ವಿಡಿಎಸ್ ಕ್ಲಾಸಿಕ್ ಸಿಬಿಎಸ್ಇ ಶಾಲೆಯಲ್ಲಿ  ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ.

07GDG04
Published on
ಗದಗ: ನಗರದ ಶತಮಾನ ಪೂರೈಸಿದ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಪ್ರತಿಷ್ಠಿತ ಶಿಕ್ಷಣ ಸಂಸ್ಥೆಯಾದ ವಿದ್ಯಾದಾನ ಸಮಿತಿಯ ಕ್ಲಾಸಿಕ್ ಆಂಗ್ಲ ಮಾಧ್ಯಮ ಸಿಬಿಎಸ್ಇ ಶಾಲೆಯಲ್ಲಿ ಆದಿಕವಿ  ಶ್ರೀ ಮಹರ್ಷಿ ವಾಲ್ಮೀಕಿ ಜಯಂತೋತ್ಸವವನ್ನು ಆಚರಿಸಲಾಯಿತು.
ಶಾಲೆಯ ಪ್ರಾಚಾರ್ಯರಾದ ಶ್ರೀ ಎಂ. ಆರ್. ಡೊಳ್ಳಿನ ರವರು ಶ್ರೀ ಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಹೂಮಾಲೆ ಅರ್ಪಿಸಿ, ಪೂಜೆ ಸಲ್ಲಿಸಿ, ಮಹರ್ಷಿ ವಾಲ್ಮೀಕಿ ಅವರು ಕೇವಲ ಒಂದು ಸಮಾಜಕ್ಕೆ ಸೀಮಿತರಾದವರಲ್ಲ, ಈಡಿ ನಾಡಿಗೆ ಸೀಮಿತವಾದವರು. ಶ್ರೀ ಮಹರ್ಷಿ ವಾಲ್ಮೀಕಿಯವರ ಕುರಿತು ಗತಿಸಿ ಹೋದ ಘಟನೆಗಳನ್ನು ಸವಿಸ್ತಾರವಾಗಿ ವಿವರಣೆ ನೀಡಿ, ಅವರ ಮಹಾಕಾವ್ಯಗಳು ಈಡಿ ಭೂಮಂಡಲಕ್ಕೆ ಆದರ್ಶ ಪ್ರಾಯವಾಗಿದ್ದು, ಅಂತಹ ಆದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಅವರ ಜಯಂತಿಯ ಆಚರಣೆಗೆ ಒಂದು ಅರ್ಥ ಬಂದಂತೆ ಆಗುತ್ತದೆ ಎಂದು ಹೇಳಿದರು.
ಶಾಲೆಯ ಉಪ ಪ್ರಾಚಾರ್ಯರಾದ ಶ್ರೀ ಅಕ್ಷಯ್. ಜಿ.  ರವರು ನಮ್ಮ ಭಾರತ ದೇಶದಲ್ಲಿ ಅನೇಕ ಋಷಿಮುನಿಗಳು, ಪಂಡಿತರು ಹಾಗೂ ವಿದ್ವಾಂಸರು ಬದುಕಿ ಬಾಳಿ ಹೋಗಿದ್ದಾರೆ. ಆದರೆ ಆದಿಕವಿ ಶ್ರೀ ವಾಲ್ಮೀಕಿ ಮಹರ್ಷಿಗಳರವರನ್ನು ಮಾತ್ರ ಮಹಾಕವಿ ಎಂಬುದಾಗಿ ಸವಿಸ್ತಾರವಾಗಿ ತಮ್ಮ ಅನಿಸಿಕೆಯ ಮೂಲಕ ವಿಶ್ಲೇಷಿಸಿದರು. ಶಾಲೆಯ ಸಹಶಿಕ್ಷಕಿಯರಾದ ಶ್ರೀಮತಿ ರೇಣುಕಾ ವೆಂಕಟಾಪುರ ಅವರು ಕಾರ್ಯಕ್ರಮವನ್ನು ನಿರೂಪಿಸಿದರು. ಶ್ರೀ ಪಂಪಣ್ಣ ರೊಡ್ಡಾನವರು ಸ್ವಾಗತಿಸಿದರು. ಹಾಗೂ ಶ್ರೀಮತಿ ಶೈನಾಜ್ ನದಾಫ್ ರವರು ವಂದಿಸಿದರು. ಈ ಸಂದರ್ಭದಲ್ಲಿ ಅತಿಥಿಮಹನೀಯರು, ಸಮಸ್ತ ಶಿಕ್ಷಕ/ ಶಿಕ್ಷಕಿಯರು ಹಾಗೂ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net