

ಗದಗ: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಶ್ರೇಯೋಭಿವೃದ್ಧಿಗಾಗಿ ಬಿಡುಗಡೆಯಾದ ಅನುದಾನವು ಸಮರ್ಪಕವಾಗಿ ಸದ್ಭಳಕೆಯಾಗಬೇಕು. ನಿಗದಿತ ಅವಧಿಯೊಳಗೆ ಯೋಜನೆಯ ಸೌಲಭ್ಯ ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯ ಇಲಾಖೆಯ ಅಧಿಕಾರಿಗಳು ಮಾಡಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಸೂಚನೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಪದ್ಮಾವತಿ ಜಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ್ರ ಕೊಟ್ಟೂರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯ ಸ್ವಾಮಿ ಬಿ, ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ, ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರು ಹಾಜರಿದ್ದರು.