ಗದಗ: ಗದಗ ಜಿಲ್ಲೆಯಲ್ಲಿ ಬಹುತೇಕ ವಾಲ್ಮೀಕಿ ಸಮುದಾಯದ ಜನರು ಸಾಕಷ್ಟು ಪ್ರಮಾಣದಲ್ಲಿ ಇದ್ದಾರೆ. ಇವರು ಎಲ್ಲ ಸಮುದಾಯದವರ ಜೊತೆಗೂಡಿ ಪ್ರೀತಿಯಿಂದ ಜೀವನ ಸಾಗಿಸುತ್ತಿದ್ದಾರೆ. ನಗರದಾದ್ಯಂತ ಹಲವು ಮಹನೀಯರ ವೃತ್ತಗಳನ್ನು ಈಗಾಗಲೇ ನಿರ್ಮಿಸಲಾಗಿದೆ. ಇದು ಸ್ವಾಗತಾರ್ಹ. ಆದರೆ, ಆದಿಕವಿ ಶ್ರೀ ಮಹರ್ಷಿ ವಾಲ್ಮೀಕಿ ವೃತ್ತ ನಿರ್ಮಾಣ ಆಗದಿರುವುದು ಬೇಸರದ ಸಂಗತಿಯಾಗಿದೆ. 2025.ರ ವಾಲ್ಮೀಕಿ ಜಯಂತಿಯ ಒಳಗಾಗಿ ವಾಲ್ಮೀಕಿ ಸರ್ಕಲ್ ನಿರ್ಮಾಣವಾಗದಿದ್ದರೆ ಉಗ್ರ ಹೋರಾಟ ಅನಿವಾರ್ಯ ಎಂದು, ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾ ಸಭಾ ಯುವ ಘಟಕದ ರಾಜ್ಯಾಧ್ಯಕ್ಷ ಡಾ. ತುಳಸಿರಾಮ ಎಚ್ಚರಿಕೆ ನೀಡಿದರು.