ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಇಂದು

03GDG05
Published on
ಗದಗ: ಜಿಲ್ಲೆಯ ಶಿರಹಟ್ಟಿ ತಾಲೂಕಿನ ಕಡಕೋಳ ಗ್ರಾಮದ ಕಪ್ಪತಮಲ್ಲೇಶ್ವರ ಪ್ರಾಥಮಿಕ ಶಾಲೆ ಮೈದಾನದಲ್ಲಿ ಸೇರಿ ಅ.೪ ರಂದು ಬೆಳಗ್ಗೆ ೧೧ಕ್ಕೆ ಬಸವರಾಜ ಕೊಂಚಿಗೇರಿ ಪದವಿ ಪೂರ್ವ ಕಾಲೇಜ್ ಕಟ್ಟಡ, ಗ್ರಂಥಾಲಯ ಉದ್ಘಾಟನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ತಾಪಂ ಮಾಜಿ ಸದಸ್ಯ ತಿಪ್ಪಣ್ಣ ಕೊಂಚಿಗೇರಿ
ನಗರದ ಪತ್ರಿಕಾಭವನದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಮದಲ್ಲಿ ಎಚ್‌ಡಿಎಫ್‌ಸಿ ಬ್ಯಾಂಕ್, ಕಡಕೋಳ ಗ್ರಾಮದ ಸಂತೆ ಕಟ್ಟೆ ಉದ್ಘಾಟನೆ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಅನಾವರಣ ಹಾಗೂ ಗ್ರಾಮದ ಘನತ್ಯಾಜ್ಯ ವಿಲೇವಾರಿ ಘಟಕ ಉದ್ಘಾಟನೆ ಹಾಗೂ ಬೀರೇಶ್ವರ ಸಮುದಾಯ ಭವನದ ಭೂಮಿ ಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಕಾಗಿನೆಲೆ ಕನಕ ಗುರುಪೀಠದ ನಿರಂಜನಾನದಪುರಿ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಕಾರ್ಯಕ್ರಮ ಉದ್ಘಾಟಿಸುವರು. ಕಾನೂನು, ಪ್ರವಾಸೋದ್ಯಮ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಪಿಯು ಕಾಲೇಜ್ ಕಟ್ಟಡವನ್ನು ಉದ್ಘಾಟಿಸುವರು. ಸಂಸದ ಬಸವರಾಜ ಬೊಮ್ಮಾಯಿ ಎಚ್.ಡಿಎಫ್ಸಿ ಬ್ಯಾಂಕ್ ಉದ್ಘಾಟಿಸುವರು. ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ಬೀರಲಿಂಗೇಶ್ವರ ಸಮುದಾಯ ಭವನದ ಶಂಕುಸ್ಥಾಪನೆ ನೆರವೇರಿಸುವರು.
ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಸಂತೆಕಟ್ಟೆಯನ್ನು ಉದ್ಘಾಟಿಸುವರು. ಶಾಸಕ ಡಾ.ಚಂದ್ರು ಲಮಾಣಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿಯನ್ನು ಅನಾವರಣಗೊಳಿಸುವರು. ಪ್ರದೀಪ್ ಶೆಟ್ಟರ ಅವರು ಘನತ್ಯಾಜ್ಯ ವಿಲೇವಾರಿ ಘಟನವನ್ನು ಉದ್ಘಾಟಿಸುವರು. ಮಾಜಿ ಶಾಸಕ ಡಿ.ಆರ್. ಪಾಟೀಲ ಗ್ರಂಥಾಲಯವನ್ನು ಉದ್ಘಾಟಿಸುವರು. ಗ್ರಾಪಂ ಅಧ್ಯಕ್ಷೆ ಹೇಮಾ ಹರ್ಲಾಪೂರ ಅಧ್ಯಕ್ಷತೆ ವಹಿಸುವರು ಎಂದು ವಿವರಿಸಿದರು.
ಗ್ರಾಪಂ ಅಧ್ಯಕ್ಷೆ ಹೇಮಾ ಹರ್ಲಾಪೂರ ಕಾರ್ಯಕ್ರಮ ಅಧ್ಯಕ್ಷತೆ ವಹಿಸುವರು. ಜಿ.ಎಸ್.ಗಡ್ಡದೇವರಮಠ, ಗಂಗಣ್ಣ ಮಹಾಂತಶೆಟ್ಟರ, ರಾಮಣ್ಣ ಲಮಾಣಿ, ರಾಮಕೃಷ್ಣ ದೊಡ್ಡಮನಿ, ಸುಜಾತ ದೊಡ್ಡಮನಿ, ವಾಸಣ್ಣ ಕುರಡಗಿ, ವಿಶ್ವನಾಥ ಕಪ್ಪತ್ತನವರ, ರುದ್ರಣ್ಣ ಗುಳಗುಳಿ, ದೇವರಡ್ಡಿ ಅಗಸನಕೊಪ್ಪ, ಬೂದಪ್ಪ ಹಳ್ಳಿ, ಪ್ರಕಾಶ ಕರಿ, ವೈ.ಎನ್. ಗೌಡ್ರ, ಲಿಂಗರಾಜಗೌಡ್ರ ಪಾಟೀಲ, ಡಿ.ಡಿ.ಮೊರನಾಳ, ಮಲ್ಲಪ್ಪ ಹಣಜಿ, ರಮೇಶ ಸಜ್ಜಗಾರ, ನಾಗರಾಜ ಮೆಣಸಗಿ, ಭಾಗ್ಯಶ್ರೀ ಬಾಬಣ್ಣ ಸೇರಿದಂತೆ ಇತರರು ಭಾಗವಹಿಸುವರು ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸುಜಾತ ದೊಡ್ಡಮನಿ, ಶರಣಪ್ಪ ಹರ್ಲಾಪೂರ, ಫಕೀರಪ್ಪ ಹೆಬಸೂರ, ಹಾಲಪ್ಪ ದುಗಣ್ಣವರ, ಅಂದಾನಪ್ಪ ಕೋರಿ, ರುದ್ರಣ್ಣ ಗುಳಗುಳಿ ಸೇರಿದಂತೆ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net