

ಗದಗ: ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ 7 ದಿನಗಳ ಪ್ರವಾಸಿ ಗೈಡ್‌ಗಳಿಗೆ ತರಬೇತಿಯ ಕಾರ್ಯಕ್ರಮದ ಉದ್ಗಾಟನೆ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು.
ತರಬೇತಿ ಕಾರ್ಯಕ್ರಮಕ್ಕೆ ಪ್ರವಾಸೋಧ್ಯಮ ಇಲಾಖೆಯ ನಿರ್ದೇಶಕರಾದ ರಾಮಪ್ರಸಾದ ಮನೋಹರ ಭಾ.ಆ.ಸೇ ಇವರು ಭಾಗವಹಿಸಿ ಮಾತನಾಡುತ್ತಾ ಪ್ರವಾಸಿ ಗೈಡಗಳಿಗೆ ಇಂತಹ ತರಬೇತಿ ಕಾರ್ಯಕ್ರಮಗಳು ಅತಿ ಅವಶ್ಯಕವಾಗಿದೆ ಎಂದು ತಿಳಿಸಿದರು. ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯವು ಈ ತರಹದ ತರಬೇತಿ ಕಾರ್ಯಕ್ರಮ ಆಯೋಜಿಸಿದಕ್ಕೆ ವಿಶ್ವವಿದ್ಯಾಲಯಕ್ಕೆ ಧನ್ಯವಾದಗಳನ್ನು ತಿಳಿಸಿದರು.
ಮುಂದುವರೆದು, ಮಾತನಾಡಿ, ಪ್ರವಾಸಿ ಗೈಡ್‌ಗಳು ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರವಾಸಿಗರಿಗೆ ಸೌಹಾರ್ಧಿತವಾಗಿ ಪ್ರವಾಸಿ ತಾಣಗಳ ಗತವೈಭವ ಕುರಿತು ಮಾಹಿತಿ ನೀಡಬೇಕು ಮತ್ತು ನಮ್ಮ ಸಂಸ್ಕೃತಿ ಮತ್ತು ಪರಂಪರೆ ಬಗ್ಗೆ ಪರಿಚಯಿಸಿ ಪ್ರವಾಸಿಗರಿಗೆ ಪ್ರವಾಸಿ ತಾಣಗಳ ಬಗ್ಗೆ ಗೌರವ ಮತ್ತು ಹೆಮ್ಮೆ ಉಂಟು ಮಾಡಬೇಕೆಂದು ಆಗ್ರಹಿಸಿದರು.
ಪ್ರಸ್ತೂತ ಪ್ರವಾಸೋಧ್ಯಮವು ಹೆಚ್ಚು ಪ್ರಖ್ಯಾತಿ ಪಡೆದಿರುವದರಿಂದ ಪ್ರವಾಸಿ ಗೈಡಗಳು ಈ ಕಾಲದಲ್ಲಿ ನವೀನ ತಂತ್ರಜ್ಙಾನಗಳ ಕುರಿತು ಜ್ಞಾನ ಹೆಚ್ಚಿಸಕೊಳ್ಳಬೇಕು ಎಂದು ಅಭಿಪ್ರಾಯಪಟ್ಟರು.
ಇದೇ ಸಂದAರ್ಭದಲ್ಲಿ, ಪ್ರವಾಸಿ ಗೈಡ್‌ಗಳ ಹಲವಾರು ಬೇಡಿಕೆಗಳ ಕುರಿತು ಸರಕಾರದ ಗಮನಕ್ಕೆ ತಂದು ಪರಿಹರಿಸುವುದಾಗಿ ತಿಳಿಸಿದರು. ಪ್ರೋ. ಡಾ. ಸುರೇಶ ನಾಡಗೌಡರ್, ಕುಲಪತಿಗಳು(ಪ್ರಭಾರ) ಮತ್ತು ಕುಲಸಚಿವರು ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ, ಗದಗ ಇವರು ಅಧ್ಯಕ್ಷತೆವಹಿಸಿ ಮಾತನಾಡುತ್ತಾ, ಪ್ರವಾಸೋಧ್ಯಮ ಇಲಾಖೆಯ ನಿರ್ದೇಶಕರು ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ಸೂಕ್ತ ಸಲಹೆ ನೀಡಿದಕ್ಕೆ ಧನ್ಯವಾದಗಳನ್ನು ತಿಳಿಸಿ ಮುಂಬರುವ ದಿನಗಳಲ್ಲಿ ಪ್ರವಾಸಿ ಗೈಡ್‌ಗಳಿಗೆ ವಿಶ್ವವಿದ್ಯಾಲಯದಿಂದ ಸರ್ಟಿಫಿಕೇಟ್, ಡಿಪ್ಲೋಮಾ ಕೋರ್ಸಗಳನ್ನು ಪ್ರಾರಂಭಿಸಲು ಕ್ರಮ ಜರುಗಿಸಲಾಗುವುದೆಂದು ತಿಳಿಸಿದರು.
ವಿಶ್ವವಿದ್ಯಾಲಯದ ತರಬೇತಿ ವಿಭಾಗದ ಸಹಾಯಕ ನಿರ್ದೇಶಕರಾದ ಡಾ. ಅಬ್ದುಲ್ ಅಜೀಜ್ ಮುಲ್ಲಾ, ಗದಗ ಜಿಲ್ಲಾ ಪ್ರವಾಸೋಧ್ಯಮ ಇಲಾಖೆಯ ಸಹಾಯಕ ನಿರ್ದೇಶಕರಾದ , ಕೋಟ್ರೇಶ್ವರ ವಿಬೂತಿ ಹಾಗೂ ಇತರ ಅಧಿಕಾರಿಗಳು ಭಾಗವಹಿಸಿದ್ದರು.