ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಪದ್ಮಾವತಿ ಜಿ ಮಾತನಾಡಿ ಸಖಿ ಒನ್ ಸ್ಟಾಪ್ ಸೆಂಟರ್ ಯೋಜನೆಯಡಿ ಜಿಲ್ಲೆಯ ಪ್ರಾಥಮಿಕ ಪ್ರೌಢಶಾಲೆ ಹಾಗೂ ಕಾಲೇಜುಗಳಲ್ಲಿ 11, ಅಂಗನವಾಡಿ ಕೇಂದ್ರದಲ್ಲಿ 05, ಜಿಮ್ಸ್ ಆಸ್ಪತ್ರೆ ಹಾಗೂ ಸಂಘ ಸಂಸ್ಥೆಗಳಲ್ಲಿ 13 ಅರಿವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಮಹಿಳೆಯರ ಮತ್ತು ಮಕ್ಕಳ ದೌರ್ಜನ್ಯ ತಡೆ ಹಾಗೂ ಮಹಿಳೆಯರ ಮತ್ತು ಮಕ್ಕಳ ಸಾಗಾಟ ತಡೆ ಯೋಜನೆಯಡಿ ತಾಲೂಕು ಮಟ್ಟದಲ್ಲಿ 5 ಸಭೆಗಳನ್ನು ಹಾಗೂ ಗ್ರಾಮ ಪಂಚಾಯತ್ ಮಟ್ಟದಲ್ಲಿ 122 ಸಭೆಗಳನ್ನು ಆಯೋಜಿಸಿ ಅರಿವು ಮೂಡಿಸಲಾಗಿದೆ. ಜುಲೈ 2024 ರಿಂದ ಸೆಪ್ಟೆಂಬರ್ 2024 ರವರೆಗೆ ಕೌಟುಂಬಿಕ ಹಿಂಸೆಯಿAದ ಮಹಿಳೆಯರ ಸಂರಕ್ಷಣಾ ಕಾಯ್ದೆಯಡಿ ಒಟ್ಟು 23 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ ಎಂದು ಸಭೆಗೆ ವಿವರಿಸಿದರು.
ಸಭೆಯಲ್ಲಿ ಸ್ವಾಧಾರ ಗೃಹ ಯೋಜನೆ, ಉಜ್ವಲ ಯೋಜನೆ, ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ, ಸ್ವೀಕಾರ ಕೇಂದ್ರ, ಬಾಲಕಿಯರ ವಸತಿನಿಲಯ ಯೋಜನೆ, ವಿಧವಾ ಕೋಶ, ಪೋಷಣ ಅಭಿಯಾನ ಕುರಿತು ಚರ್ಚಿಸಲಾಯಿತು.