“ಉನ್ನತ ಶಿಕ್ಷಣ: ಅವಕಾಶಗಳು ಮತ್ತು ಸವಾಲುಗಳು”

09GDG01
Published on
ಗದಗ: ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ, ಗದಗ ಇವರ ಆಶ್ರಯದಲ್ಲಿ “ಉನ್ನತ ಶಿಕ್ಷಣ: ಅವಕಾಶಗಳು ಮತ್ತು ಸವಾಲುಗಳು” ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಾಗಾರವನ್ನು ವಿಶ್ವವಿದ್ಯಾಲಯದ ಕೌಶಲ್ಯ ವಿಕಾಸ ಭವನದಲ್ಲಿ ಜರುಗಿಸಲಾಯಿತು
ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್‌ನ ಮಾಜಿ ಅಧ್ಯಕ್ಷರು ಹಾಗೂ ಬೆಂಗಳೂರು ವಿಶ್ವವಿದ್ಯಾಲಯದ ಮಾಜಿ ಕುಲಪತಿಗಳಾದ *ಪ್ರೊ. ಡಾ. ಬಿ. ತಿಮ್ಮೇಗೌಡ ಅವರು ಉದ್ಘಾಟಿಸಿದರು. ಅವರು ಮಾತನಾಡಿ, “ಉನ್ನತ ಶಿಕ್ಷಣವನ್ನು ಅಂತರಾಷ್ಟ್ರೀಯ ಮಟ್ಟದೊಂದಿಗೆ ಸಂಯೋಜಿಸುವ ಪ್ರಕ್ರಿಯೆ ಅಗತ್ಯ. ಅಧ್ಯಾಪಕರು ನವೀಕೃತ ಪಠ್ಯಕ್ರಮದ ಕುರಿತು ಹೆಚ್ಚಿನ ಆಸಕ್ತಿ ತೋರಬೇಕು. ವಿದ್ಯಾರ್ಥಿಗಳಿಗೆ ಹೊಸ ಅವಕಾಶಗಳನ್ನು ಕಲ್ಪಿಸುವಲ್ಲಿ ಬೋಧನೆ ಮತ್ತು ಸಂಶೋಧನೆ ಸಮನ್ವಯಗೊಳ್ಳಬೇಕು*” ಎಂದು ಅಭಿಪ್ರಾಯಪಟ್ಟರು.
ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದ ಕುಲಪತಿ *ಪ್ರೊ. ಡಾ. ಎ.ಎಂ. ಖಾನ್ ಅವರು, “ಉನ್ನತ ಶಿಕ್ಷಣದಲ್ಲಿ ತಂತ್ರಜ್ಞಾನ ಪ್ರಮುಖ ಪಾತ್ರ ವಹಿಸುತ್ತಿದೆ. ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಅಧ್ಯಾಪಕರು ಪ್ರಮುಖ ಹೊಣೆಗಾರಿಕೆಯನ್ನು ನಿಭಾಯಿಸಬೇಕು. ಹೊಸ ತಂತ್ರಜ್ಞಾನಗಳನ್ನು ಕಲಿಕೆಗೆ ಅಳವಡಿಸಿಕೊಂಡಾಗ ಉತ್ತಮ ಅವಕಾಶಗಳು ವಿದ್ಯಾರ್ಥಿಗಳ ಕೈಗೆಟುಕುತ್ತವೆ*” ಎಂದು ಹೇಳಿದರು.
ಹೆಡ್ ಹೆಲ್ಡ್ ಹೈ ಫೌಂಡೇಶನ್‌ನ ಟ್ರಸ್ಟಿ *ಶ್ರೀ ಮದನ್ ಪಡಕಿ ಅವರು, “ಉನ್ನತ ಶಿಕ್ಷಣವು ವಿದ್ಯಾರ್ಥಿಗಳನ್ನು ಸರ್ವತೋಮುಖ ಸಮರ್ಥರನ್ನಾಗಿ ರೂಪಿಸುವ ಜೊತೆಗೆ, ಸ್ಥಳೀಯ ಮಟ್ಟದಲ್ಲಿ ಸಮಾಜಕ ಸಂಯೋಜನೆ ಹಾಗೂ ಉದ್ಯಮಶೀಲತೆಯನ್ನು ಬೆಳೆಸಲು ಸಾಕಷ್ಟು ಅವಕಾಶಗಳನ್ನು ಒದಗಿಸುತ್ತದೆ*” ಎಂದು ಅಭಿಪ್ರಾಯಪಟ್ಟರು.
