ನಂತರ ಶಾಲೆಯ ವಿದ್ಯಾರ್ಥಿಗಳು ದೇಶಾಭಿಮಾನ ಸಾರುವ ಹಾಡುಗಳಿಗೆ ನೃತ್ಯವನ್ನು ಮಾಡಿ ನಮ್ಮ ಸೈನಿಕರಿಗೆ ಗೌರವ ವಂದನೆ ಸಲ್ಲಿಸಿದರು. ಶಿಕ್ಷಕಿಯರಾದ ಕು. ಗಾಯತ್ರಿ ಅಸುಂಡಿ ರವರು ದೇಶಭಕ್ತಿಗೀತೆಯನ್ನು ಹಾಡಿದರು. ಶಿಕ್ಷಕಿಯರಾದ ಶ್ರೀಮತಿ ಕವಿತಾ ಹೊಸಕೇರಿ ರವರು ನಿರೂಪಿಸಿ, ವಂದಿಸಿದರು. ಈ ಸಂದರ್ಭದಲ್ಲಿ ಆಡಳಿತ ಮಂಡಳಿಯ ಮನೆತನದವರಾದ ಶ್ರೀಮತಿ ಸಂಪದಾ ಭೀ. ಹುಯಿಲಗೋಳ, ಶಾಲೆಯ ಪ್ರಾಚಾರ್ಯರಾದ ಶ್ರೀ ಎಂ. ಆರ್. ಡೊಳ್ಳಿನ, ಉಪ ಪ್ರಾಚಾರ್ಯರಾದ ಶ್ರೀ ಅಕ್ಷಯ್. ಜಿ, ಸಮಸ್ತ ಶಿಕ್ಷಕ/ಶಿಕ್ಷಕಕಿಯರು, ಪ್ರಶಿಕ್ಷಣಾರ್ಥಿಗಳು, ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.