಗಿದೆ. ಕೃಷಿ ಮೇಳ, ಉಚಿತ ಆರೋಗ್ಯ ತಪಾಸಣೆ, ಮಕ್ಕಳ ಆರೋಗ್ಯ, ಕಣ್ಣಿನ ತಪಾಸಣೆ ಸುಸಜ್ಜಿತವಾದ ತಾತ್ಕಾಲಿಕ ಆಸ್ಪತ್ರೆ ಸ್ಥಾಪನೆ ಮಾಡಲಾಗಿದೆ. ಪ್ರತಿ ದಿನವೂ 25 ಸಾವಿರಕ್ಕಿಂತಲೂ ಅಧಿಕ ಸಂಖ್ಯೆಯ ಭಕ್ತರು ಪಾಲ್ಗೊಳ್ಳಲು ನಿರೀಕ್ಷೆ ಇದೆ. ಎಲ್ಲ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದರು.
ಸುದ್ದಿಗೋಷ್ಟಿಯಲ್ಲಿ ನರೇಗಲ್ಲ ಪಟ್ಟಣದ ಮಲ್ಲಿಕಾರ್ಜುನ ಶಿವಾಚಾರ್ಯರು. ಚಂದ್ರು ಬಾಳಿಹಳ್ಳಿಮಠ, ವಿರೇಶ ಕೂಗು, ವೀರಯ್ಯ ಸೋಮನಕಟ್ಟಿಮಠ ಹಲವರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net