ಸಾಮಾಜಿಕ ನ್ಯಾಯವೇ ಸಂವಿಧಾನದ ಸಂದೇಶ: ಡಾ. ತೋಂಟದ ಸಿದ್ದರಾಮ ಶ್ರೀಗಳು

07GDG03
Published on

ವಿಜಯವಾಣಿ ಸುದ್ದಿಜಾಲ ಗದಗ

ವಿಶ್ವದ ಅತೀ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿರುವ ಭಾರತದ ಆತ್ಮವೇ ನಮ್ಮ ಸಂವಿಧಾನ. ನಮ್ಮ ಸಂವಿಧಾನದಲ್ಲಿ ಪ್ರತಿಯೊಬ್ಬರಿಗೆ ಸಮಾನವಾದ ಅವಕಾಶಗಳನ್ನು ಕಲ್ಪಿಸಲಾಗಿದೆ. ಸಾಮಾಜಿಕ ನ್ಯಾಯವೇ ಸಂವಿಧಾನದ ಸಂದೇಶ ಎಂದು ತೋಂಟದ ಸಿದ್ದರಾಮ ಶ್ರೀಗಳು ಹೇಳಿದರು.

ತೋಂಟದಾರ್ಯ ಮಠದಲ್ಲಿ ಇತ್ತೀಚೆಗೆ ಜರುಗಿದ 2722 ನೇ ಶಿವಾನುಭವ ಕಾರ್ಯಕ್ರಮದಲ್ಲಿ ಸಾನ್ನಿಧ್ಯ ವಹಿಸಿ ಮಾತನಾಡಿದ ಶ್ರೀಗಳು, ಸಂವಿಧಾನ ಎಷ್ಟೇ ಪ್ರಭಲವಾಗಿದ್ದರೂ ಅದನ್ನು ಜಾರಿಗೆ ತರುವವರು ರ್ದುಬಲವಾಗಿದ್ದರೆ, ಪ್ರಬಲ ಸಂವಿಧಾನವು ಕೂಡ ರ್ದುಬಲವಾಗುತ್ತದೆ. ಧರ್ಮದ ಹೆಸರಿನಲ್ಲಿ ಸಂವಿಧಾನಕ್ಕೆ ಅಪಚಾರ ಮಾಡಬಾರದು. ಅನೇಕ ಧರ್ಮ ಭಾಷೆ ಜಾತಿ ಮತಗಳನ್ನು ಒಳಗೊಂಡ ವೈವಿಧ್ಯಮಯ ದೇಶ ನಮ್ಮದು ಎಂದು ಶ್ರೀಗಳು ಹೇಳಿದರು.

ರಾಜ್ಯ ಸಿಸ್ಲೆಪ್​ ಸಂಸ್ಥೆಯ ನಿರ್ದೇಶಕ ಡಾ. ಬಿ. ಕೆ. ಎಸ್​. ವರ್ಧನ ಉಪನ್ಯಾಸ ನೀಡಿ ಮಾತನಾಡಿ, ಈ ದೇಶದ ಕಟ್ಟಕಡೆಯ ಹಳ್ಳಿಯ ಮನುಷ್ಯನು ಇಂದು ಪವಿತ್ರ ವೇದಿಕೆಯಲ್ಲಿ ನಿಂತು ಮಾತನಾಡುವ ಸ್ವಾತಂತ್ರ್ಯವನ್ನು ನಮ್ಮ ಸಂವಿಧಾನ ಕೊಟ್ಟಿದೆ. ಸರ್ವಧರ್ಮಗಳಿಗೂ ಸ್ವಾತಂತ್ರ್ಯ ಸಮಾನತೆ ಮತ್ತು ಭಾತೃತ್ವ ಭಾವದಿಂದ ಮುನ್ನಡೆಯುವ ಅಂಶಗಳನ್ನು ನಮ್ಮ ಸಂವಿಧಾನ ಒಳಗೊಂಡಿದೆ ಎಂದರು.

ಶಿಣ ಇಲಾಖೆಯ ಉಪನಿರ್ದೇಶಕ ಆರ್​. ಎಸ್​. ಬುರಡಿ, ಎಂ. ಎಂ. ರಡ್ಡೇರ, ಅಂದಾನಪ್ಪ ವಡಿಗೇರಿ, ಜಿ. ಎಲ್​. ಬಾರಾಟಕ್ಕೆ, ವಿ.ವಿ. ನಡುವಿನಮನಿ, ಶಂಕರ ಹಡಗಲಿ, ಎಂ. ಎಸ್​. ಕಂಬಳಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net