Gadag: 2025 ಮಾರ್ಚ ತಿಂಗಳಿAದ ಕರ್ನಾಟಕ ವಿಶ್ವವಿದ್ಯಾಲಯದ ಸಿಬ್ಬಂದಿಗೆ ಪಿಂಚಣಿ ನೀಡಲು ಸರಕಾರದಿಂದ ಅನುದಾನ ಬಿಡುಗಡೆ ಆಗಿರುವುದಿಲ್ಲ ಮತ್ತು ಆಂತರಿಕ ಸಂಪನ್ಮೂಲವು ಇರುವುದಿಲ್ಲ. ಹೀಗಾಗಿ ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದ ಸಿಬ್ಬಂದಿ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಆದ್ದರಿಂದ ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದ ನಿವೃತ್ತಿ ನೌಕರರಿಗೆ ನೀಡಬೇಕಾದ ಪಿಂಚಣಿ ಅನುದಾನವನ್ನು ಬಿಡುಗಡೆ ಮಾಡಲು ಸರಕಾರದ ಆರ್ಥಿಕ ಇಲಾಖೆಯ ಪ್ರದಾನಕಾರ್ಯದರ್ಶಿಯವರಿಗೆ ವಿದಾನ ಪರಿಷತ್ತ ಸದಸ್ಯರಾದ ಎಸ್.ವ್ಹಿ.ಸಂಕನೂರ ಮನವಿ ಸಲ್ಲಿಸಿ ಒತ್ತಾಯಿಸಿದರು.
ರಾಜ್ಯದ ಎರಡನೇ ಅತ್ಯಂತ ಹಳೆಯ ವಿಶ್ವವಿದ್ಯಾನಿಲಯ ಕರ್ನಾಟಕ ವಿಶ್ವವಿದ್ಯಾಲಯ ಧಾರವಾಡ, ಇದೀಗ ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. 2025 ಮಾರ್ಚ ತಿಂಗಳಿAದ ವಿಶ್ವವಿದ್ಯಾಲಯದ ನಿವೃತ್ತ ನೌಕರರಿಗೆ ಪಿಂಚಣಿ ಪಾವತಿಸಲು ಅನುದಾನ ಇಲ್ಲದೇ ನಿವೃತ್ತ ನೌಕರರು ಕಷ್ಟಪಡುವ ಸ್ಥಿತಿ ನಿರ್ಮಾಣವಾಗಿದೆ. ಕಳೆದ ಮೂರು ವರ್ಷಗಳಿಂದ ವಿಶ್ವವಿದ್ಯಾಲಯವು ಆಂತರಿಕ ಸಂಪನ್ಮೂಲಗಳ ಮೂಲಕ ಪಿಂಚಣಿ ವ್ಯವಸ್ಥೆ ಮಾಡಿ ಪರಿಸ್ಥಿತಿಯನ್ನು ನಿಭಾಯಿಸಿರುವುದು. ಆದರೆ ಈಗ ಹಣ ಇಲ್ಲದೇ ಸಾವಿರಾರು ನಿವೃತ್ತ ನೌಕರರಿಗೆ ಪಿಂಚಣಿ ನೀಡಲು ಅನುದಾನದ ಇಲ್ಲದೆ ಇರುವುದು ಖೇದಕರ ಸಂಗತಿ. ಕೂಡಲೇ ಸರಕಾರ ಅನುದಾನ ಬಿಡುಗಡೆ ಮಾಡಬೇಕು.
ಇದರ ಜೊತೆಗೆ ಪಿಂಚಣಿ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲು ಎ.ಜಿ ಕಚೇರಿಯ ಮೂಲಕ ವಿತರಿಸುವ ವ್ಯವಸ್ಥೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ವಿದಾನ ಪರಿಷತ್ತ ಸದಸ್ಯರಾದ ಎಸ್.ವ್ಹಿ.ಸಂಕನೂರ ಒತ್ತಾಯಿಸಿದ್ದಾರೆ..