ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ

20GDG08
Published on

ಅತೀ ಮಳೆಯಿಂದ ಹಾನಿಗೊಳಗಾಗುವ ಗ್ರಾಮಗಳ ಜನರ ಸುರತೆಗೆ ಕ್ರಮ ವಹಿಸಿ

ವಿಜಯವಾಣಿ ಸುದ್ದಿಜಾಲ ಗದಗ

ಜಿಲ್ಲೆಯಲ್ಲಿ ಮುಂಗಾರು ಹಂಗಾಮು ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಸಾಕಷ್ಟು ಮಳೆಯಾಗುತ್ತಿದೆ. ಮಳೆಯಿಂದ ಹಾನಿಗೊಳಗಾಗುವ ಗ್ರಾಮಗಳ ಸಾರ್ವಜನಿಕರ ಸುರತೆಗೆ ಸ್ಥಳಿಯ ಅಧಿಕಾರಿಗಳು ಪ್ರಥಮಾದ್ಯತೆ ನೀಡಿ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ. ಎನ್​. ಶ್ರೀಧರ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯತೆ ವಹಿಸಿ ಮಾತನಾಡಿದ ಅವರು, ಬೆಣ್ಣೆಹಳ್ಳ ಹಾಗೂ ನದಿಯ ಪ್ರವಾಹದಿಂದ ತೊಂದರೆಗೊಳಗಾಗುವ ಗ್ರಾಮಗಳ ಸುರತೆ ಕುರಿತಂತೆ ಗಮನಹರಿಸಬೇಕು. ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ಎಲ್ಲರೂ ಕೇಂದ್ರ ಸ್ಥಾನದಲ್ಲಿದ್ದು ಅತೀವೃಷ್ಟಿ, ಪ್ರವಾಹ ಪರಿಸ್ಥಿತಿ ಎದುರಾದಲ್ಲಿ ಸಮರ್ಪಕವಾಗಿ ಎದುರಿಸಬೇಕು. ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುವ ಮೂಲಕ ಜನಜಾನುವಾರುಗಳ ಜೀವ ಹಾನಿ ತಡೆಯುವುದರೊಂದಿಗೆ ಆಸ್ತಿ ರಣೆ ಮಾಡಬೇಕು ಎಂದು ಹೇಳಿದರು.

ಅಪಾರ ಮಳೆಯಿಂದ ಬಿದ್ದ ಮಳೆ ನೀರು ಚರಂಡಿ ಹಾಗೂ ಪ್ರಮುಖ ಕಾಲುವೆಗಳ ಮೂಲಕ ಸರಾಗವಾಗಿ ಮುಂದೆ ಸಾಗುವಂತೆ ಇರುವ ಗಿಡ ಕಂಟೆ, ಪ್ಲಾಸ್ಟಿಕ್​ ತೆರವುಗೊಳಿಸಬೇಕು. ಇದರಿಂದ ಮಳೆ ನೀರು ಮನೆಗಳಿಗೆ ನುಗ್ಗುವುದನ್ನು ತಡೆಯಬಹುದು. ಪ್ರವಾಹ ಪರಿಸ್ಥಿತಿಯನ್ನು ಅತ್ಯಂತ ಅಚ್ಚುಕಟ್ಟಾಗಿ ನಿರ್ವಹಣೆಗೆ ಎಲ್ಲ ಅಧಿಕಾರಿಗಳು ಸನ್ನದ್ಧರಾಗಬೇಕು. ತಗ್ಗುಪ್ರದೇಶಗಳಲ್ಲಿ ಹಾಗೂ ಶಿಥಿಲಾವಸ್ಥೆಯಲ್ಲಿರುವ ಮಣ್ಣಿನ ಮನೆಗಳಲ್ಲಿ ವಾಸಿಸುವವರನ್ನು ಸುರತ ಸ್ಥಳಗಳಿಗೆ ತೆರಳುವಂತೆ ಸೂಚಿಸಬೇಕು ಎಂದು ಜಿಲ್ಲಾಧಿಕಾರಿ ಸಿ. ಎನ್​. ಶ್ರೀಧರ ಹೇಳಿದರು.

ಜಿಪಂ ಸಿಇಓ ಭರತ್​ ಎಸ್​ ಮಾತನಾಡಿ, ಪ್ರವಾಹ ಪರಿಸ್ಥಿತಿ ಸಮರ್ಥವಾಗಿ ನಿಭಾಯಿಸಲು ಎಲ್ಲ ಅಧಿಕಾರಿಗಳು ಸನ್ನದ್ಧರಾಗಬೇಕು. ಅಗತ್ಯವಿದ್ದಲ್ಲಿ ಕಾಳಜಿ ಕೇಂದ್ರಗಳನ್ನು ತೆರೆಯಬೇಕು. ಸಂದರ್ಭಾನುಸಾರ ಸಾರ್ವಜನಿಕರ ಸುರತೆಗೆ ವಿವಿಧ ಇಲಾಖೆಯ ಅಧಿಕಾರಿಗಳು ತಮ್ಮ ತಮ್ಮ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿಭಾಯಿಸಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಜಿಲ್ಲೆಯ ಮುಂಗಾರು ಹಂಗಾಮಿನಲ್ಲಿ ಅತೀವೃಷ್ಟಿಯಿಂದ ಹಾನಿಯಾದ ಮನೆ, ಶಾಲೆ, ಬೆಳೆ ಹಾನಿ ವಿವರಗಳ ಕುರಿತು ಚಚಿರ್ಸಲಾಯಿತು.

ಉಪವಿಭಾಗಾಧಿಕಾರಿ ಗಂಗಪ್ಪ ಎಂ, ಹೆಚ್ಚುವರಿ ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ಎಂ. ಬಿ. ಸಂಕದ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಉಪ ಅರಣ್ಯ ಸಂರಣಾಧಿಕಾರಿ ಸಂತೋಷ್​ ಕೆ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಸನಗೌಡ ಕೊಟ್ಟೂರ, ಜಂಟಿ ಕೃಷಿ ನಿರ್ದೇಶಕಿ ತಾರಾಮಣಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್​. ಎಸ್​.ನೀಲಗುಂದ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net