ಐಐಐಟಿ ಧಾರವಾಡದ ನಿರ್ದೇಶಕರಾದ *ಪ್ರೊ. ಮಹಾದೇವ ಪ್ರಸನ್ನ ಅವರು ಮಾತನಾಡಿ, “ವಿದ್ಯಾರ್ಥಿಗಳು  ಪದವಿಯನ್ನು ಏಕೆ ಅಧ್ಯಯನ ಮಾಡುತ್ತಿದ್ದಾರೆ ಎಂಬುದರ ಕುರಿತು ಸ್ಪಷ್ಟ ಪರಿಕಲ್ಪನೆ ಹೊಂದಿರಬೇಕು. ಅಧ್ಯಾಪಕರು ಪ್ರಸ್ತುತ ತಂತ್ರಜ್ಞಾನದ ಸರಿಯಾದ ಬಳಕೆಯ ಮೂಲಕ ವಿದ್ಯಾರ್ಥಿಗಳ ಕಲಿಕೆಯನ್ನು ಹೆಚ್ಚು ಪರಿಣಾಮಕಾರಿಯಾಗಿ ಮಾಡಬಹುದು*” ಎಂದು ತಿಳಿಸಿದರು.
 ಪದವಿ ಕಾಲೇಜು ಶಿಕ್ಷಣ ಇಲಾಖೆಯ ಧಾರವಾಡ ವಿಭಾಗದ ಜಂಟಿ ನಿರ್ದೇಶಕರಾದ *ಶ್ರೀಮತಿ ಕರಿಮುನ್ನಾಸಾ ಸಯ್ಯೇದ್ ಅವರು ವಿಶೇಷವಾಗಿ ಮಾತನಾಡಿ, ಉನ್ನತ ಶಿಕ್ಷಣ ಕ್ಷೇತ್ರದ ಪ್ರಸ್ತುತ ಸವಾಲುಗಳು ಮತ್ತು ನಿರೀಕ್ಷೆಗಳ ಕುರಿತು ತಮ್ಮ ಅಭಿಪ್ರಾಯ ಹಂಚಿಕೊಂಡರು*.
ಅಧ್ಯಕ್ಷತೆಯನ್ನು ವಿಶ್ವವಿದ್ಯಾಲಯದ  ಕುಲಪತಿಳಾದ(ಪ್ರಭಾರ) ಹಾಗೂ ಕುಲಸಚಿವರಾದ *ಪ್ರೊ. ಡಾ. ಸುರೇಶ ವಿ. ನಾಡಗೌಡರ ಅವರು ವಹಿಸಿ, “ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಹೊಸ ಅವಕಾಶಗಳನ್ನು ವಿದ್ಯಾರ್ಥಿಗಳು ಬಳಸಿಕೊಳ್ಳುವುದರೊಂದಿಗೆ, ಸಂಶೋಧನೆ ಹಾಗೂ ನವೋದ್ಯಮದ ಮೂಲಕ ಸಮಾಜಮುಖಿ ಕಾರ್ಯಕ್ಕೆ ದಾರಿತೋರಬೇಕು*” ಎಂದು ಅಭಿಪ್ರಾಯಪಟ್ಟರು.
ವಿಶ್ವವಿದ್ಯಾಲಯದ ಆಡಳಿತಾತ್ಮಕ ಅಧಿಕಾರಿಗಳಾದ  ಶಶಿಭೂಷಣ್ ದೇವುರ್, ಮೃತ್ಯುಂಜಯ ಮೆಣಸಿನಕಾಯಿ ವಿಶೇಷ ಅಧಿಕಾರಿ (ಶೈಕ್ಷಣಿಕ) ಶ್ರೀ ಎಂ.ಬಿ. ಚನ್ನಪ್ಪಗೌಡರ್, ಐಕ್ಯೂಎಸಿ ಸಂಯೋಜಕ ಡಾ. ಸಂತೋಷ್ ಕುಮಾರ್ ಪಿ.ಕೆ ಸೇರಿದಂತೆ ವಿಶ್ವವಿದ್ಯಾಲಯದ ಅಧ್ಯಾಪಕರು, ಸಿಬ್ಬಂದಿಗಳು, ವಿದ್ಯಾರ್ಥಿಗಳು ಹಾಗೂ ವಿವಿಧ ಪದವಿ ಕಾಲೇಜಿನ ಅಧ್ಯಾಪಕರು ಸಮಿನಾರ್ ನಲ್ಲಿ ಪಾಲ್ಗೊಂಡಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net