ವಿಧಾನ ಪರಿಷತ್ ಶಾಸಕ ಎಸ್.ವಿ.ಸಂಕನೂರ ಅವರಿಂದ ತ್ರಿಚಕ್ರ ವಾಹನ ವಿತರಣೆ

13GDG04
Published on

ಗದಗ: ವಿಧಾನ ಪರಿಷತ್ ಶಾಸಕ ಎಸ್.ವಿ.ಸಂಕನೂರ ಅವರು ಗುರುವಾರ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ವಿಕಲಚೇತನ ಇಬ್ಬರು ಫಲಾನುಭವಿಗಳಿಗೆ ತ್ರಿಚಕ್ರ ವಾಹನಗಳನ್ನು ವಿತರಣೆ ಮಾಡಿದರು.

ಸ್ಥಳೀಯ ಶಾಸಕರ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಡಿ ಖರೀದಿಸಲಾದ ಎರಡು ವಾಹನಗಳನ್ನು ವಿತರಿಸಿ ನಂತರ ಮಾತನಾಡಿದ ಅವರು ವಿಕಲಚೇತನರು ತ್ರಿಚಕ್ರ ವಾಹನದ ಸದ್ಭಳಕೆ ಮಾಡಿಕೊಳ್ಳಬೇಕು. ಸರ್ಕಾರದ ಯೋಜನೆಗಳ ಸೌಲಭ್ಯಗಳನ್ನು ಅರ್ಹ ವಿಕಲಚೇತನರು ಪಡೆಯಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ ಎಂ, ಜಿ.ಪಂ. ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಅಂಗವಿಕಲರ ಕಲ್ಯಾಣಾಧಿಕಾರಿ ಮಹಾಂತೇಶ ಕೆ, ಗಣ್ಯರಾದ ರಾಜು ಕುರಡಗಿ, ಲಿಂಗರಾಜ ಪಾಟೀಲ, ಪ್ರಕಾಶ ಅಂಗಡಿ, ಸುರೇಶ ಮರಳಪ್ಪನವರ, ಬೂದಪ್ಪ ಹಳ್ಳಿ , ಇಲಾಖೆಯ ಸಿಬ್ಬಂದಿ ವರ್ಗ ಸೇರಿದಂತೆ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net