ಎಸ್​ಸಿಪಿ ಮತ್ತು ಟಿಎಸ್​ಪಿ ಅನುದಾನದ ದುರ್ಬಳಕೆ ತಡೆಯುವಂತೆ ಸ್ಲಂ ಸಮಿತಿಯಿಂದ ಸಿಎಂ ಅವರಿಗೆ ಮನವಿ

01GDG06
Published on

ವಿಜಯವಾಣಿ ಸುದ್ದಿಜಾಲ ಗದಗ
ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ ಸರ್ಕಾರ ಗೆಲ್ಲುವುದಕ್ಕಾಗಿಯೇ 5 ಗ್ಯಾರಂಟಿಗಳನ್ನು ಘೋಷಣೆ ಮಾಡಿತು. ಈ ಗ್ಯಾರಂಟಿ ಯೋಜನೆಗಳನ್ನು ನಿಭಾಯಿಸಲು ಎಸ್​ಸಿಪಿ ಮತ್ತು ಟಿಎಸ್​ಪಿ ವಿಶೇಷ ಅನುದಾನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಅನುದಾನದ ದುರ್ಬಳಕೆಯನ್ನು ನಿಯಂತ್ರಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಸ್ಲಂ ಜನಾಲೋಂದನ ಸಮಿತಿ ಸದಸ್ಯರು ಜಿಲ್ಲಾಧಿಕಾರಿಗಳ ಮೂಲಕ ಗುರುವಾರ ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.
ಅನ್ನ ಭಾಗ್ಯ ಯೋಜನೆಗೆ ಪರಿಶಿಷ್ಟ ಜಾತಿ, ಪಂಗಡಗಳ ಅನುದಾನ ಹಂಚಿಕೆ ಮಾಡಲಾಗುತ್ತಿದೆ. ಅನರ್ಹರಿಗೆ ಗೃಹಲಕ್ಷಿ$್ಮ ಯೋಜನೆಯ ಲಾಭ ಸಿಗುತ್ತಿದೆ. ಅನುದಾನ ದುರ್ಬಳಕೆ ಆಗಿದ್ದರಿಂದ ಅಕ್ರಮ ಎಸಗಿದವರನ್ನು ಕಾನೂನಿನ ಅಡಿಯಲ್ಲಿ ಶಿೆಗೆ ಗುರಿಪಡಿಸಿಬೇಕು ಎಂದು ಸದಸ್ಯರು ಆಗ್ರಹಿಸಿದರು.
ಅಶೋಕ ಕುಸಬಿ, ರವಿಕುಮಾರ ಬೆಳಮಕರ, ಇಬ್ರಾಹಿಂ ಮುಲ್ಲಾ, ಮಂಜುನಾಥ ಶ್ರೀಗಿರಿ, ಮೆಹರುನಿಸಾ ಢಾಲಾಯತ, ಪ್ರೇಮಾ ಮಣವಡ್ಡರ, ಸುಶೀಲಮ್ಮ ಗೊಂದಾರ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net