ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ ಅಭಿಯಾನ

WhatsApp Image 2024-10-10 at 5.12.13 PM
Published on

 ಬೇಡಿಕೆ ಆಧಾರಿತ ಕ್ರೀಯಾ ಯೋಜನೆ ಸಿದ್ಧಪಿಡಿಸಿ: ಚಂದ್ರಶೇಖರ ಬಿ ಕಂದಕೂರ

ರೋಣ : ಮತಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ 2025-26 ನೇ ಸಾಲಿನ ಕಾರ್ಮಿಕ ಆಯವ್ಯಯ ತಯ್ಯಾರಿಸಲು ಇಲಾಖೆ ಸಿದ್ಧ ಪಡಿಸಿದ ವೇಳಾಪಟ್ಟಿಯಂತೆ ಬೇಡಿಕೆ ಆಧಾರಿತ ಕ್ರಿಯಾಯೋಜನೆಯನ್ನು ಸಿದ್ದಪಡಿಸಿ ಇಲಾಖೆಗೆ ಸಲ್ಲಿಸಬೇಕು ಎಂದು ತಾಲ್ಲೂಕು ಪಂಚಾಯತ್ ಸಹಾಯಕ ನಿರ್ದೇಶಕ ಚಂದ್ರಶೇಖರ ಬಿ ಕಂದಕೂರ ಹೇಳಿದರು.

ತಾಲೂಕಿನ ಸವಡಿ ಗ್ರಾಮ ಪಂಚಾಯತಿಯಲ್ಲಿ ಹಮ್ಮಿಕೊಂಡಿದ್ದ ಉದ್ಯೋಗ ಖಾತರಿ ನಡಿಗೆ ಸಬಲತೆಯೆಡಗೆ ಅಭಿಯಾನ ಕಾಮಗಾರಿ ಬೇಡಿಕೆ ಪಡೆದುಕೊಳ್ಳುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಪ್ರತಿಯೊಂದು ಮನೆ ಮನೆಗೆ ಭೇಟಿ ನೀಡಿ ಜಾಗೃತಿ ಮೂಡಿಸಿ ಬೇಡಿಕೆ ಸ್ವೀಕರಿಸಬೇಕು, ಗಂಡು-ಹೆಣ್ಣಿಗೆ ಸಮಾನ ಕೂಲಿ, ಯೋಜನೆಯಡಿ ದೊರೆಯುವ ವಯಕ್ತಿಕ ಸೌಲಭ್ಯ ಅರ್ಹತೆಗಳು, ಗ್ರಾಮೀಣ ಪ್ರದೇಶದಲ್ಲಿ ಕುಟುಂಬಕ್ಕೆ 100 ದಿವಸ ಕೆಲಸ ಖಾತರಿ ಸೇರಿದಂತೆ ನರೇಗಾ ಯೋಜನೆ ಸಂಪೂರ್ಣ ಮಾಹಿತಿ ನೀಡಬೇಕು ಎಂದರು.

ಕ್ರೀಯಾ ಯೋಜನೆ ಪಟ್ಟಿಯಂತೆ ಪ್ರತಿ ಗ್ರಾಮ ಪಂಚಾಯತಿಯಲ್ಲಿ ಕೆಲಸ ನೀಡುವ ನರೇಗಾ ಸಿಬ್ಬಂದಿಗಳು ಮನೆ ಮನೆಗೆ ಭೇಟಿ ನೀಡಿ ಜಾಗೃತಿ ಮೂಡಿಸಬೇಕು, 30 ವರೆಗೆ ಗ್ರಾಮ ಪಂಚಾಯತ್ ಮಟ್ಟದ ವಾರ್ಷಿಕ ಕ್ರೀಯಾ ಯೋಜನೆಯ ಅನುಮೋದನೆ ಗಾಗಿ ವಿಶೇಷ ಗ್ರಾಮ ಸಭೆ ಮಾಡಬೇಕು, 5 ರ ಒಳಗೆ ಗ್ರಾಮ ಪಂಚಾಯತಿಯ ವಾರ್ಷಿಕ ಕ್ರೀಯಾ ಯೋಜನೆಯನ್ನು ತಾಲ್ಲೂಕು ಪಂಚಾಯತಿಗೆ ಸಲ್ಲಿಸಬೇಕು ಎಂದರು.

ಇನ್ನು ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಗ್ರಾಮದ ಮನೆ ಮನೆಗೆ ನರೇಗಾ ಯೋಜನೆಯ ಕುರಿತು ಕರಪತ್ರ ನೀಡಿ ಬೇಡಿಕೆ ಸ್ವೀಕರಿಸಲಾಗುತ್ತಿದ್ದು ಯಾವುದೇ ಮಾಹಿತಿ ಮತ್ತು ಕುಂದು ಕೊರತೆಗಾಗಿ 8277506000 ಏಕೀಕೃತ ಸಹಾಯವಾಣಿ ಸಂಖ್ಯೆಗೆ ಕರೆ ಮಾಡಿ ಮಾಹಿತಿ ಪಡೆದುಕೊಳ್ಳಲು ಸಲಹೆ ನೀಡಿದರು. ಒಂದು ದಿನದ ಕೂಲಿ ಪಡೆಯಲು ಮಾಡಬೇಕಾದ ಕೆಲಸ ಪ್ರಮಾಣ ಮತ್ತು ಕೆಲಸದ ಅವಧಿ, ಯೋಜನೆ ಅಡಿ ದೊರೆಯುವ ವೈಯಕ್ತಿಕ ಸೌಲಭ್ಯಗಳು ಮತ್ತು ಅರ್ಹತೆ ಗಳು, ಕಾಮಗಾರಿ ಪ್ರಮಾಣದಲ್ಲಿ ಗ್ರಾಮ ಸಭೆಗಳನ್ನು ಪಂಚಾಯತ್ ರಾಜ್ ಕಾಯ್ದೆಯ ನಿಯಮನುಸಾರ ನವೆಂಬರ್ 30 ರೊಳಗೆ ಆಯೋಜಿಸಿ ವಾರ್ಡ್ ಸಭೆಗಳಲ್ಲಿ ಸ್ವೀಕೃತವಾದ ಕಾಮಗಾರಿಗಳ ಕ್ರೋಡೀಕೃತ ಪಟ್ಟಿಯನ್ನು ತಯಾರಿಸಿ ಅದರಲ್ಲಿ ಆದ್ಯತವಾರು ಪಟ್ಟಿಯನ್ನು ಸಿದ್ಧಪಡಿಸಿ ಗ್ರಾಮ ಸಭೆಯಲ್ಲಿ ಮಂಡಿಸಿ ಅನುಮತಿ ಪಡೆದುಕೊಳ್ಳಬಹುದೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಪಂಚಾಯತ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು, ತಾಂತ್ರಿಕ ಸಹಾಯಕರು, ಇಂಜಿನಿಯರ, ಬಿಎಫ ಟಿ ಹಾಗೂ ಗ್ರಾಮಸ್ಥರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net