

ವಿಜಯವಾಣಿ ಸುದ್ದಿಜಾಲ ಗದಗ
ರಾಷ್ಟ್ರ ಮಟ್ಟದಿಂದ ತಾಲೂಕು ಮಟ್ಟದವರೆಗೆ ಕಾನೂನು ಸೇವೆಗಳ ಪ್ರಾಧಿಕಾರ ಕಾರ್ಯ ನಿರ್ವಹಿಸುತ್ತಿದೆ. ಈ ಮೂಲಕ ಜನರಲ್ಲಿ ಕಾನೂನು ಅರಿವು ಮೂಡಿಸುವುದರ ಜತೆಗೆ ಉಚಿತವಾಗಿ ಕಾನೂನು ನೆರವನ್ನು ನೀಡುತ್ತಿದೆ. ಬಡವರಿಗೆ, ನಿರ್ಗತಿಕರಿಗೆ ಉಚಿತವಾಗಿ ಕಾನೂನು ನೆರವನ್ನು ನೀಡುತ್ತಿದೆ ಎಂದು ಜಿಲ್ಲಾ ನ್ಯಾಯಾಧೀಶ ಬಸವರಾಜ ಹೇಳಿದರು.
ಕಾನೂನು ಸೇವೆಗಳ ಪ್ರಾಧಿಕಾರ ಸಹಯೋಗದೊಂದಿಗೆ ಎಸ್.ಎ. ಮಾನ್ವಿ ಕಾನೂನು ಮಹಾವಿದ್ಯಾಲಯದಲ್ಲಿ ಶನಿವಾರ ಏರ್ಪಡಿಸಿದ್ದ ರಾಷ್ಟ್ರೀಯ ಕಾನೂನು ಸೇವೆಗಳ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ನಮ್ಮ ಸಂವಿಧಾನದಲ್ಲಿ ಅಶಕ್ತರು, ರ್ದುಬಲರು ಸೇರಿದಂತೆ ಎಲ್ಲರಿಗೂ ಕಾನೂನು ದೊರೆಯಬೇಕು ಎಂಬ ಆಶಯ ಇದೆ. ಆ ಆಶಯವನ್ನು ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ನೆರವೇರಿಸುತ್ತಿದೆ ಎಂದು ತಿಳಿಸಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದಶಿರ್ ಸಿ. ಎಸ್. ಶಿವನಗೌಡ್ರ ಮಾತನಾಡಿ, ಪ್ರಾಧಿಕಾರದ ವ್ಯಾಪ್ತಿ ಬಹಳ ವಿಶಾಲವಾಗಿದೆ. ಇದು ಜನರಲ್ಲಿ ನಿರಂತರವಾಗಿ ಸೇವೆಗಳನು, ಸಲಹೆಗಳನ್ನು ಉಚಿತವಾಗಿ ನೀಡುತ್ತ ಬಂದಿದೆ. ಬಡವರಿಗೆ, ಮಹಿಳೆಯರಿಗೆ ಉಚಿತವಾಗಿ ಕಾನೂನು ನೇರವು ನೀಡುತ್ತಿದೆ. ಯಾವುದೇ ವ್ಯಾಜ್ಯ ನ್ಯಾಯಾಲಯದ ಎದುರು ಬಂದಾಗ ವಾದ ವಿವಾದಗಳನ್ನು ಆಲಿಸಿ ತೀರ್ಪು ನೀಡಲಾಗುತ್ತದೆ. ತೀರ್ಪು ಬರಲು ಹೆಚ್ಚಿನ ಸಮಯ ಬೇಕಾಗುತ್ತದೆಯಾದರೂ ಪ್ರಕರಣದಲ್ಲಿ ಕೊನೆಗೆ ಒಬ್ಬರ ಗೆಲುವು, ಇನ್ನೊಬ್ಬರ ಸೋಲಾಗುತ್ತದೆ. ಆದರೆ ಎರಡೂ ಕಕ್ಷಿದಾರರ ಒಪ್ಪಿಗೆಯಿಂದ ಲೋಕ ಆದಾಲತ್ನಲ್ಲಿ ರಾಜೀ ಸಂಧಾನಕ್ಕೆ ಮುಂದಾಗಿ ಪ್ರಕರಣ ಬಗೆಹರಿಸಿಕೊಂಡರೆ ಇಬ್ಬರೂ ಗೆಲ್ಲತ್ತಾರೆ. ಜತೆಗೆ ವ್ಯಾಜ್ಯಗಳ ಸಂಖ್ಯೆ ಕಡಿಮೆ ಆಗುತ್ತದೆ. ಸಾಕಷ್ಟು ಸಮಯ ಉಳಿಯುತ್ತದೆ ಎಂದರು.
