

ವಿಜಯವಾಣಿ ಸುದ್ದಿಜಾಲ ಗದಗ
ಪ್ರತಿಯೊಬ್ಬರೂ ಯೋಗದಿಂದ ಆರೋಗ್ಯಯುತ ಜೀವನ ನಿರ್ವಹಣೆ ಮಾಡಲು ಸಹಕಾರಿ ಆಗುತ್ತದೆ ಎಂದು ಜಿಲ್ಲಾಕಾರಿ ಸಿ. ಎನ್. ಶ್ರೀಧರ ಹೇಳಿದರು.
ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ 11 ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಆರೋಗ್ಯವಂತ ದೇಹವು ಎಷ್ಟು ಮುಖ್ಯವಾಗಿದೆಯೋ ಅಷ್ಟೇ ಆರೋಗ್ಯಯುತ ಮನಸ್ಸು ಮುಖ್ಯವಾಗಿದೆ. ಪ್ರತಿಯೊಬ್ಬರೂ ಯೋಗವನ್ನು ಶಿಸ್ತಿನಿಂದ ತಮ್ಮ ಜೀವನದಲ್ಲಿ ಅಳವಡಿಸಿಕೋಳ್ಳಬೇಕು. ಮನುಷ್ಯನು ದೈಹಿಕ, ಮಾನಸಿಕ, ಆಧ್ಯಾತ್ಮಿಕ ಸದೃಡತೆ ಹೊಂದಬೇಕಾದರೆ ಅದನ್ನು ಯೋಗದಿಂದ ಪಡೆಯಬಹುದು. ಬ್ರಾಹ್ಮಿಮೂಹರ್ತದಲ್ಲಿ ಯೋಗವನ್ನು ಯೋಗಾಭ್ಯಾಸ ಮಾಡುವುದರಿಂದ ಯೋಗವು ದೈಹಿಕ ಮತೆಯನ್ನು ಹಚ್ಚಿಸುತ್ತದೆ ಮತ್ತು ಆರೋಗ್ಯಯುತ ಜೀವನ ಶೈಲಿಗೆ ನಡೆಸಬಹುದು ಎಂದರು.
ಯೋಗವು ಕೇವಲ ದೈಹಿಕ ವ್ಯಾಯಾಮವಲ್ಲ. ಮನಸ್ಸು ಮತ್ತು ದೇಹ ಸಾಮರಸ್ಯವನ್ನು ಸಾಧಿಸುವ ಒಂದು ಜೀವನ ಕಲೆ. ಇದು ವಿದ್ಯಾಥಿರ್ಗಳಲ್ಲಿ ಏಕಾಗ್ರತೆ, ಆತ್ಮವಿಶ್ವಾಸ ಮತ್ತು ಆರೋಗ್ಯಕರ ಜೀವನ ಶೈಲಿಯನ್ನು ಬೆಳೆಸುತ್ತದೆ. ಯೋಗವು ಒತ್ತಡವನ್ನು ಕಡಿಮೆ ಮಾಡುವುದರ ಜೊತೆಗೆ, ಜೀವನದಲ್ಲಿ ಶಿಸ್ತು ಮತ್ತು ಸಂಯಮವನ್ನು ತರುವಲ್ಲಿ ಪ್ರಮುಖ ಪಾತ್ರವಹಿಸುತ್ತದೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಹೇಳಿದರು.
ಜಿಲ್ಲಾ ಆಯುಷ್ಯ ಇಲಾಖೆ ಅಧಿಕಾರಿ ಡಾ. ಜಯಪಾಲಸಿಂಗ ಸಮೋರೆಕರ ಮಾತನಾಡಿ, ಯೋಗವು ಭಾರತದ ಪ್ರಾಚಿನ ಸಂಸತಿಯ ಅಮೂಲ್ಯ ಕೊಡುಗೆ. ಇದನ್ನು ಜಗತ್ತಿಗೆ ಪರಿಚಯಿಸಿದ ಕೀತಿರ್ ಭಾರತಕ್ಕೆ ಸಲ್ಲುತ್ತದೆ. ಯೋಗದ ಮೂಲಕ ಆರೋಗ್ಯಕರ ಜೀವನ ಶೈಲಿಯನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಡಾ. ಅಶೋಕ ಮತ್ತಿಕಟ್ಟಿ ಯೋಗ ಪ್ರಾರ್ಥನೆ ನಡೆಸಿಕೊಟ್ಟರು. ಡಾ. ಸತೀಶ ಹೊಂಬಾಳಿ, ಯೋಗಾಸನ ಮತ್ತು ಪ್ರಾಣಾಯಾಮ ನಡೆಸಿಕೊಟ್ಟರು. ಬ್ರಹ್ಮಕುಮಾರಿ ಈಶ್ವರಿಯ ವಿಶ್ವ ವಿದ್ಯಾಲಯದ ಜಯಂತಿ ಅಕ್ಕ ಅವರು ಧ್ಯಾನ, ಸಂಕಲ್ಪ ಮತ್ತು ಶಾಂತಿಮಂತ್ರ ನಡೆಸಿಕೊಟ್ಟರು. ಇದೇ ಸಂದರ್ಭದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ ನಿಮಿತ್ಯ ಶಾಲಾ ಮಟ್ಟದಲ್ಲಿ ಏರ್ಪಡಿಸಲಾಗಿದ್ದ ರಸಪ್ರಶ್ನೆ ಹಾಗೂ ಪ್ರಬಂಧ ಸ್ಪರ್ಧೆಯಲ್ಲಿನ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಶಾಲಾ ವಿದ್ಯಾಥಿರ್ಗಳು, ಯೋಗಾಸಕರು, ವಿವಿಧ ಇಲಾಖೆ ಅ-ಧಿಕಾರಿಗಳು ಯೋಗ ಶಿಕರ ಮಾರ್ಗದರ್ಶನದಲ್ಲಿ ಸೂರ್ಯ ನಮಸ್ಕಾರ, ಪ್ರಾಣಾಯಾಮ ಮತ್ತು ವಿವಿಧ ಯೋಗಾಸನಗಳನ್ನು ಪ್ರದಶಿರ್ಸಿದರು.ಯೋಗಾಸನಗಳಾದ ತಾಡಾಸನ, ವೃಾಸನ, ಭುಜಂಗಾಸನ ಮತ್ತು ಶವಾಸನ ಹಾಗೂ ವಿವಿಧ ಆಸನಗಳನ್ನು ಮಕ್ಕಳು ಸುಲಲಿತವಾಗಿ ಪ್ರದಶಿರ್ಸಿದರು,
ಜಿಪಂ ಸಿಇಓ ಭರತ್ ಎಸ್, ಡಿವೈಎಸ್ಪಿ ಮುರ್ತುಜಾ ಖಾದ್ರಿ, ಶಾಲಾ ಶಿಣ ಇಲಾಖೆಯ ಉಪನಿರ್ದೇಶಕ ಆರ್. ಎಸ್. ಬುರುಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಸ್. ಎಸ್. ನೀಲಗುಂದ, ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶರಣು ಗೋಗೇರಿ, ತಾಲೂಕು ಗ್ಯಾರಂಟಿ ಯೋಜನಾ ಸಮಿತಿ ಸದಸ್ಯ ಕೃಷ್ಣಗೌಡ ಪಾಟೀಲ, ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕೊಟ್ರೇಶ್ವರ ವಿಭೂತಿ ಇತರರು ಇದ್ದರು.