ವಿಡಿಎಸ್ ಕ್ಲಾಸಿಕ್ ಶಾಲೆಯಲ್ಲಿ ಗಣಿತ ದಿನಾಚರಣೆ.

1735040421084
Published on
ಗದಗ:  ನಗರದ ಶತಮಾನ ಪೂರೈಸಿದ ಹಾಗೂ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವಿದ್ಯಾದಾನ ಸಮಿತಿಯ ಕ್ಲಾಸಿಕ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ  ಪ್ರಸಿದ್ಧ ಗಣಿತ ತಜ್ಞರಾದ ಸರ್. ಶ್ರೀನಿವಾಸ ರಾಮಾನುಜನ್ ಅವರ ಜನ್ಮದಿನದ ಗೌರವಾರ್ಥವಾಗಿ ಸ್ವತಃ ವಿದ್ಯಾರ್ಥಿಗಳೇ ತಯಾರಿಸಿದ  ಗಣಿತ ಕಲಿಕೋಪಕರಣಗಳ ಮಾದರಿಗಳ  ಪ್ರದರ್ಶನದ ಮೂಲಕ ರಾಷ್ಟ್ರೀಯ ಗಣಿತ ದಿನಾಚರಣೆಯನ್ನು ಆಚರಿಸಲಾಯಿತು.
ಸಂಸ್ಥೆಯ ಶೈಕ್ಷಣಿಕ ಮಾರ್ಗದರ್ಶಕರಾದ ಶ್ರೀ ಪ್ರತೀಕ. ಎಸ್. ಹುಯಿಲಗೋಳ  ಹಾಗೂ ಕ್ಲಸ್ಟರ್ ಸಂಖ್ಯೆ 4 ರ ಸಮೂಹ ಸಂಪನ್ಮೂಲ ಅಧಿಕಾರಿಗಳಾದ  ಶ್ರೀ ರವಿ ಹೆಬ್ಬಳ್ಳಿ ರವರು ಗಣಿತ ಶಾಸ್ತ್ರಜ್ಞ ಸರ್. ಶ್ರೀನಿವಾಸ ರಾಮಾನುಜನ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ನಂತರ ವಿದ್ಯಾರ್ಥಿಗಳು ತಯಾರಿಸಿದ ಗಣಿತ ಕಲಿಕಾ ಮಾದರಿಗಳನ್ನು ವೀಕ್ಷಿಸಿ ಮೆಚ್ಚುಗೆಯ ಮಾತುಗಳ ಮೂಲಕ ಹಾಗೂ ಕೆಲವು ಸಲಹೆಗಳನ್ನು ಸೂಚಿಸುವುದರ ಮೂಲಕ ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.
ಈ ಸಂದರ್ಭದಲ್ಲಿ ಶಾಲೆಯ ಹಿರಿಯ ಶಿಕ್ಷಕಿರಾದ ಶ್ರೀಮತಿ ರೇಣುಕಾ ವೆಂಕಟಾಪುರ, ಗಣಿತ ಕಲಿಕಾ ಮಾದರಿಗಳನ್ನು ತಯಾರಿ ಮಾಡಲು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ ಗಣಿತ ಶಿಕ್ಷಕಿಯರಾದ ಶ್ರೀಮತಿ ಎಸ್. ವಿ. ಮೇಲಗಿರಿ, ಶ್ರೀಮತಿ ಅರ್ಚನಾ ಗಿರಿತಿಮ್ಮಣ್ಣವರ,  ಶಾಲೆಯ ಸಮಸ್ತ ಶಿಕ್ಷಕ/ಶಿಕ್ಷಕಿಯರು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net