ವಿಶ್ವ ಆಹಾರ ದಿನಾಚರಣೆ ಹಾಗು ಪ್ರತಿಜ್ಞಾ ವಿಧಿ.

1760792500721
Published on
ಗಜೇಂದ್ರಗಡ: ತಾಲೂಕಿನ ರಾಜೂರಿನ ಸಂಗೊಳ್ಳಿ ರಾಯಣ್ಣ ಪ್ಯಾರಾ ಮೆಡಿಕಲ್ ಸೈನ್ಸಸ್ ಕಾಲೇಜ್ ಹಾಗೂ ಶ್ರೀ ಬಸವೇಶ್ವರ ಕನ್ನಡ ಪ್ರಾಥಮಿಕ ಶಾಲೆಗಳ ಇವುಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಆಹಾರ ದಿನಾಚರಣೆಯನ್ನು ಆಚರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಶ್ರೀ ಕೆ. ಬಿ. ಬೆನಕನವಾರಿ ಅವರು ಆಹಾರವು ಮಾನವನ ಮೂಲಭೂತ ಹಕ್ಕುಗಳಲ್ಲಿ ಒಂದು. ಇದಿಲ್ಲದೆ ಮನುಷ್ಯ ಮಾತ್ರವಲ್ಲ ಭೂಮಿಯ ಮೇಲಿನ ಯಾವ ಜೀವಿಯೂ ಬದುಕುವುದು ಕಷ್ಟ. ಅದಕ್ಕಾಗಿ ಆಹಾರವನ್ನು ವ್ಯರ್ಥ ಮಾಡಬಾರದು. ಅದೆಷ್ಟೋ ಜನರು ಒಪ್ಪೊತ್ತಿನ ಊಟಕ್ಕೂ ಕಷ್ಟದಿಂದ ಹಸಿವಿನಿಂದ ದಿನ ದೂಡುತ್ತಿದ್ದಾರೆ. ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಆಹಾರದ ಮಹತ್ವ ಮತ್ತು ಜಾಗತಿಕ ಹಸಿವಿನ ಸಮಸ್ಯೆಯನ್ನು ಎತ್ತಿ ತೋರಿಸುವ ಉದ್ದೇಶದಿಂದ ಪ್ರತಿವರ್ಷ ಅಕ್ಟೋಬರ್ 16 ರಂದು ವಿಶ್ವ ಆಹಾರ ದಿನವನ್ನು ಆಚರಿಸಲಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು. ನಂತರ ವಿಶ್ವ ಆಹಾರ ದಿನದ ಅಂಗವಾಗಿ ಆಹಾರವನ್ನು ಪೋಲು ಮಾಡದಂತೆ ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು, ವಿದ್ಯಾರ್ಥಿಗಳು ತಮ್ಮ ಊಟದ ಡಬ್ಬಿಯನ್ನು ಹಿಡಿದು ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು.
ಕಾರ್ಯಕ್ರಮವನ್ನು ವಿದ್ಯಾರ್ಥಿನಿ ಕು. ಚೈತ್ರಾ ರಾಠೋಡ್ ನಿರೂಪಿಸಿದರು, ಕು. ಕಿರಣ ರಾಠೋಡ್ ಸ್ವಾಗತಿಸಿದರು ಹಾಗೂ ಕು. ವಿದ್ಯಾಶ್ರೀ ಬೆನಕನವಾರಿ ವಂದಿಸಿದರು. ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕಿಯರಾದ ಶ್ರೀಮತಿ ಸುಮಂಗಲಾ ಗೊರವರ, ಶ್ರೀಮತಿ ಶಕುಂತಲಾ ಬೆನಕನವಾರಿ, ಸಮಸ್ತ ಶಿಕ್ಷಕ/ಶಿಕ್ಷಕಿಯರು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net