

ವಿಜಯವಾಣಿ ಸುದ್ದಿಜಾಲ ಗದಗ
ಕಪ್ಪತಗುಡ್ಡ ಅಪರೂಪದ ಆಯುರ್ವೇದ ಔಷಧುಯ ಸಸ್ಯಗಳಿಂದ ತುಂಬಿರುವ ಖಜಾನೆ. ನಾಡಿನ ಮೂಲೆಮೂಲೆಗಳಿಂದ ಪ್ರವಾಸಿಗರು ಆಗಮಿಸಿ ಕಪ್ಪತ್ತಗುಡ್ಡದ ಸೊಬಗನ್ನು ಆನಂದಿಸುತ್ತಿದ್ದಾರೆ. ಪರಿಶುದ್ಧ ಗಾಳಿಯನ್ನು ಹೊಂದಿರುವ ಕಪ್ಪತ್ತಗುಡ್ಡ ಉತ್ತರ ಕರ್ನಾಟಕದ ಸಹ್ಯಾದ್ರಿ ಎಂದು ಡಾ. ತೋಂಟದ ಸಿದ್ಧರಾಮ ಶ್ರೀಗಳು ಹೇಳಿದರು.
ತೋಮಟದಾರ್ಯ ಮಠದಲ್ಲಿ ಸೋಮವಾರ ಏರ್ಪಡಿಸಿದ್ದ ಶಿವಾನುಭವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದ ಶ್ರೀಗಳು, ಲಿಂಗೈಕ್ಯ ಡಾ. ತೋಂಟದ ಸಿದ್ಧಲಿಂಗ ಶ್ರೀಗಳ ಶ್ರಮದ ಲವಾಗಿ ಇಂದು ಕಪ್ಪತ್ತಗುಡ್ಡ ಉಳಿದಿದೇ. ವನ್ಯಜಿವಿಧಾಮವಾಗಿದೆ. ಕಪ್ಪತ್ತಗುಡ್ಡ ಉಳಿವಿಗಾಗಿ ಜನರನ್ನು, ಪರಿಸರವಾದಿಗಳನ್ನು, ಅನೇಕ ಸಂ ಸಂಸ್ಥೆಗಳನ್ನು, ಶಾಲಾ ಕಾಲೇಜುಗಳನ್ನು ಸಂಟಿಸಿ ಹೋರಾಟ ಮಾಡಿದ್ದಾರೆ. ಅನೇಕ ಆಯುರ್ವೇದ ಪಂಡಿತರು ವನಸ್ಪತಿಗಾಗಿ ಕಪ್ಪತ್ತಗುಡ್ಡ ಅರಸಿ ಬರುತ್ತಾರೆ. ಅಪಾರ ಖನಿಜ ಸಂಪತ್ತನ್ನು, ಆಯುರ್ವೇದ ಸಂಪತ್ತನ್ನು, ವನ್ಯಜಿವಿಗಳನ್ನು ಹೊಂದಿರುವ ಕಪ್ಪತ್ತಗುಡ್ಡ ಪ್ರದೇಶದಲ್ಲಿ ಗಣಿಗಾರಿಕೆ ನಡೆಯದಂತೆ ಶ್ರೀಗಳು ಮುನ್ನೆಚ್ಚರಿಕೆ ವಹಿಸುತ್ತ ಬಂದಿದ್ದಾರೆ. ಕಪ್ಪತ್ತಗುಡ್ಡದ ಅಭಿವೃದ್ಧಿಗೆ ಸರ್ಕಾರ ಕೈಗೊಳ್ಳಬೇಕು. ಈ ಭಾಗದ ಸಚಿವರು, ಶಾಸಕರು, ನಾಯಕರು ವಿಶೇಷ ಆಸಕ್ತಿ ವಹಿಸಬೇಕು ಎಂದು ಶ್ರೀಗಳು ಆಗ್ರಹಿಸಿದರು.
ಪ್ರೊ. ಸಿ. ಎಸ್. ಅರಸನಾಳ ಉಪನ್ಯಾಸ ನೀಡಿ, ಕಪ್ಪತ್ತಗುಡ್ಡ ಸಂರಣೆಯಲ್ಲಿ ಲಿಂಗೈಕ್ಯ ಡಾ. ತೋಂಟದ ಸಿದ್ಧಲಿಂಗ ಶ್ರೀಗಳ ಪಾತ್ರ ಹಿರಿದಾಗಿದೆ. ಗಿಡಮರಗಳನ್ನು ಕಡಿಯುವುದು, ಬೆಂಕಿಹಚ್ಚುವುದು, ಗಣಿಗಾರಿಕೆ ಹೀಗೆ ಅನೇಕ ಸಂಕಷ್ಟಗಳ ಸಂದರ್ಭದಲ್ಲಿ ಜನರಲ್ಲಿ ಪರಿಸರ ಜಾಗೃತಿ ಮೂಡಿಸುವ ಕೆಲಸವನ್ನು ಶ್ರೀಗಳು ಮಾಡಿದ್ದಾರೆ. ಕಪ್ಪತ್ತಗುಡ್ಡ ಅಪಾರ ಗಿಡಮೂಲಿಕೆ ಮತ್ತು ಖನಿಜ ಸಂಪತ್ತನ್ನು ಒಳಗೊಂಡಿದೆ. ಮೇಲಾಗಿ ಈ ಭಾಗದ ಜನರ ಜೀವನಾಡಿ, ಸಹ್ಯಾದ್ರಿ ಎನಿಸಿದೆ. ಪೋಸ್ಕೋ ಸೇರಿದಂತೆ ಅನೇಕ ಗಣಿಗಾರಿಕೆ ಕಂಪನಿಗಳು ಕಪ್ಪತ್ತಗುಡ್ಡದ ಮೇಲೆ ಕಣ್ಣುಹಾಕಿದಾಗ ಶ್ರೀಗಳು ರಾ ಕವಚದಂತೆ ಕಪ್ಪತ್ತಗುಡ್ಡವನ್ನು ಉಳಿಸಿದ್ದಾರೆ. ಸ್ವತಃ ಕಪ್ಪತ್ತಗುಡ್ಡ ಪರಿಸರದಲ್ಲಿ ಮತ್ತು ಸುತ್ತಮುತ್ತಲ ಹಳ್ಳಿಗಳಲ್ಲಿ ಲಾಂತರ ಗಿಡಮರಗಳನ್ನು ಬೆಳೆಸಲು ಮೂಲ ಕರ್ತರಾಗಿದ್ದಾರೆ. ಕಪ್ಪತ್ತಗುಡ್ಡ ಇಂದು ರಾಷ್ಟ್ರಮಟ್ಟದಲ್ಲಿ ಖ್ಯಾತಿಯನ್ನು ಪಡೆದಿದ್ದಲ್ಲದೆ, ಪರಿಶುದ್ಧ ಗಾಳಿಯನ್ನು ಹೊಂದಿದ ಪ್ರದೇಶ ಎಂಬ ಗರಿಯನ್ನು ತನ್ನದಾಗಿಸಿಕೊಂಡಿದೆ. ಎಂದರು.
ಎಸ್. ಎಸ್. ಪಾಟೀಲ, ಮೃತ್ಯುಂಜಯ ಹಿರೇಮಠ, ಗುರುನಾಥ ಸುತಾರ, ಖುಷಿ ಲಕ್ಕುಂಡಿ, ಲಲಿತಾ ಪಾಟೀಲ, ಚನ್ನಬಸಯ್ಯ ಕನಕೇರಿಮಠ, ಗಿರಿಜಾದೇವಿ ಕನಕೇರಿಮಠ ಇತರರು