ಜಿಲ್ಲಾ ನ್ಯಾಯವಾದಿಗಳ ಸಂದ ಅಧ್ಯಕ್ಷ ಎಂ. ಐ. ಹಿರೇಮನಿಪಾಟೀಲ ಮಾತನಾಡಿ, ನ್ಯಾಯದಿಂದ ಅರ್ಹರು ವಂಚಿತ ಆಗಬಾರದು ಎಂಬ ಉದ್ದೇಶದಿಂದ ಕಾನೂನು ಸೇವೆಗಳ ಪ್ರಾಧಿಕಾರವನ್ನು ರಚಿಸಲಾಗಿದೆ. ಈ ಮೂಲಕ ಕಾನೂನು ಅರಿವು ಹಾಗೂ ನೆರವನ್ನು ನೀಡಲಾಗುತ್ತಿದೆ. ಇದರ ಸದುಪಯೋಗ ಪಡೆಯಬೇಕು ಎಂದರು.
ಕಾನೂನು ನೆರವು ಅಭಿರಕ್ಷಕ ಎಸ್. ವಿ. ಗ್ರಾಮಪುರೋಹಿತ ಮಾತನಾಡಿ, ನಮ್ಮ ಸಂವಿಧಾನದಲ್ಲಿ ಸರ್ವರಿಗೂ ನ್ಯಾಯ ದೊರಕಬೇಕು ಎಂಬ ಆಶಯ ಇದೆ. ಅದು ನಮ್ಮ ಮೂಲಭೂತ ಹಕ್ಕು ಹೌದು. ಈ ಹಿನ್ನೆಲೆಯಲ್ಲಿ ಕಾನೂನು ಸೇವೆಗಳ ಕಾಯ್ದೆ ಜಾರಿಗೆ ಬಂದಿದೆ. ಪ್ರಾಧಿಕಾರದಿಂದ ಸಿವಿಲ್ ಹಾಗೂ ಕ್ರಿಮಿನಲ್ ಪ್ರಕರಣಗಳಲ್ಲಿ ಬಡವರಿಗೆ ನೆರವನ್ನು ನೀಡುತ್ತಿದೆ ಎಂದರು.
ಪ್ರಾಚಾರ್ಯ ಜೈಹನುಮಾನ ಎಚ್.ಕೆ. ಮಾತನಾಡಿ, ಕಾನೂನು ನೆರವು ನೀಡುವವಲ್ಲಿ ಕಾನೂನು ವಿದ್ಯಾಥಿರ್ಗಳ ಪಾತ್ರ ಪ್ರಮುಖವಾಗಿದೆ. ವಿದ್ಯಾಥಿರ್ ಹಂತದಿಂದಲೇ ರ್ದುಬಲರಿಗಾಗಿ ಸಹಾನುಭೂತಿ ಹೊಂದುವ ಮೂಲಕ ಅವರಿಗೆ ನ್ಯಾಯ ದೊರಕಿಸಲು ಮುಂದಾಗುವ ಮೂಲಕ ತಮ್ಮ ವ್ಯಕ್ತಿತ್ವ ವಿಕಸನಗೊಳಿಸಬೇಕು ಎಂದರು.
ಶರತಕುಮಾರ, ಜ್ಯೋತಿ ಸಿ. ವಿ., ಪ್ರೊ. ವಿ. ವಿ. ಮುರದಂಡೆ ಹಲವರು ಇದ್ದರು.